Government Job: SSLC ಆಗಿದ್ರೆ ಇಲ್ಲಿದೆ ಅವಕಾಶ - ಗ್ರಂಥಾಲಯ ಮೇಲ್ವಿಚಾರಕರ ಹುದ್ದೆಗೆ ಅರ್ಜಿ ಹಾಕಿ

Job News: ಆರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಸಂಬಂಧಪಟ್ಟ ಆಯಾ ಗ್ರಾಮ ಪಂಚಾಯತ್ ಮತ್ತು ಪಟ್ಟಣ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಗೆ ಕಳುಹಿಸಬೇಕು.

ಗ್ರಂಥಾಲಯ ಮೇಲ್ವಿಚಾರಕರ ಹುದ್ದೆಗೆ ಅರ್ಜಿ ಹಾಕಿ

ಗ್ರಂಥಾಲಯ ಮೇಲ್ವಿಚಾರಕರ ಹುದ್ದೆಗೆ ಅರ್ಜಿ ಹಾಕಿ

  • Share this:
ಬಾಲಕೋಟೆ (Bagalkote) ಮತ್ತು ಬೆಂಗಳೂರು ಗ್ರಾಮಾಂತರ (Bengaluru Rural)  ಜಿಲ್ಲೆಗಳ ಗ್ರಾಮ ಪಂಚಾಯತ್ (Gram Panchayat) ಮತ್ತು ಪಟ್ಟಣ ಪಂಚಾಯತ್ ಗ್ರಂಥಾಲಯಗಳಲ್ಲಿ ಖಾಲಿ ಇರುವ ಗ್ರಂಥಾಲಯ ಮೇಲ್ವಿಚಾರಕರ ಹುದ್ದೆಗಳ ಭರ್ತಿಗೆ ಆದೇಸ ನೀಡಲಾಗಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಇನ್ನು ಬಾಗಲಕೋಟೆಯಲ್ಲಿ ಹುದ್ದೆಗೆ ಅರ್ಜಿ ಸಲ್ಲಿಸಲು ಮಾರ್ಚ್ 30 ಕೊನೆಯ ದಿನವಾಗಿದ್ದು, ಬೆಂಗಳೂರು ಗ್ರಾಮಾಂತರದಲ್ಲಿ ಸಲ್ಲಿಸಲು ಏಪ್ರಿಲ್ 6ರ ವರೆಗೆ ಸಮಯವಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನ, ವೇತನ, ಅರ್ಜಿ ಸಲ್ಲಿಸುವ ವಿಧಾನ ಸೇರಿದಂತೆ ಹೆಚ್ಚಿನ ಮಾಹಿತಿಯನ್ನು  ನಾವಿಲ್ಲಿ ನೀಡಿದ್ದೇವೆ.ಇಲಾಖೆಬೆಂಗಳೂರು ಗ್ರಾಮಾಂತರ, ಬಾಗಲಕೋಟೆ ಜಿಲ್ಲೆಯ ಪಟ್ಟಣ ಪಂಚಾಯತ್ ಮತ್ತು ಗ್ರಾಮ ಪಂಚಾಯತ್
ಹುದ್ದೆಗ್ರಂಥಾಲಯ ಮೇಲ್ವಿಚಾರಕರು
ಅರ್ಜಿ ಸಲ್ಲಿಸುವ ವಿಧಾನಆಫ್​ಲೈನ್
ವೇತನನಿಯಮಾನುಸಾರ
ಶೈಕ್ಷಣಿಕ ಅರ್ಹತೆSSLC ಪೂರ್ಣಗೊಳಿಸಿರಬೇಕು.
ವಯೋಮಿತಿಕನಿಷ್ಠ 18 ವರ್ಷ
ಉದ್ಯೋಗ ಸ್ಥಳಬಾಗಲಕೋಟೆ ಜಿಲ್ಲೆಯ ಬೀಳಗಿ ತಾಲ್ಲೂಕಿನ ಸಿದ್ದಾಪುರ ಗ್ರಾಮಪಂಚಾಯತ್ ಗ್ರಂಥಾಲಯ,  ಮುಧೋಳ ತಾಲ್ಲೂಕಿನ ಲೋಕಾಪುರ ಪಟ್ಟಣ ಪಂಚಾಯತ್ ಗ್ರಂಥಾಲಯ, ಬಾದಾಮಿ ತಾಲ್ಲೂಕಿನ ನೀರಲಕೇರಿ
ಉದ್ಯೋಗ ಸ್ಥಳಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ಶಿವನಾಪುರ ಗ್ರಾಮ ಪಂಚಾಯತ್, ಕಂಬಳೀಪುರ ಗ್ರಾಮ ಪಂಚಾಯತ್, ದೇವನಹಳ್ಳಿ ತಾಲ್ಲೂಕಿನ ಜಾಲಿಗೆ ಗ್ರಾಮ ಪಂಚಾಯತ್​ ಗ್ರಂಥಾಲಯ
ಅರ್ಜಿ ಸಲ್ಲಿಸಲು ಕೊನೆಯ ದಿನ (ಬಾಗಲಕೋಟೆ)ಮಾರ್ಚ್ 30
ಅರ್ಜಿ ಸಲ್ಲಿಸಲು ಕೊನೆಯ ದಿನ (ಬೆಂಗಳೂರು ಗ್ರಾಮಾಂತರ)ಏಪ್ರಿಲ್ 6

ಬಾಲಕೋಟೆ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ಗ್ರಾಮ ಪಂಚಾಯತ್ ಮತ್ತು ಪಟ್ಟಣ ಪಂಚಾಯತ್ ಗ್ರಂಥಾಲಯಗಳಲ್ಲಿ ಖಾಲಿ ಇರುವ ಗ್ರಂಥಾಲಯ ಮೇಲ್ವಿಚಾರಕರ ಹುದ್ದೆಗಳ ಭರ್ತಿಗೆ ಆದೇಶ ನೀಡಲಾಗಿದ್ದು, ಎಸ್​ಎಸ್​ಎಲ್​ಸಿ ಪೂರ್ಣಗೊಳಿಸಿರುವ 18 ವರ್ಷ ಒಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ನಿಯಮದ ಪ್ರಕಾರ ಉತ್ತಮ ವೇತನ ನೀಡಲಾಗುತ್ತದೆ.

ಇಲಾಖೆ: ಬೆಂಗಳೂರು ಗ್ರಾಮಾಂತರ, ಬಾಗಲಕೋಟೆ ಜಿಲ್ಲೆಯ ಪಟ್ಟಣ ಪಂಚಾಯತ್ ಮತ್ತು ಗ್ರಾಮ ಪಂಚಾಯತ್

ಹುದ್ದೆ: ಗ್ರಂಥಾಲಯ ಮೇಲ್ವಿಚಾರಕರು

ಅರ್ಜಿ ಸಲ್ಲಿಸುವ ವಿಧಾನ: ಆಫ್​ಲೈನ್

ವೇತನ: ನಿಯಮಾನುಸಾರ

ಶೈಕ್ಷಣಿಕ ಅರ್ಹತೆ

ಬೆಂಗಳೂರು ಗ್ರಾಮಾಂತರ, ಬಾಗಲಕೋಟೆ ಜಿಲ್ಲೆಯ ಪಟ್ಟಣ ಪಂಚಾಯತ್ ಮತ್ತು ಗ್ರಾಮ ಪಂಚಾಯತ್  ನೇಮಕಾತಿ ಅಧಿಸೂಚನೆಯ ಪ್ರಕಾರ ಅರ್ಜಿ ಸಲ್ಲಿಸುವ ಅಭ್ಯರ್ಥಿಯು SSLC ಪೂರ್ಣಗೊಳಿಸಿರಬೇಕು.

ಇದನ್ನೂ ಓದಿ: ಎಕ್ಸಿಕ್ಯುಟಿವ್ ಎಂಜಿನಿಯರ್ ಸೇರಿ 10 ಹುದ್ದೆಗೆ ಅರ್ಜಿ ಆಹ್ವಾನ - ಇಲ್ಲಿದೆ ಸಂಪೂರ್ಣ ಮಾಹಿತಿ

ವಯೋಮಿತಿ

ಬೆಂಗಳೂರು ಗ್ರಾಮಾಂತರ, ಬಾಗಲಕೋಟೆ ಜಿಲ್ಲೆಯ ಪಟ್ಟಣ ಪಂಚಾಯತ್ ಮತ್ತು ಗ್ರಾಮ ಪಂಚಾಯತ್ ನೇಮಕಾತಿ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯ ಕನಿಷ್ಠ ವಯಸ್ಸು 18.

ಆಯ್ಕೆ ವಿಧಾನ

ಬೆಂಗಳೂರು ಗ್ರಾಮಾಂತರ, ಬಾಗಲಕೋಟೆ ಜಿಲ್ಲೆಯ ಪಟ್ಟಣ ಪಂಚಾಯತ್ ಮತ್ತು ಗ್ರಾಮ ಪಂಚಾಯತ್ ನೇಮಕಾತಿ ಅಧಿಸೂಚನೆಯ ಪ್ರಕಾರ ಅರ್ಜಿ ಸಲ್ಲಿಸಿದ ಅಭ್ಯರ್ಥಿಯು ಗಳಿಸಿದ ಅಂಕದ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಶುಲ್ಕ

ಈ ಹುದ್ದೆಗೆ ಅರ್ಜಿ ಸಲ್ಲಿಸಲು ಯಾವುದೇ ಶುಲ್ಕವಿಲ್ಲ

ಉದ್ಯೋಗ ಸ್ಥಳ

ಬಾಗಲಕೋಟೆ ಜಿಲ್ಲೆಯ ಬೀಳಗಿ ತಾಲ್ಲೂಕಿನ ಸಿದ್ದಾಪುರ ಗ್ರಾಮಪಂಚಾಯತ್ ಗ್ರಂಥಾಲಯ,  ಮುಧೋಳ ತಾಲ್ಲೂಕಿನ ಲೋಕಾಪುರ ಪಟ್ಟಣ ಪಂಚಾಯತ್ ಗ್ರಂಥಾಲಯ, ಬಾದಾಮಿ ತಾಲ್ಲೂಕಿನ ನೀರಲಕೇರಿ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ಶಿವನಾಪುರ ಗ್ರಾಮ ಪಂಚಾಯತ್, ಕಂಬಳೀಪುರ ಗ್ರಾಮ ಪಂಚಾಯತ್, ದೇವನಹಳ್ಳಿ ತಾಲ್ಲೂಕಿನ ಜಾಲಿಗೆ ಗ್ರಾಮ ಪಂಚಾಯತ್​ ಗ್ರಂಥಾಲಯಗಳಲ್ಲಿ ಕಾರ್ಯ ನಿರ್ವಹಿಸಬೇಕಾಗುತ್ತದೆ.

ಅಗತ್ಯ ದಾಖಲೆಗಳು

ಬೆಂಗಳೂರು ಗ್ರಾಮಾಂತರ, ಬಾಗಲಕೋಟೆ ಜಿಲ್ಲೆಯ ಪಟ್ಟಣ ಪಂಚಾಯತ್ ಮತ್ತು ಗ್ರಾಮ ಪಂಚಾಯತ್ ನೇಮಕಾತಿ ಅಧಿಸೂಚನೆಯ ಪ್ರಕಾರ ಎಸ್​ಎಸ್​ಎಲ್​ಸಿ ಮಾರ್ಕ್ಸ್ ಕಾರ್ಡ್ , ಮೀಸಲಾತಿ ಪ್ರಮಾಣ ಪತ್ರ, ಕನ್ನಡ ಮಾಧ್ಯಮ ವ್ಯಾಸಂಗ ಪ್ರಮಾಣ ಪತ್ರ ಮತ್ತು ಸ್ಥಳೀಯ ವಾಸಸ್ಥಳ ದೃಢೀಕರಣ ಪತ್ರ.

ಪ್ರಮುಖ ದಿನಾಂಕಗಳು

ಅರ್ಜಿ ಸಲ್ಲಿಸಲು ಕೊನೆಯ ದಿನ (ಬಾಗಲಕೋಟೆ) – ಮಾರ್ಚ್ 30

ಅರ್ಜಿ ಸಲ್ಲಿಸಲು ಕೊನೆಯ ದಿನ (ಬೆಂಗಳೂರು ಗ್ರಾಮಾಂತರ): ಏಪ್ರಿಲ್ 6

ಇತರ ಹುದ್ದೆಗಳ ಹೆಚ್ಚಿನ ಮಾಹಿತಿಗೆ ಇಲ್ಲಿ ಕ್ಲಿಕ್ ಮಾಡಿ 

ಅರ್ಜಿ ಸಲ್ಲಿಸುವ ವಿಳಾಸ

ಆರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಸಂಬಂಧಪಟ್ಟ ಆಯಾ ಗ್ರಾಮ ಪಂಚಾಯತ್ ಮತ್ತು ಪಟ್ಟಣ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಗೆ ಕಳುಹಿಸಬೇಕು.
Published by:Sandhya M
First published: