• ಹೋಂ
  • »
  • ನ್ಯೂಸ್
  • »
  • Jobs
  • »
  • Ballari DC Office Recruitment: ಜಿಲ್ಲಾಧಿಕಾರಿ ಕಚೇರಿಯಲ್ಲಿ ಟೆಕ್ನಿಕಲ್ ಪ್ರೋಗ್ರಾಮರ್​​ ಹುದ್ದೆಗೆ ಅರ್ಜಿ ಆಹ್ವಾನ

Ballari DC Office Recruitment: ಜಿಲ್ಲಾಧಿಕಾರಿ ಕಚೇರಿಯಲ್ಲಿ ಟೆಕ್ನಿಕಲ್ ಪ್ರೋಗ್ರಾಮರ್​​ ಹುದ್ದೆಗೆ ಅರ್ಜಿ ಆಹ್ವಾನ

ಬಳ್ಳಾರಿ ಜಿಲ್ಲಾಧಿಕಾರಿ ಕಚೇರಿ

ಬಳ್ಳಾರಿ ಜಿಲ್ಲಾಧಿಕಾರಿ ಕಚೇರಿ

ಈ ನೇಮಕಾತಿಗೆ ಸಂಬಂಧಿಸಿದ ಇತರ ಪ್ರಮುಖ ಮಾಹಿತಿಗಳಾದ ಅರ್ಜಿ ಪ್ರಕ್ರಿಯೆ, ಖಾಲಿ ಹುದ್ದೆಗಳ ಸಂಖ್ಯೆ, ವೇತನಗಳು, ಆಯ್ಕೆ ವಿಧಾನ ಇತ್ಯಾದಿಗಳ ಮಾಹಿತಿ ಈ ಕೆಳಗಿನಂತಿವೆ.

  • Share this:

ಬಳ್ಳಾರಿ ಜಿಲ್ಲಾಧಿಕಾರಿ ಕಚೇರಿಯ (Ballari DC Office) ಚುನಾವಣಾ ಶಾಖೆಯಲ್ಲಿ ಖಾಲಿ ಇರುವ ವಿವಿಧ ತಾಂತ್ರಿಕ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ತಾಂತ್ರಿಕ ಪ್ರೋಗ್ರಾಮರ್​ ಪೋಸ್ಟ್​​ಗಳ ಕಾರ್ಯ ನಿರ್ವಹಣೆಗೆ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಸೇವೆ ಸಲ್ಲಿಸಲು ಅರ್ಜಿ ಸಲ್ಲಿಸಬಹುದಾಗಿದೆ. ಆನ್​​​​ಲೈನ್​ ಮೂಲಕ ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಸ್ಥಳೀಯರಿಗೆ ಆದ್ಯತೆ ಆಗಿದೆ. ಅರ್ಜಿಯನ್ನು ಮೇ 29ರೊಳಗೆ ಅರ್ಹ ಮತ್ತು ಅಸಕ್ತ ಅಭ್ಯರ್ಥಿಗಳು ಸಲ್ಲಿಸಬಹುದಾಗಿದೆ.


ಈ ನೇಮಕಾತಿಗೆ ಸಂಬಂಧಿಸಿದ ಇತರ ಪ್ರಮುಖ ಮಾಹಿತಿಗಳಾದ ಅರ್ಜಿ ಪ್ರಕ್ರಿಯೆ, ಖಾಲಿ ಹುದ್ದೆಗಳ ಸಂಖ್ಯೆ, ವೇತನಗಳು, ಆಯ್ಕೆ ವಿಧಾನ ಇತ್ಯಾದಿಗಳ ಮಾಹಿತಿ ಈ ಕೆಳಗಿನಂತಿವೆ.

ಹುದ್ದೆ ಮಾಹಿತಿವಿವರ
ಹುದ್ದೆಟೆಕ್ನಿಕಲ್ ಪ್ರೋಗ್ರಾಮರ್​​
ಉದ್ಯೋಗ ಸ್ಥಳಬಳ್ಳಾರಿ
ವೇತನಬಳ್ಳಾರಿ ಜಿಲ್ಲಾಧಿಕಾರಿ ನಿಯಮಗಳ ಪ್ರಕಾರ

ಶೈಕ್ಷಣಿಕ ಅರ್ಹತೆ: ಅಭ್ಯರ್ಥಿಯು ಬಿಇ ಅಥವಾ ಬಿಟೆಕ್​, ಎಂಸಿಎ ಅನ್ನು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಪೂರ್ಣಗೊಳಿಸಿರಬೇಕು.


ಅಭ್ಯರ್ಥಿಗಳು ERMS, ERO ನೆಟ್ ಮುಂತಾದ ವಿತರಿಸಿದ ಡೇಟಾ ಸಿಸ್ಟಮ್ ಅಪ್ಲಿಕೇಶನ್‌ಗಳನ್ನು ನಿರ್ವಹಿಸುವಲ್ಲಿ ಕನಿಷ್ಠ 1 ವರ್ಷಗಳ ಅನುಭವವನ್ನು ಹೊಂದಿರಬೇಕು.


ಇಂಗ್ಲಿಷ್​ ಮತ್ತು ಕನ್ನಡವನ್ನು ಚೆನ್ನಾಗಿ ಓದಲು ಮತ್ತು ಬರೆಯಲು ತಿಳಿದಿರಬೇಕು.


ವಯೋಮಿತಿ: ಬಳ್ಳಾರಿ ಜಿಲ್ಲಾಧಿಕಾರಿ ನೇಮಕಾತಿ ನಿಯಮಗಳ ಪ್ರಕಾರ ವಯಸ್ಸಿನ ಮಿತಿಯನ್ನು ಹೊಂದಿರಬೇಕು.


ಆಯ್ಕೆ ಪ್ರಕ್ರಿಯೆ
ಲಿಖಿತ ಪರೀಕ್ಷೆ ಮತ್ತು ಸಂದರ್ಶನ


ಅರ್ಜಿ ಸಲ್ಲಿಕೆ
ಅರ್ಹ ಅಭ್ಯರ್ಥಿಗಳು ತಮ್ಮ ಅರ್ಜಿಯನ್ನು ನಿಗದಿತ ನಮೂನೆಯಲ್ಲಿ ಇ-ಮೇಲ್ ಐಡಿ, deo.bellary@gmail.com ಗೆ ಮೇ 29ರೊಳಗೆ ಸಲ್ಲಿಸಬಹುದು.


ಪ್ರಮುಖ ಸೂಚನೆ
ಅಧಿಕೃತ ಅಧಿಸೂಚನೆ ಮತ್ತು ಅರ್ಜಿ ವೀಕ್ಷಣೆಗೆ: ಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ವೆಬ್‌ಸೈಟ್: ballari.nic.in


ಇದನ್ನು ಓದಿ: ಬಳ್ಳಾರಿ ಗ್ರಾಮ ಪಂಚಾಯತ್​ನಲ್ಲಿ ನೇಮಕಾತಿ; ಇಲ್ಲಿದೆ ಸಂಪೂರ್ಣ ಮಾಹಿತಿ


ವಿಶೇಷ ಸೂಚನೆ:
ಈಗಾಗಲೇ ಜಿಲ್ಲಾಧಿಕಾರಿ ಕಚೇರಿಯಲ್ಲಿ ತಾಂತ್ರಿಕ ಪ್ರೋಗಾಮರ್ ಹುದ್ದೆಯಲ್ಲಿ ಕಾರ್ಯ ನಿರ್ವಹಿಸಿದ ಅಭ್ಯರ್ಥಿಗಳಿಗೆ ಆದ್ಯತೆ.


ಅರ್ಜಿ ಸಲ್ಲಿಕೆ ಪ್ರಕ್ರಿಯೆ
ಈ ಹುದ್ದೆಗೆ ಅರ್ಜಿ ಸಲ್ಲಿಸಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಸಂಸ್ಥೆ ಹೊರಡಿಸಿರುವ ಅಧಿಸೂಚನೆ ಮತ್ತು ಅರ್ಹತಾ ಮಾನದಂಡವನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಳ್ಳಿ.


-ಅಧಿಸೂಚನೆಯಲ್ಲಿ ನೀಡಿರುವ ನಿಗದಿತ ಅರ್ಜಿಯನ್ನು ಸರಿಯಾಗಿ ಭರ್ತಿ ಮಾಡಬೇಕಿದೆ.
-ಭರ್ತಿ ಮಾಡಿದ ಅರ್ಜಿಯನ್ನು ಮೇಲೆ ತಿಳಿಸಿದ ಇ ಮೇಲ್​ ಐಡಿಗೆ ಕಳುಹಿಸಬೇಕು

top videos
    First published: