Jobs in Belagavi ZP Office: ಎಸ್​ಎಸ್​ಎಲ್​ಸಿ ಆದವರಿಗೆ ಭರ್ಜರಿ ಅವಕಾಶ; ಬೆಳಗಾವಿ ಜಿಲ್ಲಾ ಪಂಚಾಯತ್​ನಲ್ಲಿದೆ ಕೆಲಸ

ಅಥಣಿ, ಬೆಳಗಾವಿ, ಗೋಕಾಕ, ಹುಕ್ಕೇರಿ, ಕಾಗವಾಡ, ಖಾನಪುರ, ಮೂಡಲಿಗಿ, ನಿಪ್ಪಾಣ ಮತ್ತು ರಾಯಬಾಗದಲ್ಲಿ ಈ ಹುದ್ದೆಗಳ ಭರ್ತಿ ನಡೆಯಲಿದೆ. ಈ ಹುದ್ದೆಯೂ ಸಂಪೂರ್ಣವಾಗಿ ತಾತ್ಕಾಲಿಕವಾಗಿದೆ. 

ಬೇಗ ಅರ್ಜಿ ಸಲ್ಲಿಸಿ

ಬೇಗ ಅರ್ಜಿ ಸಲ್ಲಿಸಿ

  • Share this:
    ಬೆಳಗಾವಿ ಜಿಲ್ಲಾ ಪಂಚಾಯತ್​ನಿಂದ (Belagavi Zilla Panchayat)  ಬೇರ್​ ಪೂಟ್​ ತಂತ್ರಜ್ಞ (Barefoot Technician)  ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಜಿಲ್ಲಾ ಪಂಚಾಯತ್​ನ ಮಹಾತ್ಮಗಾಂಧಿ ನರೇಗಾ ಯೋಜನೆ (MGNREGA Scheme) ಅಡಿ 19 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಈ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಸೆಪ್ಟೆಂಬರ್​ 7 ಆಗಿದೆ.

    ಅಥಣಿ, ಬೆಳಗಾವಿ, ಗೋಕಾಕ, ಹುಕ್ಕೇರಿ, ಕಾಗವಾಡ, ಖಾನಪುರ, ಮೂಡಲಿಗಿ, ನಿಪ್ಪಾಣ ಮತ್ತು ರಾಯಬಾಗದಲ್ಲಿ ಈ ಹುದ್ದೆಗಳ ಭರ್ತಿ ನಡೆಯಲಿದೆ. ಈ ಹುದ್ದೆಯೂ ಸಂಪೂರ್ಣವಾಗಿ ತಾತ್ಕಾಲಿಕವಾಗಿದೆ. ಈ ನೇಮಕಾತಿ ಗೆ ಸಂಬಂಧಿಸಿದ ಇತರ ಪ್ರಮುಖ ಮಾಹಿತಿಗಳಾದ ಅರ್ಜಿ ಪ್ರಕ್ರಿಯೆ, ಖಾಲಿ ಹುದ್ದೆಗಳ ಸಂಖ್ಯೆ, ವೇತನಗಳು, ಆಯ್ಕೆ ವಿಧಾನ ಇತ್ಯಾದಿಗಳ ಮಾಹಿತಿ ಈ ಕೆಳಗಿನಂತಿವೆ.

    ಸಂಸ್ಥೆಯ ಹೆಸರು: ಬೆಳಗಾವಿ ಜಿಲ್ಲಾ ಪಂಚಾಯತ್ (ಬೆಳಗಾವಿ ಜಿಲ್ಲಾ ಪಂಚಾಯತ್)
    ಹುದ್ದೆಯ ಹೆಸರು: ಬೇರ್​ಫೂಟ್​​ ತಂತ್ರಜ್ಞ (BFT)
    ಹುದ್ದೆಗಳ ಸಂಖ್ಯೆ: 19
    ಉದ್ಯೋಗ ಸ್ಥಳ: ಬೆಳಗಾವಿ
    ವೇತನ: 15000 ರೂ. ಪ್ರತಿ ತಿಂಗಳು











































    ಹುದ್ದೆಹುದ್ದೆ ಸಂಖ್ಯೆ
    ಅಥಣಿ2
    ಬೆಳಗಾವಿ3
    ಗೋಕಾಕ್2
    ಹುಕ್ಕೇರಿ1
    ಕಾಗವಾಡ2
    ಖಾನಾಪುರ4
    ಮೂಡಲಗಿ1
    ನಿಪ್ಪಾಣಿ1
    ರಾಯಬಾಗ3

    ಶೈಕ್ಷಣಿಕ ಅರ್ಹತೆ: ಬೆಳಗಾವಿ ಜಿಲ್ಲಾ ಪಂಚಾಯತ್ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾನಿಲಯಗಳಿಂದ 10ನೇ ತರಗತಿಯನ್ನು ಪೂರ್ಣಗೊಳಿಸಿರಬೇಕು.

    ಇದನ್ನು ಓದಿ: ಕೆನರಾ ಬ್ಯಾಂಕ್​ನಲ್ಲಿ ಹುದ್ದೆಗೆ ಅರ್ಜಿ ಆಹ್ವಾನ; ಬೆಂಗಳೂರಿನಲ್ಲಿ ಕೆಲಸ

    ವಯೋಮಿತಿ: ಬೆಳಗಾವಿ ಜಿಲ್ಲಾ ಪಂಚಾಯತ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಗರಿಷ್ಠ ವಯಸ್ಸು 45 ವರ್ಷಕ್ಕಿಂತ ಕಡಿಮೆಯಿರಬೇಕು.

    ವಿಶೇಷ ಸೂಚನೆ:
    ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ನರೇಗಾ ಯೋಜನೆ ಸಕ್ರಿಯವಾಗಿ ಭಾಗಿಯಾಗಿರಬೇಕು. ಅಥವಾ ಕಳೆದೆರಡು ವರ್ಷಗಳಲ್ಲಿ ಅಂದರೆ, 2019ರಿಂದ 2022ರೊಳಗೆ ನರೇಗಾ ಯೋಜನೆ ಅಡಿ ಕನಿಷ್ಠ 25 ದಿನಗಳ ಕಾಲ ಕಾರ್ಯ ನಿರ್ವಹಿಸಿರಬೇಕು.

    ವಯೋಮಿತಿ ಸಡಿಲಿಕೆ:
    ಬೆಳಗಾವಿ ಜಿಲ್ಲಾ ಪಂಚಾಯತ್ ನಿಯಮಗಳ ಪ್ರಕಾರ

    ಆಯ್ಕೆ ಪ್ರಕ್ರಿಯೆ: ಸಂದರ್ಶನ

    ಇದನ್ನು ಓದಿ: ಉಡುಪಿ ಕೋರ್ಟ್​ನಲ್ಲಿದೆ ಟೈಪಿಸ್ಟ್​ ಹುದ್ದೆ; ತಿಂಗಳಿಗೆ 42000ದವರೆಗೆ ವೇತನ

    ಅರ್ಜಿ ಶುಲ್ಕ:
    ಅರ್ಜಿ ಶುಲ್ಕ ವಿನಾಯಿತಿ ನೀಡಲಾಗಿದೆ.

    ಪ್ರಮುಖ ದಿನಾಂಕಗಳು:
    ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 24 ಆಗಸ್ಟ್​ 2022
    ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 07 ಸೆಪ್ಟೆಂಬರ್​ 2022
    ಮೂಲ ದಾಖಲೆಗಳ ಪರಿಶೀಲನೆಯ ದಿನಾಂಕ: 19 ಸೆಪ್ಟೆಂಬರ್​ 2022 ಬೆಳಗ್ಗೆ 11ಕ್ಕೆ

    ಅಧಿಸೂಚನೆ ಪ್ರಮುಖ ಲಿಂಕ್‌ಗಳು
    ಅಧಿಕೃತ ಅಧಿಸೂಚನೆ ಮತ್ತು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿ: ಇಲ್ಲಿ ಕ್ಲಿಕ್ ಮಾಡಿ
    ಅಧಿಕೃತ ವೆಬ್‌ಸೈಟ್: zpbelagavi.kar.nic.in

    ಅರ್ಜಿ ಸಲ್ಲಿಕೆ ಪ್ರಕ್ರಿಯೆ

    ಅಧಿಸೂಚನೆ 2022 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಂಡು ಮುಂದುವರೆಯಿರಿ.

    -ಅಧಿಕೃತ ಅಧಿಸೂಚನೆಯಿಂದ ಅರ್ಜಿ ನಮೂನೆಯಲ್ಲಿ ಫಾರ್ಮ್ ಅನ್ನು ಭರ್ತಿ ಮಾಡಿ

    - ಅರ್ಜಿಯಲ್ಲಿ ಸಂವಹನ ಉದ್ದೇಶಕ್ಕಾಗಿ ದಯವಿಟ್ಟು ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆ ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ಇತ್ತೀಚಿನ ಫೋಟೋಗ್ರಾಫ್, ಸೇರಿದಂತೆ ಇನ್ನಿತರ ಅಗತ್ಯ ದಾಖಲೆಗಳ ಮಾಹಿತಿ ಭರ್ತಿ ಮಾಡಿ.

    -ಎಲ್ಲಾ ಮಾಹಿತಿಯನ್ನು ಪೂರ್ಣಗೊಳಿಸಿದ ನಂತರ, ಒದಗಿಸಿದ ವಿವರಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿ. ಬಳಿಕ ಸಲ್ಲಿಸು ಬಟನ್​ ಕ್ಲಿಕ್​ ಮಾಡಿ
    Published by:Seema R
    First published: