BEL Recruitment: ಬಿಇಎಲ್​ನಲ್ಲಿ 24 ಡೆಪ್ಯುಟಿ ಇಂಜಿನಿಯರ್ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ

ಬಿಇ ಪದವಿ ಹೊಂದಿರುವ ಅರ್ಹ ಮತ್ತು ಸೂಕ್ತ ಅಭ್ಯರ್ಥಿಗಳು ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಕಡಯ ದಿನಾಂಕ ಅಕ್ಟೋಬರ್​ 6 ಆಗಿದೆ.

 ಹುದ್ದೆಗೆ ಅರ್ಜಿ ಹಾಕಿ

ಹುದ್ದೆಗೆ ಅರ್ಜಿ ಹಾಕಿ

  • Share this:
    ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್​ನಲ್ಲಿ( Bharat Electronics Limited) 24 ಡೆಪ್ಯುಟಿ ಇಂಜಿನಿಯರ್ ​ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳು ಖಾಯಂ ನೇಮಕಾತಿ ಆಗಿದ್ದು, ಕರ್ನಾಟಕ, ಉತ್ತರ ಪ್ರದೇಶ ಗುಜರಾತ್​ನಲ್ಲಿ ಕೆಲಸ ನಿರ್ವಹಿಸಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಬಿಇ ಪದವಿ ಹೊಂದಿರುವ ಅರ್ಹ ಮತ್ತು ಸೂಕ್ತ ಅಭ್ಯರ್ಥಿಗಳು ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಕಡಯ ದಿನಾಂಕ ಅಕ್ಟೋಬರ್​ 6 ಆಗಿದೆ.

    ಈ ನೇಮಕಾತಿ ಗೆ ಸಂಬಂಧಿಸಿದ ಇತರ ಪ್ರಮುಖ ಮಾಹಿತಿಗಳಾದ ಅರ್ಜಿ ಪ್ರಕ್ರಿಯೆ, ಖಾಲಿ ಹುದ್ದೆಗಳ ಸಂಖ್ಯೆ, ವೇತನಗಳು, ಆಯ್ಕೆ ವಿಧಾನ ಇತ್ಯಾದಿಗಳ ಮಾಹಿತಿ ಈ ಕೆಳಗಿನಂತಿವೆ.



























    ಹುದ್ದೆ ಮಾಹಿತಿಹುದ್ದೆ ವಿವರ
    ಸಂಸ್ಥೆಯ ಹೆಸರುಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (BEL)
    ಹುದ್ದೆಯ ಹೆಸರುಡೆಪ್ಯುಟಿ ಇಂಜಿನಿಯರ್
    ಹುದ್ದೆಗಳ ಸಂಖ್ಯೆ24
    ಉದ್ಯೋಗ ಸ್ಥಳಗುಜರಾತ್ - ದೆಹಲಿ - ಕರ್ನಾಟಕ - ಉತ್ತರ ಪ್ರದೇಶ
    ಸಂಬಳ40000-140000 ರೂ ಮಾಸಿಕ

    ಶೈಕ್ಷಣಿಕ ಅರ್ಹತೆ:  ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಎಲೆಕ್ಟ್ರಾನಿಕ್ಸ್, ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಶನ್, ಎಲೆಕ್ಟ್ರಾನಿಕ್ಸ್ ಮತ್ತು ಟೆಲಿಕಮ್ಯುನಿಕೇಶನ್, ಕಮ್ಯುನಿಕೇಶನ್, ಟೆಲಿಕಮ್ಯುನಿಕೇಶನ್ ಎಂಜಿನಿಯರಿಂಗ್‌ನಲ್ಲಿ ಪದವಿ ಪೂರ್ಣಗೊಳಿಸಿರಬೇಕು.

    ಇದನ್ನು ಓದಿ: ಬೆಂಗಳೂರು ವಿವಿಯಲ್ಲಿ ಪೂರ್ಣ-ಅರೆಕಾಲಿಕ ಉಪನ್ಯಾಸಕ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ

    ವಯಸ್ಸಿನ ಮಿತಿ: ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಗರಿಷ್ಠ ವಯಸ್ಸು 25 ವರ್ಷಗಳು ಮೀರಿರಬಾರದು

    ವಯೋಮಿತಿ ಸಡಿಲಿಕೆ:
    ಒಬಿಸಿ ಅಭ್ಯರ್ಥಿಗಳು: 3 ವರ್ಷಗಳು
    ಪ.ಜಾ, ಪ.ಪಂ ಅಭ್ಯರ್ಥಿಗಳು: 5 ವರ್ಷಗಳು
    ವಿಕಲಚೇತನ ಅಭ್ಯರ್ಥಿಗಳು: 10 ವರ್ಷಗಳು

    ಅರ್ಜಿ ಶುಲ್ಕ:
    ಪ.ಜಾ, ಪ.ಪಂ ಮತ್ತು ವಿಕಲಚೇತನ ಅಭ್ಯರ್ಥಿಗಳು: ಶುಲ್ಕ ವಿನಾಯಿತಿ
    ಎಲ್ಲಾ ಇತರ ಅಭ್ಯರ್ಥಿಗಳು: 708 ರೂ

    ಪಾವತಿ ವಿಧಾನ: ಆನ್‌ಲೈನ್

    ಆಯ್ಕೆ ಪ್ರಕ್ರಿಯೆ:
    ಲಿಖಿತ ಪರೀಕ್ಷೆ ಮತ್ತು ಸಂದರ್ಶನ

    ಪ್ರಮುಖ ದಿನಾಂಕಗಳು:
    ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 14 ಸೆಪ್ಟೆಂಬರ್​ 2022
    ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 06 ಅಕ್ಟೋಬರ್ 2022

    ಇದನ್ನು ಓದಿ: ಕೆಪಿಎಸ್​ಸಿಯಿಂದ ಸಹಾಯಕ ನಿರ್ದೇಶಕರ ಹುದ್ದೆಗೆ ಅರ್ಜಿ ಆಹ್ವಾನ

    ಅಧಿಸೂಚನೆ ಪ್ರಮುಖ ಲಿಂಕ್‌ಗಳು
    ಅಧಿಕೃತ ಅಧಿಸೂಚನೆ ಪಿಡಿಎಫ್: ಇಲ್ಲಿ ಕ್ಲಿಕ್ ಮಾಡಿ
    ಅಧಿಕೃತ ವೆಬ್‌ಸೈಟ್: bel-india.in

    ಅರ್ಜಿ ಸಲ್ಲಿಕೆ ಪ್ರಕ್ರಿಯೆ

    ನೇಮಕಾತಿ ಅಧಿಸೂಚನೆ 2022 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಳ್ಳಿ

    - ಆನ್‌ಲೈನ್ ಮೋಡ್ ಮೂಲಕ ನಿಗದಿತ ಅರ್ಜಿಯನ್ನು ಡೌನ್​ ಲೋಡ್​ ಮಾಡಿ. ಭರ್ತಿ ಮಾಡುವ ಮೊದಲು, ದಯವಿಟ್ಟು ಸಂವಹನ ಉದ್ದೇಶಕ್ಕಾಗಿ ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು ಹೊಂದಿರಿ ಮತ್ತು ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ರೆಸ್ಯೂಮ್, ಯಾವುದೇ ಅನುಭವವಿದ್ದರೆ ಇತ್ಯಾದಿ ದಾಖಲೆಗಳನ್ನು ಸಿದ್ಧವಾಗಿಟ್ಟುಕೊಳ್ಳಿ.

    ಆನ್‌ಲೈನ್‌ನಲ್ಲಿ ಲಾಗ್​ ಇನ್​ ಆಗಿ. ಅರ್ಜಿ ನಮೂನೆಯಲ್ಲಿ ಅಗತ್ಯವಿರುವ ಎಲ್ಲಾ ವಿವರಗಳನ್ನು ನವೀಕರಿಸಿ. ನಿಮ್ಮ ಇತ್ತೀಚಿನ ಫೋಟೋಗ್ರಾಫ್ (ಅನ್ವಯಿಸಿದರೆ) ಜೊತೆಗೆ ಅಗತ್ಯ ಪ್ರಮಾಣಪತ್ರಗಳು/ದಾಖಲೆಗಳ ಸ್ಕ್ಯಾನ್ ಮಾಡಿದ ಪ್ರತಿಗಳನ್ನು ಅಪ್‌ಲೋಡ್ ಮಾಡಿ.

    ನಿಮ್ಮ ವರ್ಗಕ್ಕೆ ಅನುಸಾರವಾಗಿ ಅರ್ಜಿ ಶುಲ್ಕ ಪಾವತಿಸಿ, ಈ ಕುರಿತ ಮಾಹಿತಿ ಅಪ್​ಲೋಡ್​ ಮಾಡಿ

    -ಎಲ್ಲಾ ಮಾಹಿತಿಯನ್ನು ಪೂರ್ಣಗೊಳಿಸಿದ ನಂತರ, ಒದಗಿಸಿದ ವಿವರಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿ. ಬಳಿಕ ಮೇಲಿನ ವಿಳಾಸಕ್ಕೆ ಸ್ಪೀಡ್​ ಅಥವಾ ರಿಜಿಸ್ಟರ್​ ಪೋಸ್ಟ್​ ಮೂಲಕ ನಿಗದಿತ ದಿನಾಂಕಕ್ಕೆ ಮುನ್ನ ಕಳುಹಿಸಬೇಕಿದೆ
    Published by:Seema R
    First published: