BHEL Recruitment 2021: ಪ್ರಾಜೆಕ್ಟ್​ ಎಂಜಿನಿಯರ್ & ಟ್ರೇನಿ ಎಂಜಿನಿಯರ್ ಹುದ್ದೆಗಳಿಗೆ ಅರ್ಜಿ ಆಹ್ವಾನ, ಮಾಸಿಕ ವೇತನ ₹ 50 ಸಾವಿರ

ಒಟ್ಟು 84 ಪ್ರಾಜೆಕ್ಟ್​ ಎಂಜಿನಿಯರ್(Project Engineer) ಮತ್ತು ಟ್ರೇನಿ ಎಂಜಿನಿಯರ್(Trainee Engineer) ಹುದ್ದೆಗಳು ಖಾಲಿ ಇದ್ದು, ಬಿಇ, ಬಿ.ಟೆಕ್, ಬಿಎಸ್ಸಿ ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

BHEL

BHEL

  • Share this:
BHEL Recruitment 2021: ಭಾರತ್ ಹೆವಿ ಎಲೆಕ್ಟ್ರಾನಿಕ್ಸ್​ ಲಿಮಿಟೆಡ್(Bharat Heavy Electronics Limited ) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 84 ಪ್ರಾಜೆಕ್ಟ್​ ಎಂಜಿನಿಯರ್(Project Engineer) ಮತ್ತು ಟ್ರೇನಿ ಎಂಜಿನಿಯರ್(Trainee Engineer) ಹುದ್ದೆಗಳು ಖಾಲಿ ಇದ್ದು, ಬಿಇ, ಬಿ.ಟೆಕ್, ಬಿಎಸ್ಸಿ ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಡಿಸೆಂಬರ್ 8ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಅಭ್ಯರ್ಥಿಗಳು ಪೋಸ್ಟ್(Postal)​​ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಡಿಸೆಂಬರ್ 31 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ(Last Date)ವಾಗಿದೆ. ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಭಾರತ್ ಹೆವಿ ಎಲೆಕ್ಟ್ರಾನಿಕ್ಸ್​ ಲಿಮಿಟೆಡ್​ನ ಅಧಿಕೃತ ವೆಬ್​ಸೈಟ್​ bhel.com ಗೆ ಭೇಟಿ ನೀಡಬಹುದಾಗಿದೆ.

ಅರ್ಜಿ ಸಲ್ಲಿಸುವ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.









































ಸಂಸ್ಥೆಭಾರತ್ ಹೆವಿ ಎಲೆಕ್ಟ್ರಾನಿಕ್ಸ್​ ಲಿಮಿಟೆಡ್
ಹುದ್ದೆಯ ಹೆಸರುಪ್ರಾಜೆಕ್ಟ್ ಎಂಜಿನಿಯರ್, ಟ್ರೇನಿ ಎಂಜಿನಿಯರ್
ಒಟ್ಟು ಹುದ್ದೆಗಳು84
ವಿದ್ಯಾರ್ಹತೆಬಿಇ, ಬಿ.ಟೆಕ್, ಬಿಎಸ್ಸಿ
ಉದ್ಯೋಗದ ಸ್ಥಳಹೈದ್ರಾಬಾದ್
ವೇತನಮಾಸಿಕ ₹ 25,000- 50,000
ಅರ್ಜಿ ಸಲ್ಲಿಕೆ ವಿಧಾನಪೋಸ್ಟ್​(ಆಫ್​ಲೈನ್​)
ಅರ್ಜಿ ಸಲ್ಲಿಕೆ ಆರಂಭ ದಿನಾಂಕ08/12/2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ31/12/2021



ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ : 08/12/2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 31/12/2021

ಇದನ್ನೂ ಓದಿ: KPSC ನೇಮಕಾತಿ: ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ, ತಿಂಗಳಿಗೆ ₹ 82,400 ಸಂಬಳ

ಅರ್ಜಿ ಶುಲ್ಕ:
ಟ್ರೈನಿ ಎಂಜಿನಿಯರ್ ಹುದ್ದೆಗೆ 200 ರೂ. ಅರ್ಜಿ ಶುಲ್ಕ
ಪ್ರಾಜೆಕ್ಟ್​ ಎಂಜಿನಿಯರ್ ಹುದ್ದೆಗೆ 500 ರೂ. ಅರ್ಜಿ ಶುಲ್ಕ
SC/ST/PWD ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.

ಹುದ್ದೆಯ ಮಾಹಿತಿ:
ಟ್ರೇನಿ ಎಂಜಿನಿಯರ್- 33 ಹುದ್ದೆಗಳು
ಪ್ರಾಜೆಕ್ಟ್ ಎಂಜಿನಿಯರ್-51 ಹುದ್ದೆಗಳು

ವಯೋಮಿತಿ:
ಟ್ರೇನಿ ಎಂಜಿನಿಯರ್- 25 ವರ್ಷ
ಪ್ರಾಜೆಕ್ಟ್ ಎಂಜಿನಿಯರ್- 28 ವರ್ಷ

ವಿದ್ಯಾರ್ಹತೆ:
ಟ್ರೇನಿ ಎಂಜಿನಿಯರ್, ಪ್ರಾಜೆಕ್ಟ್ ಎಂಜಿನಿಯರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಸಂಸ್ಥೆಯಿಂದ ಬಿಇ/ ಬಿ ಟೆಕ್/ ಬಿಎಸ್ಸಿ ಪೂರ್ಣಗೊಳಿಸಿರಬೇಕು.

ಉದ್ಯೋಗದ ಸ್ಥಳ:
ಟ್ರೇನಿ ಎಂಜಿನಿಯರ್, ಪ್ರಾಜೆಕ್ಟ್ ಎಂಜಿನಿಯರ್ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ತೆಲಂಗಾಣದ ಹೈದರಾಬಾದ್​​ನಲ್ಲಿ ಉದ್ಯೋಗ ನೀಡಲಾಗುತ್ತದೆ.

ವೇತನ:
ಟ್ರೇನಿ ಎಂಜಿನಿಯರ್- ಮಾಸಿಕ ₹ 25,000-31,000
ಪ್ರಾಜೆಕ್ಟ್ ಎಂಜಿನಿಯರ್- ಮಾಸಿಕ ₹ 35,000- 50,000

ಇದನ್ನೂ ಓದಿ:KPSC: ಪ್ರೌಢಶಾಲಾ ಶಿಕ್ಷಕರ ನೇಮಕಾತಿ, ಮಾಸಿಕ ವೇತನ ₹ 62,400, ಇಂದೇ ಅರ್ಜಿ ಸಲ್ಲಿಸಿ

ಆಯ್ಕೆ ಪ್ರಕ್ರಿಯೆ:
ಎಂಜಿನಿಯರಿಂಗ್​ನಲ್ಲಿ ಗಳಿಸಿದ ಅಂಕಗಳ ಮಾನದಂಡ
ಸಂದರ್ಶನ

ಅರ್ಜಿ ಸಲ್ಲಿಸಲು ಹೀಗೆ ಮಾಡಿ
ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಪೋಸ್ಟ್​ ಮೂಲಕ ಕಳುಹಿಸಬೇಕು.

ಬೇರೆ ಬೇರೆ ಉದ್ಯೋಗ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ.

ಡೆಪ್ಯುಟಿ ಜನರಲ್ ಮ್ಯಾನೇಜರ್(HR)
ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್
I.E.ನಾಚರಾಂ
ಹೈದಾರಾಬಾದ್-500076
ತೆಲಂಗಾಣ
Published by:Latha CG
First published: