BIS Recruitment: ಕೇಂದ್ರ ಸರ್ಕಾರದ ಈ ಹುದ್ದೆಗೆ ಅರ್ಜಿ ಸಲ್ಲಿಸಲು ನಾಳೆಯೇ ಕಡೆಯ ದಿನ

ಒಟ್ಟು 100 ಹುದ್ದೆಗಳ ಭರ್ತಿಗೆ ನೇಮಕಾತಿ ಹೊರಡಿಸಲಾಗಿದೆ. ಕೇಂದ್ರ ಸರ್ಕಾರದ ಈ ಹುದ್ದೆಯನ್ನು ಕಾರ್ಯ ನಿರ್ವಹಿಸಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ಬೇಗ ಅರ್ಜಿ ಸಲ್ಲಿಸಿ

ಬೇಗ ಅರ್ಜಿ ಸಲ್ಲಿಸಿ

  • Share this:
    ಬ್ಯೂರೋ ಆಫ್ ಇಂಡಿಯನ್ ಸ್ಟ್ಯಾಂಡರ್ಡ್ಸ್ (Bureau of Indian Standards)   ಗ್ರಾಜುಯೇಟ್ ಇಂಜಿನಿಯರ್ (Graduate Engineer)  ಹುದ್ದೆಗಳಿಗೆ ಅಧಿಸೂಚನೆ ಪ್ರಕಟಿಸಿದೆ. ಒಟ್ಟು 100 ಹುದ್ದೆಗಳ ಭರ್ತಿಗೆ ನೇಮಕಾತಿ ಹೊರಡಿಸಲಾಗಿದೆ. ಕೇಂದ್ರ ಸರ್ಕಾರದ ಈ ಹುದ್ದೆಯನ್ನು ಕಾರ್ಯ ನಿರ್ವಹಿಸಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅಭ್ಯರ್ಥಿಗಳು ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಆಗಸ್ಟ್​ 27 ಆಗಿದೆ.

    ಈ ಹುದ್ದೆಗಳನ್ನು ಎರಡು ವರ್ಷದ ಅವಧಿಗೆ ತಾತ್ಕಾಲಿಕವಾಗಿ ಒಪ್ಪಂದದ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಈ ನೇಮಕಾತಿಗೆ ಸಂಬಂಧಿಸಿದ ಇತರ ಪ್ರಮುಖ ಮಾಹಿತಿಗಳಾದ ಅರ್ಜಿ ಪ್ರಕ್ರಿಯೆ, ಖಾಲಿ ಹುದ್ದೆಗಳ ಸಂಖ್ಯೆ, ವೇತನಗಳು, ಆಯ್ಕೆ ವಿಧಾನ ಇತ್ಯಾದಿಗಳ ಮಾಹಿತಿ ಈ ಕೆಳಗಿನಂತಿವೆ.




























    ಹುದ್ದೆ ಮಾಹಿತಿಹುದ್ದೆ ವಿವರ
    ಸಂಸ್ಥೆಬ್ಯೂರೋ ಆಫ್ ಇಂಡಿಯನ್ ಸ್ಟ್ಯಾಂಡರ್ಡ್ಸ್ (BIS)
    ಹುದ್ದೆಗ್ರಾಜುಯೇಟ್ ಇಂಜಿನಿಯರ್
    ಹುದ್ದೆಗಳ ಸಂಖ್ಯೆ100
    ಕಾರ್ಯ ನಿರ್ವಹಣೆ ಸ್ಥಳಭಾರತದಾದ್ಯಂತ
    ವೇತನ50000 ರೂ ಮಾಸಿಕ

    ಶೈಕ್ಷಣಿಕ ಅರ್ಹತೆ: ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾನಿಲಯಗಳಿಂದ ಬಿಇ ಅಥವಾ ಬಿಟೆಕ್, ಇಇಇ, ಎಫ್​ಸಿಟಿ, ಎಂಸಿಎಂನಲ್ಲಿ ಸ್ನಾತಕೋತ್ತರ ಪದವಿಯನ್ನು ಪೂರ್ಣಗೊಳಿಸಿರಬೇಕು.

    ಇದನ್ನು ಓದಿ: ಆರ್ಮಿ ಶಾಲೆಗಳಲ್ಲಿ ಶಿಕ್ಷಕರ ನೇಮಕಾತಿ; ಕರ್ನಾಟಕ ವಲಯದಲ್ಲೂ ಇದೆ ಹುದ್ದೆ

    ವಯಸ್ಸಿನ ಮಿತಿ: ಬ್ಯೂರೋ ಆಫ್ ಇಂಡಿಯನ್ ಸ್ಟ್ಯಾಂಡರ್ಡ್ಸ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಕನಿಷ್ಠ  27  ಗರಿಷ್ಠ 35 ವರ್ಷಗಳು ಮೀರಿರಬಾರದು.

    ವಯೋಮಿತಿ ಸಡಿಲಿಕೆ:
    ಬ್ಯೂರೋ ಆಫ್ ಇಂಡಿಯನ್ ಸ್ಟ್ಯಾಂಡರ್ಡ್ಸ್ ನಿಯಮಗಳ ಪ್ರಕಾರ

    ಅರ್ಜಿ ಶುಲ್ಕ:
    ಅರ್ಜಿ ಶುಲ್ಕ ವಿನಾಯಿತಿ ನೀಡಲಾಗಿದೆ

    ಆಯ್ಕೆ ಪ್ರಕ್ರಿಯೆ:
    ಪ್ರಾಯೋಗಿಕ ಮೌಲ್ಯಮಾಪನ, ಲಿಖಿತ ಮೌಲ್ಯಮಾಪನ, ತಾಂತ್ರಿಕ ಜ್ಞಾನದ ಮೌಲ್ಯಮಾಪನ ಮತ್ತು ಸಂದರ್ಶನ

    ಇದನ್ನು ಓದಿ: ಕೊಪ್ಪಳದಲ್ಲಿದೆ 72 ಅಂಗನವಾಡಿ ಹುದ್ದೆ; ಇಲ್ಲಿದೆ ನೇಮಕಾತಿ ವಿವರ

    ಪ್ರಮುಖ ದಿನಾಂಕಗಳು:
    ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 06  ಆಗಸ್ಟ್​ 2022
    ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 27 ಆಗಸ್ಟ್ 2022

    ಅಧಿಸೂಚನೆ ಪ್ರಮುಖ ಲಿಂಕ್‌ಗಳು
    ಅಧಿಕೃತ ಅಧಿಸೂಚನೆ ಪಿಡಿಎಫ್: ಇಲ್ಲಿ ಕ್ಲಿಕ್ ಮಾಡಿ
    ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿ: ಇಲ್ಲಿ ಕ್ಲಿಕ್ ಮಾಡಿ
    ಅಧಿಕೃತ ವೆಬ್‌ಸೈಟ್: bis.gov.in

    ಅರ್ಜಿ ಸಲ್ಲಿಕೆ ಪ್ರಕ್ರಿಯೆ

    ಅಧಿಸೂಚನೆ 2022 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಂಡು ಮುಂದುವರೆಯಿರಿ.

    -ಅಧಿಕೃತ ಅಧಿಸೂಚನೆಯಿಂದ ಅರ್ಜಿ ನಮೂನೆಯಲ್ಲಿ ಫಾರ್ಮ್ ಅನ್ನು ಭರ್ತಿ ಮಾಡಿ.

    - ಸಂವಹನ ಉದ್ದೇಶಕ್ಕಾಗಿ ದಯವಿಟ್ಟು ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆ ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ಇತ್ತೀಚಿನ ಫೋಟೋಗ್ರಾಫ್ ನೀಡಿ. ರೆಸ್ಯೂಮ್, ಯಾವುದೇ ಅನುಭವವಿದ್ದರೆ ಇತ್ಯಾದಿ ದಾಖಲೆಗಳನ್ನು ನೀಡಿ.

    -ಎಲ್ಲಾ ಮಾಹಿತಿಯನ್ನು ಪೂರ್ಣಗೊಳಿಸಿದ ನಂತರ, ಒದಗಿಸಿದ ವಿವರಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿದ ಬಳಿಕ ಸಲ್ಲಿಸು ಬಟನ್​ ಕ್ಲಿಕ್​ ಮಾಡಿ

    Published by:Seema R
    First published: