Zilla Panchayat Recruitment: ನರೇಗಾ ಯೋಜನೆ ಅಡಿ ವಿವಿಧ ಜಿಲ್ಲಾ ಪಂಚಾಯತ್​ನಲ್ಲಿ ನೇಮಕಾತಿ

ಎಸ್​ಎಸ್​ಎಲ್​ಸಿ ಮತ್ತು ಪದವೀಧರ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಈ ನೇಮಕಾತಿ ಗೆ ಸಂಬಂಧಿಸಿದ ಮಾಹಿತಿ ಈ ಕೆಳಗಿನಂತಿವೆ.

ಬೇಗ ಅರ್ಜಿ ಸಲ್ಲಿಸಿ

ಬೇಗ ಅರ್ಜಿ ಸಲ್ಲಿಸಿ

  • Share this:
    ಮಹಾತ್ಮ ಗಾಂಧಿ ನರೇಗಾ ಯೋಜನೆ ಅಡಿ ರಾಜ್ಯದ ವಿವಿಧ ಜಿಲ್ಲೆಗಳ ಪಂಚಾಯತ್​ ನಲ್ಲಿ ಹಲವು ಹುದ್ದೆಗಳಿಗೆ ಅಧಿಸೂಚನೆ ಹೊರಡಿಸಲಾಗಿದೆ. ಬಳ್ಳಾರಿ, ಚಿತ್ರದುರ್ಗ ಮತ್ತು ಬೆಳಗಾವಿ ಜಿಲ್ಲಾ ಪಂಚಾಯತ್​ಗಳಲ್ಲಿ ಈಗಾಗಲೇ ಈ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಎಸ್​ಎಸ್​ಎಲ್​ಸಿ ಮತ್ತು ಪದವೀಧರ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಈ ನೇಮಕಾತಿ ಗೆ ಸಂಬಂಧಿಸಿದ ಇತರ ಪ್ರಮುಖ ಮಾಹಿತಿಗಳಾದ ಅರ್ಜಿ ಪ್ರಕ್ರಿಯೆ, ಖಾಲಿ ಹುದ್ದೆಗಳ ಸಂಖ್ಯೆ, ವೇತನಗಳು, ಆಯ್ಕೆ ವಿಧಾನ ಇತ್ಯಾದಿಗಳ ಮಾಹಿತಿ ಈ ಕೆಳಗಿನಂತಿವೆ.

    ಬಳ್ಳಾರಿ ಜಿಲ್ಲಾ ಪಂಚಾಯತ್​ನಲ್ಲಿ (Ballari Zilla Panchayat) ಮಹಾತ್ಮ ನರೇಗಾ ಯೋಜನೆ (MGNREGA Scheme) ಅಡಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದೆ. ತಾಂತ್ರಿಕ ಸಹಾಯಕರು, ಆಡಳಿತ ಸಹಾಯಕರು ಸೇರಿದಂತೆ ಒಟ್ಟು 22 ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಜಿಲ್ಲೆಯಲ್ಲಿ ಕಾರ್ಯ ನಿರ್ವಹಿಸಲು ಇಚ್ಛಿಸುವ ವಿವಿಧ ಪದವೀಧರ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಯನ್ನು ಆನ್​ಲೈನ್​ ಮೂಲಕ ಮಾಡಬಹುದಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಸೆಪ್ಟೆಂಬರ್​ 11 ಆಗಿದೆ.

    ಈ ಹುದ್ದೆ ಕುರಿತ ಸಂಪೂರ್ಣ ವಿವರ ಪಡೆಯಲು ಈ ಲಿಂಕ್​ ಅನ್ನು ಕ್ಲಿಕ್​ ಮಾಡಿ. ಬಳ್ಳಾರಿ ಜಿಲ್ಲಾ ಪಂಚಾಯತ್​ನಲ್ಲಿ ನರೇಗಾ ಯೋಜನೆ ಅಡಿ ಖಾಲಿ ಇದೆ ವಿವಿಧ ಹುದ್ದೆ

    ಚಿತ್ರದುರ್ಗ ಜಿಲ್ಲಾ ಪಂಚಾಯತ್​ನಲ್ಲಿ (Chitradurga Zilla Panchayat)  ವಿವಿಧ ಹುದ್ದೆಗೆ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಜಿಲ್ಲೆಯಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆಯನ್ನು ಪರಿಣಾಕಾರಿಯಾಗಿ ಅನುಷ್ಟಾನಗೊಳಿಸಲು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್​ ರಾಜ್​ ಇಲಾಖೆಯಿಂದ ಈ ಹುದ್ದೆಗಳ ನೇಮಕಕ್ಕೆ ಅಧಿಸೂಚನೆ ಹೊರಡಿಸಲಾಗಿದೆ. ಡಾಟಾ ಎಂಟ್ರಿ ಸೇರಿದಂತೆ ವಿವಿಧ ಒಟ್ಟು 10 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಸೆಪ್ಟೆಂಬರ್​ 8 ಆಗಿದೆ.

    ಈ ಹುದ್ದೆ ಕುರಿತ ಸಂಪೂರ್ಣ ವಿವರ ಪಡೆಯಲು ಈ ಲಿಂಕ್​ ಅನ್ನು ಕ್ಲಿಕ್​ ಮಾಡಿ. ಚಿತ್ರದುರ್ಗ ಜಿಲ್ಲಾ ಪಂಚಾಯತ್​ನಲ್ಲಿದೆ ಉದ್ಯೋಗಾವಕಾಶ; ಪಿಯುಸಿ, ಡಿಗ್ರಿ ಆದವರಿಗೆ ಅವಕಾಶ

    ಬೆಳಗಾವಿ ಜಿಲ್ಲಾ ಪಂಚಾಯತ್​ನಿಂದ (Belagavi Zilla Panchayat)  ಬೇರ್​ ಪೂಟ್​ ತಂತ್ರಜ್ಞ (Barefoot Technician)  ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಜಿಲ್ಲಾ ಪಂಚಾಯತ್​ನ ಮಹಾತ್ಮಗಾಂಧಿ ನರೇಗಾ ಯೋಜನೆ (MGNREGA Scheme) ಅಡಿ 19 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಈ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಸೆಪ್ಟೆಂಬರ್​ 7 ಆಗಿದೆ.

    ಈ ಹುದ್ದೆ ಕುರಿತ ಸಂಪೂರ್ಣ ವಿವರ ಪಡೆಯಲು ಈ ಲಿಂಕ್​ ಅನ್ನು ಕ್ಲಿಕ್​ ಮಾಡಿ.  ಎಸ್​ಎಸ್​ಎಲ್​ಸಿ ಆದವರಿಗೆ ಭರ್ಜರಿ ಅವಕಾಶ; ಬೆಳಗಾವಿ ಜಿಲ್ಲಾ ಪಂಚಾಯತ್​ನಲ್ಲಿದೆ ಕೆಲಸ

    ಈ ಮೇಲಿನ ಹುದ್ದೆಗಳಿಗೆ ಆಯಾ ಜಿಲ್ಲೆಯ ಅಧಿಕೃತ ವೆಬ್​ಸೈಟ್​ ಮೂಲಕ ಅರ್ಹ ಮತ್ತು ಸೂಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
    Published by:Seema R
    First published: