Jobs in BEL: ಬಿಇಎಲ್​ನಲ್ಲಿದೆ ಪ್ರಾಜೆಕ್ಟ್​ ಇಂಜಿನಿಯರ್​ ಹುದ್ದೆ; ಮಾಸಿಕ 55000 ರೂ ವೇತನ

ಈ ಹುದ್ದೆಗಳನ್ನು ಒಪ್ಪಂದದ ಆಧಾರದ ಮೇಲೆ ತಾತ್ಕಾಲಿಕವಾಗಿ ನೇಮಕ ಮಾಡಲಾಗುತ್ತಿದೆ

 ಹುದ್ದೆಗೆ ಅರ್ಜಿ ಹಾಕಿ

ಹುದ್ದೆಗೆ ಅರ್ಜಿ ಹಾಕಿ

  • Share this:
    ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್​ನಲ್ಲಿ (Bharat Electronics Limited) ಪ್ರಾಜೆಕ್ಟ್​ ಇಂಜಿನಿಯರ್ (Project Engineer-I)​ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 11 ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. ಮಹಾರಾಷ್ಟ್ರದಲ್ಲಿ ಈ ಹುದ್ದೆಗಳು ಖಾಲಿ ಇದ್ದು, ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿಯನ್ನು ಇಮೇಲ್​ ಮೂಲಕ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಸೆಪ್ಟೆಂಬರ್​ 7 ಆಗಿದೆ.

    ಈ ಹುದ್ದೆಗಳನ್ನು ಒಪ್ಪಂದದ ಆಧಾರದ ಮೇಲೆ ತಾತ್ಕಾಲಿಕವಾಗಿ ನೇಮಕ ಮಾಡಲಾಗುತ್ತಿದೆ. ಈ ನೇಮಕಾತಿಗೆ ಸಂಬಂಧಿಸಿದ ಇತರ ಪ್ರಮುಖ ಮಾಹಿತಿಗಳಾದ ಅರ್ಜಿ ಪ್ರಕ್ರಿಯೆ, ಖಾಲಿ ಹುದ್ದೆಗಳ ಸಂಖ್ಯೆ, ವೇತನಗಳು, ಆಯ್ಕೆ ವಿಧಾನ ಇತ್ಯಾದಿಗಳ ಮಾಹಿತಿ ಈ ಕೆಳಗಿನಂತಿವೆ.



























    ಹುದ್ದೆ ಮಾಹಿತಿಹುದ್ದೆ ವಿವರ
    ಸಂಸ್ಥೆಯ ಹೆಸರುಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (BEL)
    ಹುದ್ದೆಯ ಹೆಸರುಪ್ರಾಜೆಕ್ಟ್ ಇಂಜಿನಿಯರ್-I
    ಹುದ್ದೆಗಳ ಸಂಖ್ಯೆ11
    ಕಾರ್ಯ ನಿರ್ವಹಣೆ ಸ್ಥಳ:ಪಾಶನ್ - ಮಹಾರಾಷ್ಟ್ರ
    ವೇತನ40000-55000 ರೂ ಮಾಸಿಕ

    ಶೈಕ್ಷಣಿಕ ಅರ್ಹತೆ: ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾನಿಲಯಗಳಿಂದ ಇಂಜಿನಿಯರಿಂಗ್‌ನಲ್ಲಿ ಬಿಎಸ್ಸಿ, ಬಿಇ ಅಥವಾ ಬಿಟೆಕ್​​ ಪೂರ್ಣಗೊಳಿಸಿರಬೇಕು.

    ಅನುಭವದ ವಿವರಗಳು
    ಅಭ್ಯರ್ಥಿಗಳು ಕನಿಷ್ಠ 02 ವರ್ಷಗಳ ನಂತರದ ಅರ್ಹತೆ ಸಂಬಂಧಿತ ಉದ್ಯಮದ ಅನುಭವವನ್ನು ಹೊಂದಿರಬೇಕು.

    ವಯೋಮಿತಿ: ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಗರಿಷ್ಠ ವಯಸ್ಸು 32 ವರ್ಷಗಳು ಮೀರಿರಬಾರದು.

    ವಯೋಮಿತಿ ಸಡಿಲಿಕೆ:
    ಒಬಿಸಿ ಅಭ್ಯರ್ಥಿಗಳು: 03 ವರ್ಷಗಳು
    ಪ.ಜಾ, ಪ.ಪಂ ಅಭ್ಯರ್ಥಿಗಳು: 05 ವರ್ಷಗಳು
    ವಿಕಲಚೇತನ ಅಭ್ಯರ್ಥಿಗಳು: 10 ವರ್ಷಗಳು

    ಅರ್ಜಿ ಸಲ್ಲಿಕೆ:  ಇಮೇಲ್​ ಅಥವಾ ಆಫ್​ಲೈನ್​​

    ಇಮೇಲ್​ ವಿಳಾಸ: contengr-1@bel.co.in

    ಅರ್ಜಿ ಶುಲ್ಕ
    ಪ.ಜಾ, ಪ.ಪಂ ಮತ್ತು ವಿಕಲಚೇತನ ಅಭ್ಯರ್ಥಿಗಳು: ಶುಲ್ಕ ವಿನಾಯಿತಿ
    ಇತರೆ ಎಲ್ಲಾ ಅಭ್ಯರ್ಥಿಗಳು: 472 ರೂ

    ಇದನ್ನು ಓದಿ: ಗದಗದಲ್ಲಿ ಅತಿಥಿ ಉಪನ್ಯಾಸಕರ ಹುದ್ದೆ; ನೇರ ಸಂದರ್ಶನದ ಮೂಲಕ ಆಯ್ಕೆ

    ಪಾವತಿ ವಿಧಾನ: ಡಿಮ್ಯಾಂಡ್ ಡ್ರಾಫ್ಟ್

    ಆಯ್ಕೆ ಪ್ರಕ್ರಿಯೆ
    ಲಿಖಿತ ಪರೀಕ್ಷೆ ಮತ್ತು ಸಂದರ್ಶನ

    ಪ್ರಮುಖ ದಿನಾಂಕಗಳು:
    ಅಧಿಸೂಚನೆಯನ್ನು ಬಿಡುಗಡೆ ಮಾಡಿದ ದಿನಾಂಕ: 22 ಆಗಸ್ಟ್​​ 2022
    ಇ-ಮೇಲ್ ಕಳುಹಿಸಲು ಕೊನೆಯ ದಿನಾಂಕ: 07 ಸೆಪ್ಟೆಂಬರ್​ 2022

    ಅಧಿಸೂಚನೆ ಪ್ರಮುಖ ಲಿಂಕ್‌ಗಳು
    ಅಧಿಕೃತ ಅಧಿಸೂಚನೆ ಪಿಡಿಎಫ್: ಇಲ್ಲಿ ಕ್ಲಿಕ್ ಮಾಡಿ
    ಅಧಿಕೃತ ವೆಬ್‌ಸೈಟ್: bel-india.in

    ಇದನ್ನು ಓದಿ: ಧಾರವಾಡದಲ್ಲಿದೆ ಸಹಾಯಕ ಪ್ರಾಧ್ಯಾಪಕರ ಹುದ್ದೆ; ಮಾಸಿಕ 45000 ರೂ ವೇತನ

    ಅರ್ಜಿ ಸಲ್ಲಿಕೆ ವಿಳಾಸ

    ಸೀನಿಯರ್ ಡಿವೈ. ಜನರಲ್ ಮ್ಯಾನೇಜರ್ (ಎಚ್​.ಆರ್​ ಅಂಡ್​ ಎ), ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್, ಎನ್​ಡಿಎ ರಸ್ತೆ, ಪಾಶನ್, ಪುಣೆ - 411021.

    ಅರ್ಜಿ ಸಲ್ಲಿಕೆ ಪ್ರಕ್ರಿಯೆ

    ನೇಮಕಾತಿ ಅಧಿಸೂಚನೆ 2022 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಳ್ಳಿ

    - ಆನ್‌ಲೈನ್ ಮೋಡ್ ಮೂಲಕ ನಿಗದಿತ ಅರ್ಜಿಯನ್ನು ಡೌನ್​ ಲೋಡ್​ ಮಾಡಿ. ಭರ್ತಿ ಮಾಡುವ ಮೊದಲು, ದಯವಿಟ್ಟು ಸಂವಹನ ಉದ್ದೇಶಕ್ಕಾಗಿ ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು ನೀಡಿ ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ರೆಸ್ಯೂಮ್, ಯಾವುದೇ ಅನುಭವವಿದ್ದರೆ ಇತ್ಯಾದಿ ದಾಖಲೆಗಳನ್ನು ನೀಡಿ.

    ಬಳಿಕ ಮೇಲೆ ನೀಡಿದ ಇಮೇಲ್​ ವಿಳಾಸ ಅಥವಾ ಕಚೇರಿ ವಿಳಾಸಕ್ಕ ಸ್ಪೀಡ್​ ಪೋಸ್ಟ್​ ಅಥವಾ ರಿಜಿಸ್ಟರ್​ ಪೋಸ್ಟ್​ ಮಾಡಬಹುದಾಗಿದೆ.
    Published by:Seema R
    First published: