BHEL Recruitment 2021: ಯಂಗ್ ಪ್ರೊಫೆಶನಲ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ BHEL, ಮಾಸಿಕ ವೇತನ ₹ 80,000

ಆನ್​ಲೈನ್(Online)​ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ, ನವೆಂಬರ್ 30 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ.

BHEL

BHEL

  • Share this:
BHEL Recruitment 2021: ಭಾರತ್ ಹೆವಿ ಎಲೆಕ್ಟ್ರಾನಿಕ್ಸ್​ ಲಿಮಿಟೆಡ್(Bharat Heavy Electronics Limited)​​ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 10 ಯಂಗ್​ ಪ್ರೊಫೆಶನಲ್ (Young Professional) ಹುದ್ದೆಗಳು ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಆನ್​ಲೈನ್(Online)​ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ, ನವೆಂಬರ್ 30 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ.

BHEL ಕಂಪನಿಯು ಉದ್ಯೋಗಿಗಳಿಗೆ ಉತ್ತಮ ಸಂಬಳದ ಪ್ಯಾಕೇಜ್​​ನೊಂದಿಗೆ ಯುವ ವೃತ್ತಿಪರ ಹುದ್ದೆಗೆ ಅಭ್ಯರ್ಥಿಗಳನ್ನು ನೇಮಿಸಿಕೊಳ್ಳುತ್ತಿದೆ. BHEL ತನ್ನ ಕಾರ್ಪೊರೇಟ್​ ಕಚೇರಿಯಲ್ಲಿ ಕಾರ್ಪೋರೇಟ್ ಸ್ಟ್ರಾಟಜಿ ಮ್ಯಾನೇಜ್​ಮೆಂಟ್​ ಗ್ರೂಪ್​​ನ ಪ್ರದೇಶದಲ್ಲಿ ಯುವ ವೃತ್ತಿಪರ ಹುದ್ದೆಗೆ ಅರ್ಜಿದಾರರನ್ನು ಆಹ್ವಾನಿಸಿದೆ.

ಇದನ್ನೂ ಓದಿ: BHEL Recruitment 2021: ತಿಂಗಳಿಗೆ ₹ 83,000 ಸಂಬಳ, MBBS​ ಪದವೀಧರರಿಗೆ BHELನಲ್ಲಿ ಉದ್ಯೋಗ

ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.





































ಸಂಸ್ಥೆ ಭಾರತ್​ ಹೆವಿ ಎಲೆಕ್ಟ್ರಾನಿಕ್ಸ್​​ ಲಿಮಿಟೆಡ್
ಹುದ್ದೆಯ ಹೆಸರು ಯಂಗ್ ಪ್ರೊಫೆಶನಲ್
ಒಟ್ಟು ಹುದ್ದೆಗಳು 10
ಅರ್ಜಿ ಸಲ್ಲಿಸುವ ವಿಧಾನ ಆನ್​ಲೈನ್​
ವಯೋಮಿತಿ ಗರಿಷ್ಠ 30 ವರ್ಷ
ವಿದ್ಯಾರ್ಹತೆ ಸ್ನಾತಕೋತ್ತರ ಪದವಿ/ ಎಂಜಿನಿಯರಿಂಗ್
ವೇತನ ಮಾಸಿಕ ₹ 80,000
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 30/11/2021



 BHEL ನೇಮಕಾತಿ 2021: ಅರ್ಹತಾ ಮಾನದಂಡ

ವಯಸ್ಸಿನ ಮಿತಿ:
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು ನವೆಂಬರ್ 1, 2021 ಕ್ಕೆ 30 ವರ್ಷ ಮೀರಿರಬಾರದು.

ಇದನ್ನೂ ಓದಿ:Karnataka High Court Recruitment 2021: ತಿಂಗಳಿಗೆ ₹ 63,070 ಸಂಬಳ; 21 ಜಿಲ್ಲಾ ನ್ಯಾಯಾಧೀಶರ ಹುದ್ದೆಗೆ ಅಧಿಸೂಚನೆ ಪ್ರಕಟ

ಶೈಕ್ಷಣಿಕ ಅರ್ಹತೆ:
ಅರ್ಜಿದಾರರು ಸ್ನಾತಕೋತ್ತರ ಪದವಿ ಅಥವಾ 2 ವರ್ಷದ ಸ್ನಾತಕೋತ್ತರ ಡಿಪ್ಲೊಮಾ ಇನ್ ಮ್ಯಾನೇಜ್‌ಮೆಂಟ್ ಪೂರ್ಣಗೊಳಿಸಿರಬೇಕು. ಪ್ರತಿಷ್ಠಿತ ಸಂಸ್ಥೆಗಳಲ್ಲಿ ಎಂಜಿನಿಯರಿಂಗ್ ಮಾಡಿದ ಪದವೀಧರರಿಗೆ ಆದ್ಯತೆ ನೀಡಲಾಗುತ್ತದೆ. ಅರ್ಜಿದಾರರು ಕನಿಷ್ಠ ಎರಡು ವರ್ಷಗಳ ಕೆಲಸದ ಅನುಭವವನ್ನು ಹೊಂದಿರಬೇಕು.

BHEL ನೇಮಕಾತಿ 2021: ವೇತನ
ಯುವ ವೃತ್ತಿಪರ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗೆ ತಿಂಗಳಿಗೆ ₹ 80,000 ವೇತನವನ್ನು ನೀಡಲಾಗುತ್ತದೆ. ಜೊತೆಗೆ ಕಂಪನಿಯು ಒದಗಿಸುವ ಹಲವಾರು ಇತರ ಪ್ರಯೋಜನಗಳನ್ನು ನೀಡಲಾಗುತ್ತದೆ.
ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಇಲಾಖೆಯಲ್ಲಿ ಕೆಲಸ ಹುಡುಕುತ್ತಿದ್ದೀರಾ? ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ.


ಇತರೆ ಮಾಹಿತಿ:
ಸಂಬಳದ ಹೊರತಾಗಿ, ಅಭ್ಯರ್ಥಿಯು ಕುಟುಂಬದ (ಅಂದರೆ ಸ್ವಯಂ ಮತ್ತು ಸಂಗಾತಿಯ) ಮೆಡಿಕ್ಲೈಮ್ ಪಾಲಿಸಿಗಾಗಿ ರೂ 3500 + GST ವರೆಗಿನ ವಾರ್ಷಿಕ ಪ್ರೀಮಿಯಂ ಮರುಪಾವತಿಗೆ ಅರ್ಹರಾಗಿರುತ್ತಾರೆ.
Published by:Latha CG
First published: