• Home
  • »
  • News
  • »
  • jobs
  • »
  • BESCOM Recruitment: ಬೆಸ್ಕಾಂನಲ್ಲಿ 400 ಅಪ್ರೆಂಟಿಸ್​ ಹುದ್ದೆಗೆ ಅರ್ಜಿ ಆಹ್ವಾನ

BESCOM Recruitment: ಬೆಸ್ಕಾಂನಲ್ಲಿ 400 ಅಪ್ರೆಂಟಿಸ್​ ಹುದ್ದೆಗೆ ಅರ್ಜಿ ಆಹ್ವಾನ

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

ಈ ಹುದ್ದೆಗೆ 2020, 2021, 2022 ಮತ್ತು 2019 ಅಕ್ಟೋಬರ್​​ನಲ್ಲಿ ಪದವಿ ಪಾಸ್​ ಆದ ಅಭ್ಯರ್ಥಿಗಳು ಮಾತ್ರ ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. 

  • Share this:

    ಬೆಂಗಳೂರು ವಿದ್ಯುತ್​ ಸರಬರಾಜು ಕಂಪನಿ ನಿಯಮಿತದಲ್ಲಿ (Bangalore Electricity Supply Company Limited) ಅಪ್ರೆಂಟಿಸ್ (​Apprentice) ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 400 ಹುದ್ದೆಗಳಿಗೆ ಈ ನೇಮಕಾತಿ ನಡೆಯಲಿದೆ. ಒಂದು ವರ್ಷದ ಈ ಅಪ್ರೆಂಟಿಸ್​ ಅವಧಿಯಲ್ಲಿ ಮಾಸಿಕ ಸ್ಟೈಫಂಡ್​ ಕೂಡ ನೀಡಲಾಗುವುದು. ಆಸಕ್ತಿ ಹೊಂದಿರುವ ಅರ್ಹ ಅಭ್ಯರ್ಥಿಗಳು ಈ ಹುದ್ದೆಗೆ ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿಯನ್ನು ಆನ್​ಲೈನ್​ ಮೂಲಕ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ನವೆಂಬರ್​ 7 ಆಗಿದೆ.


    ಈ ಹುದ್ದೆಗೆ 2020, 2021, 2022 ಮತ್ತು 2019 ಅಕ್ಟೋಬರ್​​ನಲ್ಲಿ ಪದವಿ ಪಾಸ್​ ಆದ ಅಭ್ಯರ್ಥಿಗಳು ಮಾತ್ರ ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.


    ಸಂಸ್ಥೆಯ ಹೆಸರು: ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ಲಿಮಿಟೆಡ್ (BESCOM)
    ಹುದ್ದೆಯ ಹೆಸರು: ಅಪ್ರೆಂಟಿಸ್
    ಹುದ್ದೆಗಳ ಸಂಖ್ಯೆ: 400
    ಉದ್ಯೋಗ ಸ್ಥಳ: ಬೆಂಗಳೂರು - ಕರ್ನಾಟಕ
    ಸ್ಟೈಪೆಂಡ್: 8000-9008 ರೂ. ಪ್ರತಿ ತಿಂಗಳು

    ಹುದ್ದೆಹುದ್ದೆ ಸಂಖ್ಯೆವಿದ್ಯಾರ್ಹತೆವೇತನ
    ಗ್ರಾಜುಯೇಟ್ ಅಪ್ರೆಂಟಿಸ್ (ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್)143ಬಿಇ, ಬಿಟೆಕ್​9008 ರೂ. ಪ್ರತಿ ತಿಂಗಳು
    ಗ್ರಾಜುಯೇಟ್ ಅಪ್ರೆಂಟಿಸ್ (ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್ ಇಂಜಿನಿಯರಿಂಗ್)116ಬಿಇ, ಬಿಟೆಕ್​9008 ರೂ. ಪ್ರತಿ ತಿಂಗಳು
    ಗ್ರಾಜುಯೇಟ್ ಅಪ್ರೆಂಟಿಸ್ (ಕಂಪ್ಯೂಟರ್ ಸೈನ್ಸ್ ಮತ್ತು ಇಂಜಿನಿಯರಿಂಗ್)36ಬಿಇ, ಬಿಟೆಕ್​9008 ರೂ. ಪ್ರತಿ ತಿಂಗಳು
    ಗ್ರಾಜುಯೇಟ್ ಅಪ್ರೆಂಟಿಸ್ (ಮಾಹಿತಿ ವಿಜ್ಞಾನ ಮತ್ತು ಇಂಜಿನಿಯರಿಂಗ್)20ಬಿಇ, ಬಿಟೆಕ್​9008 ರೂ. ಪ್ರತಿ ತಿಂಗಳು
    ಗ್ರಾಜುಯೇಟ್ ಅಪ್ರೆಂಟಿಸ್ (ಸಿವಿಲ್ ಇಂಜಿನಿಯರಿಂಗ್)5ಬಿಇ, ಬಿಟೆಕ್​9008 ರೂ. ಪ್ರತಿ ತಿಂಗಳು
    ಗ್ರಾಜುಯೇಟ್ ಅಪ್ರೆಂಟಿಸ್ (ಇನ್‌ಸ್ಟ್ರುಮೆಂಟೇಶನ್ ಟೆಕ್ನಾಲಜಿ ಇಂಜಿನಿಯರಿಂಗ್)5ಬಿಇ, ಬಿಟೆಕ್​9008 ರೂ. ಪ್ರತಿ ತಿಂಗಳು
    ತಂತ್ರಜ್ಞ ಅಪ್ರೆಂಟಿಸ್ (ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್)55ಡಿಪ್ಲೊಮಾ8000 ಪ್ರತಿ ತಿಂಗಳು
    ತಂತ್ರಜ್ಞ ಅಪ್ರೆಂಟಿಸ್ (ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್ ಇಂಜಿನಿಯರಿಂಗ್)10ಡಿಪ್ಲೊಮಾ 8000 ಪ್ರತಿ ತಿಂಗಳು
    ತಂತ್ರಜ್ಞ ಅಪ್ರೆಂಟಿಸ್ (ಕಂಪ್ಯೂಟರ್ ಸೈನ್ಸ್ ಮತ್ತು ಇಂಜಿನಿಯರಿಂಗ್)10ಡಿಪ್ಲೊಮಾ 8000 ಪ್ರತಿ ತಿಂಗಳು

    ವಯೋಮಿತಿ ಸಡಿಲಿಕೆ:
    ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ಲಿಮಿಟೆಡ್ ನಿಯಮಗಳ ಪ್ರಕಾರ


    ಇದನ್ನು ಓದಿ: ಭಾರತೀಯ ಸೇನೆಯಲ್ಲಿ ಜೂನಿಯರ್ ಕಮಿಷನ್ಡ್ ಆಫೀಸರ್ ಹುದ್ದೆ ನೇಮಕಾತಿ


    ಅರ್ಜಿ ಶುಲ್ಕ:
    ಅರ್ಜಿ ಶುಲ್ಕವಿಲ್ಲ


    ಆಯ್ಕೆ ಪ್ರಕ್ರಿಯೆ:
    ಮೆರಿಟ್, ಸಂದರ್ಶನ ಆಧರಿಸಿ


    ಪ್ರಮುಖ ದಿನಾಂಕಗಳು:
    ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 15 ಅಕ್ಟೋಬರ್​ 2022
    ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 07 ನವೆಂಬರ್ 2022
    ನೋಂದಾಯಿಸಲು ಕೊನೆಯ ದಿನಾಂಕ: 31 ಅಕ್ಟೋಬರ್ 2022
    ಶಾರ್ಟ್‌ಲಿಸ್ಟ್ ಮಾಡಿದ ಅಭ್ಯರ್ಥಿಗಳ ಘೋಷಣೆಯ ಪಟ್ಟಿಯ ದಿನಾಂಕ: 14 ನವೆಂಬರ್ 2022


    ಇದನ್ನು ಓದಿ: 1591 ಪೊಲೀಸ್​ ಕಾನ್ಸ್​ಟೇಬಲ್​ ಹುದ್ದೆಗೆ ಅರ್ಜಿ ಆಹ್ವಾನ; ಇಲ್ಲಿದೆ ಸಂಪೂರ್ಣ ಮಾಹಿತಿ


    ವಿಶೇಷ ಸೂಚನೆ:
    ಈ ಹುದ್ದೆಗೆ ಶಾರ್ಟ್​ಲಿಸ್ಟ್​ ಆದ ಅಭ್ಯರ್ಥಿಗಳ ದಾಖಲೆ ಪರಿಶೀಲನೆ 21 ನವೆಂಬರ್​ ನಿಂದ 23 ನವೆಂಬರ್​ವರೆಗೆ ಈ ಕೆಳಕಂಡ ವಿಳಾಸದಲ್ಲಿ ನಡೆಯಲಿದೆ.
    ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ಲಿಮಿಟೆಡ್, ಎಚ್‌ಆರ್‌ಡಿ ಸೆಂಟರ್, 1ನೇ ಮಹಡಿ, ಕ್ರೆಸೆಂಟ್ ಟವರ್, ಕ್ರೆಸೆಂಟ್ ರಸ್ತೆ, ಮಲ್ಲಿಗೆ ನರ್ಸಿಂಗ್ ಹೋಮ್ ಹತ್ತಿರ, ರೇಸ್, ಕೋರ್ಸ್, ಬೆಂಗಳೂರು - 560001


    ಪ್ರಮುಖ ಲಿಂಕ್‌ಗಳು
    ಅಧಿಕೃತ ಅಧಿಸೂಚನೆ ಪಿಡಿಎಫ್: ಇಲ್ಲಿ ಕ್ಲಿಕ್ ಮಾಡಿ
    ಅಧಿಕೃತ ವೆಬ್‌ಸೈಟ್: bescom.org


    ಅರ್ಜಿ ಸಲ್ಲಿಕೆ ಪ್ರಕ್ರಿಯೆ


    ಅಧಿಸೂಚನೆ 2022 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಂಡು ಮುಂದುವರೆಯಿರಿ.


    -ಅಧಿಕೃತ ಅಧಿಸೂಚನೆಯಿಂದ ಅರ್ಜಿ ನಮೂನೆಯಲ್ಲಿ ಫಾರ್ಮ್ ಅನ್ನು ಭರ್ತಿ ಮಾಡಿ.


    - ಸಂವಹನ ಉದ್ದೇಶಕ್ಕಾಗಿ ದಯವಿಟ್ಟು ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆ ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ಇತ್ತೀಚಿನ ಫೋಟೋಗ್ರಾಫ್ ನೀಡಿ. ರೆಸ್ಯೂಮ್, ಯಾವುದೇ ಅನುಭವವಿದ್ದರೆ ಇತ್ಯಾದಿ ದಾಖಲೆಗಳನ್ನು ನೀಡಿ.


    -ನಿಮ್ಮ ವರ್ಗಕ್ಕೆ ಅನುಗುಣವಾಗಿ ಅರ್ಜಿ ಶುಲ್ಕ ಪಾವತಿಸಿ, ಅದರ ಮಾಹಿತಿ ಅಪ್​ಲೋಡ್​ ಮಾಡಿ.


    -ಎಲ್ಲಾ ಮಾಹಿತಿಯನ್ನು ಪೂರ್ಣಗೊಳಿಸಿದ ನಂತರ, ಒದಗಿಸಿದ ವಿವರಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿದ ಬಳಿಕ ಸಲ್ಲಿಸು ಬಟನ್​ ಕ್ಲಿಕ್​ ಮಾಡಿ

    Published by:Seema R
    First published: