BHEL Recruitment 2021: ತಿಂಗಳಿಗೆ ₹ 50 ಸಾವಿರ ಸಂಬಳ, BE, B Tech ಆದವರಿಗೆ BHELನಲ್ಲಿ ಉದ್ಯೋಗ

BHEL Recruitment 2021: ಡಿಸೆಂಬರ್ 6ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಅಭ್ಯರ್ಥಿಗಳು ಪೋಸ್ಟ್​​ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಡಿಸೆಂಬರ್ 24 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ.

BHEL

BHEL

  • Share this:
BHEL Recruitment 2021: ಭಾರತ್ ಹೆವಿ ಎಲೆಕ್ಟ್ರಾನಿಕ್ಸ್​ ಲಿಮಿಟೆಡ್(Bharat Heavy Electronics Limited ) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 15 ಪ್ರಾಜೆಕ್ಟ್​ ಎಂಜಿನಿಯರ್(Project Engineer) ಹುದ್ದೆಗಳು ಖಾಲಿ ಇದ್ದು, ಬಿಇ, ಬಿ.ಟೆಕ್, ಬಿಎಸ್ಸಿ ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಡಿಸೆಂಬರ್ 6ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಅಭ್ಯರ್ಥಿಗಳು ಪೋಸ್ಟ್​​ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಡಿಸೆಂಬರ್ 24 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ.

ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಭಾರತ್ ಹೆವಿ ಎಲೆಕ್ಟ್ರಾನಿಕ್ಸ್​ ಲಿಮಿಟೆಡ್​ನ ಅಧಿಕೃತ ವೆಬ್​ಸೈಟ್​ bhel.com ಗೆ ಭೇಟಿ ನೀಡಬಹುದಾಗಿದೆ.

ಅರ್ಜಿ ಸಲ್ಲಿಸುವ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.

ಸಂಸ್ಥೆಭಾರತ್ ಹೆವಿ ಎಲೆಕ್ಟ್ರಾನಿಕ್ಸ್​ ಲಿಮಿಟೆಡ್
ಹುದ್ದೆಯ ಹೆಸರುಪ್ರಾಜೆಕ್ಟ್ ಎಂಜಿನಿಯರ್
ಒಟ್ಟು ಹುದ್ದೆಗಳು15
ವಿದ್ಯಾರ್ಹತೆಬಿಇ, ಬಿ.ಟೆಕ್, ಬಿಎಸ್ಸಿ
ಉದ್ಯೋಗದ ಸ್ಥಳಹೈದ್ರಾಬಾದ್
ವೇತನಮಾಸಿಕ ₹ 35,000- 50,000
ಅರ್ಜಿ ಸಲ್ಲಿಕೆ ವಿಧಾನಪೋಸ್ಟ್​(ಆಫ್​ಲೈನ್​)
ಅರ್ಜಿ ಸಲ್ಲಿಕೆ ಆರಂಭ ದಿನಾಂಕ06/12/2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ24/12/2021ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 06/12/2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 24/12/2021

ಇದನ್ನೂ ಓದಿ: BMRCL Jobs 2021: ಬೆಂಗಳೂರು ಮೆಟ್ರೋದಲ್ಲಿ 50 ಹುದ್ದೆಗಳಿಗೆ ಅರ್ಜಿ ಆಹ್ವಾನ- ತಿಂಗಳಿಗೆ 60 ಸಾವಿರದವರೆಗೆ ಸಂಬಳ

ಹುದ್ದೆಯ ಮಾಹಿತಿ:
ಪ್ರಾಜೆಕ್ಟ್​ ಎಂಜಿನಿಯರ್(ಎಲೆಕ್ಟ್ರಾನಿಕ್ಸ್)-6
ಪ್ರಾಜೆಕ್ಟ್​ ಎಂಜಿನಿಯರ್ (ಮೆಕ್ಯಾನಿಕಲ್)-6
ಪ್ರಾಜೆಕ್ಟ್​ ಎಂಜಿನಿಯರ್ (ಕಂಪ್ಯೂಟರ್ ಸೈನ್ಸ್​​)-3
ಒಟ್ಟು ಹುದ್ದೆಗಳು-15

ವಿದ್ಯಾರ್ಹತೆ:
ಪ್ರಾಜೆಕ್ಟ್​ ಎಂಜಿನಿಯರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಬೋರ್ಡ್​ನಿಂದ ಬಿಇ, ಬಿ.ಟೆಕ್, ಬಿಎಸ್ಸಿ ಪೂರ್ಣಗೊಳಿಸಿರಬೇಕು.

ವಯೋಮಿತಿ:
ಸಾಮಾನ್ಯ ವರ್ಗ- 28 ವರ್ಷ
ಒಬಿಸಿ- 31 ವರ್ಷ
SC/ST-33 ವರ್ಷ

ಉದ್ಯೋಗದ ಸ್ಥಳ:
ಪ್ರಾಜೆಕ್ಟ್​ ಎಂಜಿನಿಯರ್ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ತೆಲಂಗಾಣದ ಹೈದಾರಾಬಾದ್​​ನಲ್ಲಿ ಉದ್ಯೋಗ ನೀಡಲಾಗುತ್ತದೆ.

ವೇತನ:
ಪ್ರಾಜೆಕ್ಟ್​ ಎಂಜಿನಿಯರ್ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ  ₹ 35,000 -50,000 ವೇತನ ನೀಡಲಾಗುತ್ತದೆ.

ಆಯ್ಕೆ ಪ್ರಕ್ರಿಯೆ:
ದಾಖಲಾತಿ ಪರಿಶೀಲನೆ
ವೈಯಕ್ತಿಕ ಸಂದರ್ಶನ

ಇದನ್ನೂ ಓದಿ: NHB Jobs: ನ್ಯಾಷನಲ್ ಹೌಸಿಂಗ್ ಬ್ಯಾಂಕ್​ನಲ್ಲಿ ಡೆಪ್ಯೂಟಿ ಮ್ಯಾನೇಜರ್ ಸೇರಿದಂತೆ ವಿವಿಧ 17 ಹುದ್ದೆಗಳಿಗೆ ಅರ್ಜಿ ಆಹ್ವಾನ- ಹೀಗೆ ಅಪ್ಲೈ ಮಾಡಿ

ಅರ್ಜಿ ಸಲ್ಲಿಸಲು ಹೀಗೆ ಮಾಡಿ
ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಪೋಸ್ಟ್​ ಮೂಲಕ ಕಳುಹಿಸಬೇಕು.

ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಇಲಾಖೆಯಲ್ಲಿ ಕೆಲಸ ಹುಡುಕುತ್ತಿದ್ದೀರಾ? ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ.

ಮ್ಯಾನೇಜರ್(HR)
ಭಾರತ್ ಎಲೆಕ್ಟ್ರಾನಿಕ್ಸ್​ ಲಿಮಿಟೆಡ್
ರವೀಂದ್ರನಾಥ್ ಠಾಗೂರ್ ರಸ್ತೆ
ಮಚಲಿಪಟ್ನಂ-521001
ಆಂಧ್ರ ಪ್ರದೇಶ
Published by:Latha CG
First published: