BHEL Recruitment 2021: ಭಾರತ್ ಹೆವಿ ಎಲೆಕ್ಟ್ರಾನಿಕ್ಸ್ ಲಿಮಿಟೆಡ್(Bharat Heavy Electronics Limited) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 28 ಜನರಲ್ ಡ್ಯೂಟಿ ಮೆಡಿಕಲ್ ಆಫೀಸರ್(General Duty Medical Officer) ಹುದ್ದೆಗಳು ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಆನ್ಲೈನ್(Online) ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ, ನವೆಂಬರ್ 25 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ BHELನ ಅಧಿಕೃತ ವೆಬ್ಸೈಟ್ www.bhel.com ಗೆ ಭೇಟಿ ನೀಡಬಹುದು.
ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
ಸಂಸ್ಥೆ |
ಭಾರತ್ ಹೆವಿ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ |
ಹುದ್ದೆಯ ಹೆಸರು |
ಜನರಲ್ ಡ್ಯೂಟಿ ಮೆಡಿಕಲ್ ಆಫೀಸರ್ |
ಒಟ್ಟು ಹುದ್ದೆಗಳು |
28 |
ವಿದ್ಯಾರ್ಹತೆ |
ಎಂಬಿಬಿಎಸ್(MBBS) |
ಉದ್ಯೋಗದ ಸ್ಥಳ |
ಭೋಪಾಲ್, ಚೆನ್ನೈ, ಹರಿದ್ವಾರ್, ಹೈದಾರಾಬಾದ್, ಜಗದೀಶ್ಪುರ, ಝಾನ್ಸಿ, ನವದೆಹಲಿ, ರಾಣಿಪೇಟ್, ರುದ್ರಾಪುರ, ತಿರುಚಿನಾಪಳ್ಳಿ, ವಿಶಾಖಪಟ್ಟಣಂ |
ವೇತನ |
ಮಾಸಿಕ ₹ 83,000 |
ಅರ್ಜಿ ಸಲ್ಲಿಕೆ ವಿಧಾನ |
ಆನ್ಲೈನ್ |
ಅರ್ಜಿ ಸಲ್ಲಿಕೆ ಆರಂಭ ದಿನಾಂಕ |
05/11/2021 |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ |
25/11/2021 |
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 05/11/2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 25/11/2021
ಅರ್ಜಿ ಶುಲ್ಕ:
ಅಭ್ಯರ್ಥಿಗಳು 300 ರೂ. ಅರ್ಜಿ ಶುಲ್ಕ ಪಾವತಿಸಬೇಕು. SC, ST, PWD ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.
ಇದನ್ನೂ ಓದಿ: KRCL Recruitment 2021: ಎಂಜಿನಿಯರಿಂಗ್ ಅಭ್ಯರ್ಥಿಗಳಿಗೆ ರೈಲ್ವೆ ಇಲಾಖೆಯಲ್ಲಿ ಬಂಪರ್ ಉದ್ಯೋಗ
ಹುದ್ದೆಯ ಮಾಹಿತಿ:
ಹರಿದ್ವಾರ್-5
ಭೋಪಾಲ್-5
ತಿರ್ಚಿ-4
ಹೈದ್ರಾಬಾದ್-5
ಝಾನ್ಸಿ-2
ರಾಣಿಪೇಟ್-1
ಚೆನ್ನೈ-1
ರುದ್ರಾಪುರ್-1
ವಿಜಾಗ್-1
ಜಗದೀಶ್ಪುರ-1
ನವದೆಹಲಿ-2
ವಿದ್ಯಾರ್ಹತೆ:
ಜನರಲ್ ಡ್ಯೂಟಿ ಮೆಡಿಕಲ್ ಆಫೀಸರ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಸಂಸ್ಥೆಯಿಂದ ಎಂಬಿಬಿಎಸ್ ಪದವಿ ಪಡೆದಿರಬೇಕು. ಜೊತೆಗೆ ಸಂಬಂಧಿತ ಕ್ಷೇತ್ರದಲ್ಲಿ ಕನಿಷ್ಠ 1 ವರ್ಷ ಅನುಭವ ಹೊಂದಿರಬೇಕು.
ವಯೋಮಿತಿ:
ಜನರಲ್ ಡ್ಯೂಟಿ ಮೆಡಿಕಲ್ ಆಫೀಸರ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು ಗರಿಷ್ಠ 37 ವರ್ಷ ಮೀರಿರಬಾರದು.
ವೇತನ:
ಜನರಲ್ ಡ್ಯೂಟಿ ಮೆಡಿಕಲ್ ಆಫೀಸರ್ ಹುದ್ದೆಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ ₹83,000 ವೇತನ ನೀಡಲಾಗುತ್ತದೆ.
ಇದನ್ನೂ ಓದಿ: BSNL Recruitment 2021: ಡಿಪ್ಲೋಮಾ ಪಾಸಾದವರಿಗೆ BSNL ಕಂಪನಿಯಲ್ಲಿ ಬಂಪರ್ ಉದ್ಯೋಗ
ಆಯ್ಕೆ ಪ್ರಕ್ರಿಯೆ:
ದಾಖಲಾತಿ ಪರಿಶೀಲನೆ
ವೈಯಕ್ತಿಕ ಸಂದರ್ಶನ
ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಇಲಾಖೆಯಲ್ಲಿ ಕೆಲಸ ಹುಡುಕುತ್ತಿದ್ದೀರಾ? ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ