BHEL Recruitment: 184 ಟ್ರೇಡ್​ ಅಪ್ರೆಂಟಿಸ್​ಗೆ ಅರ್ಜಿ ಆಹ್ವಾನಿಸಿದ ಬಿಎಚ್​ಇಎಲ್​; ಐಟಿಐ ಆದವರಿಗೆ ಅವಕಾಶ

ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಜೂನ್​​ 21 ಆಗಿದೆ.

184 ಹುದ್ದೆಗೆ ಅರ್ಜಿ ಹಾಕಿ

184 ಹುದ್ದೆಗೆ ಅರ್ಜಿ ಹಾಕಿ

  • Share this:
    ಭಾರತ್ ಹೆವಿ ಎಲೆಕ್ಟ್ರಿಕಲ್ಸ್ ಲಿಮಿಟೆಡ್ (Bharat Heavy Electricals Limited) 184 ಟ್ರೇಡ್​ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗೆ ಅಧಿಕೃತ ಅಧಿಸೂಚನೆ ಹೊರಡಿಸಿದೆ. ಐಟಿಐ (ITI) ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಹರಿದ್ವಾರದಲ್ಲಿ ಕಾರ್ಯ ನಿರ್ವಹಿಸಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಆನ್​ಲೈನ್ (Online)​ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಜೂನ್​​ 21 ಆಗಿದೆ.

    ಈ ನೇಮಕಾತಿಗೆ ಸಂಬಂಧಿಸಿದ ಇತರ ಪ್ರಮುಖ ಮಾಹಿತಿಗಳಾದ ಅರ್ಜಿ ಪ್ರಕ್ರಿಯೆ, ಖಾಲಿ ಹುದ್ದೆಗಳ ಸಂಖ್ಯೆ, ವೇತನಗಳು, ಆಯ್ಕೆ ವಿಧಾನ ಇತ್ಯಾದಿಗಳ ಮಾಹಿತಿ ಈ ಕೆಳಗಿನಂತಿವೆ.

    ಸಂಸ್ಥೆ : ಭಾರತ್ ಹೆವಿ ಎಲೆಕ್ಟ್ರಿಕಲ್ಸ್ ಲಿಮಿಟೆಡ್
    ಹುದ್ದೆ: ಅಪ್ರೆಂಟಿಸ್​
    ಒಟ್ಟು ಹುದ್ದೆಗಳು: 184
    ಕಾರ್ಯ ನಿರ್ವಹಣೆ ಸ್ಥಳ: ಹರಿದ್ವಾರ, ಉತ್ತರಾಖಂಡ್​
    ವೇತನ: ಭಾರತ್ ಹೆವಿ ಎಲೆಕ್ಟ್ರಿಕಲ್ಸ್ ಲಿಮಿಟೆಡ್ ನಿಯಮ ಅನುಸಾರ















































    ಹುದ್ದೆಹುದ್ದೆ ಸಂಖ್ಯೆ
    ಫಿಟ್ಟರ್65
    ಟರ್ನರ್19
    ಮೆಷಿನಿಸ್ಟ್43
    ವೆಲ್ಡರ್20
    ಎಲೆಕ್ಟ್ರಿಷಿಯನ್26
    ಡ್ರಾಫ್ಟ್‌ಮೆನ್ 02
    ಎಲೆಕ್ಟ್ರಾನಿಕ್ಸ್01
    ಮೋಟಾರ್ ಮೆಕಾನಿಕಲ್​​01
    ಬಡಗಿ01
    ಫೌಂಡ್ರಿ ಮ್ಯಾನ್06

    ವಿದ್ಯಾರ್ಹತೆ: ಅಧಿಸೂಚನೆ ಅನ್ವಯ ಟ್ರೇಡ್​ ಅಪ್ರೆಂಟಿಸ್​ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿ ಐಟಿಐ ಪದವಿಯನ್ನು ಪಡೆದಿರಬೇಕು.

    ಇದನ್ನು ಓದಿ: ಕ್ಯಾಂಪ್ಕೋನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ; ಬಿಎಸ್ಸಿ ಪದವೀಧರರಿಗೆ ಅವಕಾಶ

    ವಯೋಮಿತಿ
    ಅಧಿಸೂಚನೆ ಅನ್ವಯ ಅಭ್ಯರ್ಥಿಯು ಕನಿಷ್ಠ 18 ಮತ್ತು ಗರಿಷ್ಠ 27 ವರ್ಷ ಆಗಿರಬೇಕು.

    ವಯೋಮಿತಿ ಸಡಿಲಿಕೆ
    ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 3 ವರ್ಷ ವಯೋಮಿತಿ ಸಡಿಲಿಕೆ
    ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಡದ ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆ

    ಅರ್ಜಿ ಸಲ್ಲಿಕೆ
    ಆನ್​ಲೈನ್​ ಮುಖಾಂತರ

    ಅರ್ಜಿ ಶುಲ್ಕ
    ಅರ್ಜಿ ಶುಲ್ಕ ವಿನಾಯಿತಿ ನೀಡಲಾಗಿದೆ

    ಆಯ್ಕೆ ಪ್ರಕ್ರಿಯೆ
    ಮೆರಿಟ್​ ಆಧಾರದ ಮೇಲೆ

    ಇದನ್ನು ಓದಿ: ಗಡಿ ಭದ್ರತಾ ಪಡೆಯಲ್ಲಿ ಭರ್ಜರಿ ನೇಮಕಾತಿ; 10ನೇ ತರಗತಿ ಪಾಸ್​ ಆಗಿದ್ರೆ ಸಾಕು

    ಪ್ರಮುಖ ದಿನಾಂಕ
    ಅರ್ಜಿ ಸಲ್ಲಿಕೆ ಆರಂಭದ ದಿನಾಂಕ 13ಜೂನ್​ 2022
    ಅರ್ಜಿ ಸಲ್ಲಿಕೆ ಕಡೆಯ ದಿನಾಂಕ 21 ಜೂನ್​ 2022

    ಪ್ರಮುಖ ಲಿಂಕ್
    ಅಧಿಕೃತ ಅಧಿಸೂಚನೆ ಪಿಡಿಎಫ್​ಗೆ ಇಲ್ಲಿ ಕ್ಲಿಕ್​​ ಮಾಡಿ
    ಅಧಿಕೃತ ವೆಬ್​ಸೈಟ್ : https://hwr.bhel.com

    ವಿಶೇಷ ಸೂಚನೆ

    ಅಪ್ರೆಂಟಿಸ್​ ಹುದ್ದೆಗೆ ಅರ್ಜಿ ಸಲ್ಲಿಸಲು ಮೊದಲ ಬಾರಿ ಮುಂದಾಗುವ ಅಭ್ಯರ್ಥಿಗಳು ಹೊಸದಾಗಿ ಈ ಲಿಂಕ್​ನಲ್ಲಿ ತಮ್ಮ ದಾಖಲಾತಿ ಮಾಡಿಕೊಳ್ಳಬಹುದಾಗಿದೆ

    ಅರ್ಜಿ ಸಲ್ಲಿಕೆ ವಿಧಾನ

    ನೇಮಕಾತಿ ಅಧಿಸೂಚನೆ 2022 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಳ್ಳಿ.

    -ಸಂವಹನ ಉದ್ದೇಶಕ್ಕಾಗಿ ದಯವಿಟ್ಟು ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು ಹೊಂದಿರಿ ಮತ್ತು ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ಇತ್ತೀಚಿನ ಫೋಟೋಗ್ರಾಫ್, ರೆಸ್ಯೂಮ್, ಯಾವುದೇ ಅನುಭವವಿದ್ದರೆ ಇತ್ಯಾದಿ ದಾಖಲೆಗಳನ್ನು ಸಿದ್ಧವಾಗಿಟ್ಟುಕೊಳ್ಳಿ.

    -ಮೇಲಿನ ಲಿಂಕ್‌ನಿಂದ ಅರ್ಜಿಯನ್ನು ಡೌನ್‌ಲೋಡ್ ಮಾಡಿ. ನಿಗದಿತ ನಮೂನೆಯಲ್ಲಿ ಫಾರ್ಮ್ ಅನ್ನು ಭರ್ತಿ ಮಾಡಿ.

    -ಎಲ್ಲಾ ಮಾಹಿತಿಯನ್ನು ಪೂರ್ಣಗೊಳಿಸಿದ ನಂತರ, ಒದಗಿಸಿದ ವಿವರಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿ. ನಂತರ ಸಲ್ಲಿಸು ಬಟನ್ ಅನ್ನು ಕ್ಲಿಕ್ ಮಾಡಿ
    Published by:Seema R
    First published: