Bengaluru Job Alert: 10ನೇ ತರಗತಿ ಆಗಿದ್ರೆ CredRನಲ್ಲಿದೆ ಕೆಲಸ; ಹುದ್ದೆ ಸಂಪೂರ್ಣ ಮಾಹಿತಿ ಇಲ್ಲಿದೆ

ಆಟೋಮೊಬೈಲ್​ ಸರ್ವಿಸ್​ನಲ್ಲಿ ಅನುಭವ ಹೊಂದಿರುವ ಅಭ್ಯರ್ಥಿಗಳು ಈ ಹುದ್ದೆ ಅರ್ಜಿ ಸಲ್ಲಿಸಬಹುದಾಗಿದೆ. ಈಗಾಗಲೇ ಮೆಕಾನಿಕ್​ ಆಗಿ ಕೆಲಸ ನಿರ್ವಹಿಸಿದವರಿಗೆ ಆದ್ಯತೆ ನೀಡಲಾಗುವುದು

ಬೇಗ ಅರ್ಜಿ ಸಲ್ಲಿಸಿ

ಬೇಗ ಅರ್ಜಿ ಸಲ್ಲಿಸಿ

  • Share this:
    ದ್ವಿ ಚಕ್ರ ವಾಹನಗಳ ಮಾರಾಟ, ಖರೀದಿಗೆ ಅತ್ಯಂತ ಜನಪ್ರಿಯ ಸಂಸ್ಥೆ ಕ್ರೇಡ್​ಆರ್ (CredR). ಸಾಮಾನ್ಯ ಜನರ ಬಜೆಟ್​ಗೆ ಅನುಸಾರವಾಗಿ ಉತ್ಕೃಷ್ಟ ಗುಣಮಟ್ಟದ ಬೈಕ್​, ಸ್ಕೂಟರ್​ಗಳನ್ನು ಗ್ರಾಹಕರು ಈ ಸಂಸ್ಥೆ ಮೂಲಕ ಪಡೆಯಬಹುದಾಗಿದೆ. ಬೆಂಗಳೂರಿಗರ ಜನಪ್ರಿಯ ಸೇವಾ ಸಂಸ್ಥೆಯಾಗಿರುವ ಕ್ರೇಡರ್​ ನಲ್ಲಿ ವಿವಿಧ ಹುದ್ದೆಗಳ ನೇಮಕಾತಿಗೆ (Job Recruitment) ಅರ್ಜಿ ಆಹ್ವಾನಿಸಲಾಗಿದೆ. ಆಟೋ ಮೊಬೈಲ್​ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಎಸ್​ಎಸ್​ಎಲ್​ಸಿ (SSLC) ಮುಗಿಸಿ ಕೆಲಸದ ಹುಡುಕಾಟದಲ್ಲಿ ತೊಡಗಿದ್ದರೆ ಇದು ಉತ್ತಮ ಅವಕಾಶ ಆಗಿದೆ.

    ಆಟೋಮೊಬೈಲ್​​​ ಸರ್ವಿಸ್​ನಲ್ಲಿ ಅನುಭವ ಹೊಂದಿರುವ ಅಭ್ಯರ್ಥಿಗಳು ಈ ಹುದ್ದೆ ಅರ್ಜಿ ಸಲ್ಲಿಸಬಹುದಾಗಿದೆ. ಈಗಾಗಲೇ ಮೆಕಾನಿಕ್​ ಆಗಿ ಕೆಲಸ ನಿರ್ವಹಿಸಿದವರಿಗೆ ಆದ್ಯತೆ ನೀಡಲಾಗುವುದು. ಈ ನೇಮಕಾತಿಗೆ ಸಂಬಂಧಿಸಿದ ಇತರ ಪ್ರಮುಖ ಮಾಹಿತಿಗಳಾದ ಅರ್ಜಿ ಪ್ರಕ್ರಿಯೆ, ಖಾಲಿ ಹುದ್ದೆಗಳ ಸಂಖ್ಯೆ, ವೇತನಗಳು, ಆಯ್ಕೆ ವಿಧಾನ ಇತ್ಯಾದಿಗಳ ಮಾಹಿತಿ ಈ ಕೆಳಗಿನಂತಿವೆ.



























    ಹುದ್ದೆ ಮಾಹಿತಿಹುದ್ದೆ ವಿವರ
    ಸಂಸ್ಥೆCredR
    ಹುದ್ದೆಆಟೋ ಎಕ್ಸ್​ಪರ್ಟ್​ (ಮೆಕಾನಿಕ್​)
    ಒಟ್ಟು ಹುದ್ದೆನಿಗದಿಪಡಿಸಿಲ್ಲ
    ಕಾರ್ಯ ನಿರ್ವಹಣೆ ಸ್ಥಳಬೆಂಗಳೂರು
    ವೇತನಕಂಪನಿಯ ನಿಯಮ ಅನುಸಾರ

    ಶೈಕ್ಷಣಿಕ ಅರ್ಹತೆ: ಅಭ್ಯರ್ಥಿಯು 10 ನೇ ತರಗತಿ ಪಾಸ್​ ಆಗಿರಬೇಕು.

    ಅನುಭವ: ಮೆಕಾನಿಕ್​ ಆಗಿ ಅಥವಾ ಮೋಟರ್​ ಸೈಕಲ್​ ಸರ್ವೀಸ್​ನಲ್ಲಿ ಕನಿಷ್ಠ 2 ವರ್ಷದ ಅನುಭವ ಹೊಂದಿರಬೇಕು.
    ವಾಹನದ ಸಮಸ್ಯೆಗಳ ಬಗ್ಗೆ ಅರಿವಿದ್ದು, ಅವುಗಳನ್ನು ನಿರ್ವಹಿಸುವ ಸಾಮರ್ಥ್ಯವನ್ನು ಹೊಂದಿರಬೇಕು.
    ಗ್ರಾಹಕರೊಂದಿಗೆ ಉತ್ತಮ ಸಂವಹನ ಕೌಶಲ್ಯ ಹೊಂದಿರಬೇಕು.

    ಅರ್ಜಿ ಸಲ್ಲಿಕೆ ವಿಧಾನ:  ಇಮೇಲ್​ ಮುಖಾಂತರ

    ಇಮೇಲ್​ ವಿಳಾಸ: hr@credr.com.

    ಅಧಿಕೃತ ವೆಬ್​ಸೈಟ್​: credr.com

    ಹುದ್ದೆಯ ಜವಾಬ್ದಾರಿ (Jobs Roles And Responsibility)
    ಮೋಟಾರ್​ ಸೈಕಲ್​​ ನಿರ್ವಹಣಾ ಕಾರ್ಯಗಳನ್ನು ನಿರ್ವಹಿಸಬೇಕು
    ಇಂಜಿನ್​ಗಳ ವ್ಯವಸ್ಥೆಗಳ ದುರಸ್ತಿ ಮಾಡುವ ಅನುಭವ ಇರಬೇಕು.
    ಸೇವಾ ಕೇಂದ್ರಗಳ ನಡುವೆ ಸಮನ್ವಯವನ್ನು ನಡೆಸಬೇಕು.

    ಇದನ್ನು ಓದಿ: ಎಸ್​ಇಒ ಎಕ್ಸ್​ಪರ್ಟ್​ ನೀವಾದ್ರೆ ಬೌನ್ಸ್​ನಲ್ಲಿದೆ ಕೆಲಸ; ಇಲ್ಲಿದೆ ವೇತನ ಸೇರಿದಂತೆ ಸಂಪೂರ್ಣ ಮಾಹಿತಿ

    ವಿಶೇಷ ಸೂಚನೆ (Special Instruction)
    ಮೇಲ್ಕಂಡ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರ್ಜಿಯಲ್ಲಿ ಹುದ್ದೆ ಹೆಸರು- ಸ್ಥಳದ ಹೆಸರಿನ ಬಗ್ಗೆ ಸ್ಪಷ್ಟವಾಗಿ ನಮೂದಿಸಿ, ನವೀಕರಿಸಿ ರೆಸ್ಯೂಮ್​ ಅನ್ನು ಮೇಲಿನ ಇಮೇಲ್​ ವಿಳಾಸಕ್ಕೆ ಸಲ್ಲಿಸಬೇಕು

    ಅರ್ಜಿ ಸಲ್ಲಿಕೆ ವಿಧಾನ (How To Apply)

    ಕಂಪನಿಯ ನೇಮಕಾತಿ ಅಧಿಸೂಚನೆ ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಳ್ಳಿ.

    ರೆಸ್ಯೂಮೆ ಜೊತೆ ದಯವಿಟ್ಟು ಸಂವಹನ ಉದ್ದೇಶಕ್ಕಾಗಿ ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು, ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ಯಾವುದೇ ಅನುಭವಗಳನ್ನು ಅರ್ಜಿ ಜೊತೆ ಲಗತ್ತಿಸಿ.

    ಎಲ್ಲಾ ಮಾಹಿತಿಯನ್ನು ಪೂರ್ಣಗೊಳಿಸಿದ ನಂತರ, ಒದಗಿಸಿದ ವಿವರಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿ. ನಂತರ ಮೇಲಿನ ಇಮೇಲ್​ ವಿಳಾಸಕ್ಕೆ ನಿಗದಿತ ದಿನಾಂಕದ ಮುನ್ನ ಕಳುಹಿಸಬೇಕು.
    Published by:Seema R
    First published: