ಬೆಂಗಳೂರು ಮೆಟ್ರೋ ರೈಲು ನಿಗಮ ಮಂಡಳಿಯು(Bangalore Metro Rail Corporation Limited) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಡೆಪ್ಯುಟಿ ಜನರಲ್ ಮ್ಯಾನೇಜರ್ ಹುದ್ದೆಗಳು ಖಾಲಿ ಇದ್ದು, ಅರ್ಹ ಅಭ್ಯರ್ಥಿಗಳು(Eligible candidates) ಅರ್ಜಿ ಸಲ್ಲಿಸಬಹುದಾಗಿದೆ. ಸೆಪ್ಟೆಂಬರ್ 28ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಅಕ್ಟೋಬರ್ 27, 2021. ಆಫ್ಲೈನ್(ಪೋಸ್ಟ್-Offline/Post) ಮೂಲಕ ಅರ್ಜಿ ಹಾಕಬೇಕು. ಉದ್ಯೋಗಾಂಕ್ಷಿ(Jobseekers)ಗಳು bmrc.co.in ಗೆ ಭೇಟಿ ನೀಡಿ ಹುದ್ದೆಯ ಅಧಿಸೂಚನೆ ಪ್ರಕಟಣೆಯನ್ನು ನೋಡಬಹುದಾಗಿದೆ.
ಯಾವುದೇ ವಿಭಾಗದಲ್ಲಿ ಪದವಿ ಪಡೆದಿರುವ, ಬಿ.ಕಾಂ ಪದವೀಧರರು ಹಾಗೂ ICAI ನ ಸದಸ್ಯರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
ಸಂಸ್ಥೆ |
ಬೆಂಗಳೂರು ಮೆಟ್ರೋ ರೈಲು ಮಂಡಳಿ ನಿಗಮ |
ಹುದ್ದೆಯ ಹೆಸರು |
ಡೆಪ್ಯುಟಿ ಜನರಲ್ ಮ್ಯಾನೇಜರ್ |
ಒಟ್ಟು ಹುದ್ದೆಗಳು |
02 |
ಉದ್ಯೋಗದ ಸ್ಥಳ |
ಬೆಂಗಳೂರು |
ವಯೋಮಿತಿ |
50 ವರ್ಷ |
ವೇತನ |
ಮಾಸಿಕ ₹1,25,000 |
ಅರ್ಜಿ ಸಲ್ಲಿಸುವ ಬಗೆ |
ಆಫ್ಲೈನ್ |
ಅರ್ಜಿ ಸಲ್ಲಿಕೆ ಆರಂಭ ದಿನಾಂಕ |
28/09/2021 |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ |
27/10/2021 |
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 28/09/2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 27/10/2021
ಆಯ್ಕೆ ಪ್ರಕ್ರಿಯೆ:
ಸಂದರ್ಶನ- ಶಾರ್ಟ್ಲಿಸ್ಟ್ ಮಾಡಿದ ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
ಇದನ್ನೂ ಓದಿ:BMRCL Recruitment 2021: ನಿವೃತ್ತಿ ಆಗಿರೋ ಹಿರಿಯರಿಗೆ ಬೆಂಗಳೂರು ಮೆಟ್ರೋದಲ್ಲಿ ಕೆಲಸ, ಮಿನಿಮಮ್ 30,000 ಸಂಬಳ ಗ್ಯಾರಂಟಿ
ಅರ್ಜಿ ಶುಲ್ಕ:
ಯಾವುದೇ ಅರ್ಜಿ ಶುಲ್ಕ ಇಲ್ಲ.
ಅರ್ಹತೆ:
ಡೆಪ್ಯುಟಿ ಜನರಲ್ ಮ್ಯಾನೇಜರ್ ಹುದ್ದೆಗೆ ಗುತ್ತಿಗೆ ಆಧಾರದ ಮೇಲೆ/ ಡೆಪ್ಯುಟೇಶನ್ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಗುತ್ತಿಗೆ ಆಧಾರದ ಮೇಲೆ
ಡೆಪ್ಯುಟಿ ಜನರಲ್ ಮ್ಯಾನೇಜರ್ ಹುದ್ದೆಗೆ ಅರ್ಜಿ ಸಲ್ಲಿಸುವವರು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಸಂಸ್ಥೆಯಿಂದ ವಾಣಿಜ್ಯ ವಿಭಾಗದಲ್ಲಿ ಪದವಿ ಪಡೆದಿರಬೇಕು ಹಾಗೂ ಭಾರತದ ಚಾರ್ಟರ್ಡ್ ಅಕೌಂಟೆಂಟ್ಗಳ ಸಂಸ್ಥೆ / ಭಾರತದ ವೆಚ್ಚ ಲೆಕ್ಕಾಧಿಕಾರಿಗಳ ಸಂಸ್ಥೆಯ ಸದಸ್ಯನಾಗಿರಬೇಕು.
ಹಣಕಾಸು ಮತ್ತು ಅಕೌಂಟ್ಸ್/ಕಾಸ್ಟಿಂಗ್ ಕ್ಷೇತ್ರದಲ್ಲಿ ಕನಿಷ್ಠ 15 ವರ್ಷಗಳ ಅನುಭವ ಇರಬೇಕು. ಇದರಲ್ಲಿ ಮ್ಯಾನೇಜರ್ ಹುದ್ದೆಯಲ್ಲಿ ಕನಿಷ್ಠ 3 ವರ್ಷಗಳ ಅನುಭವವನ್ನು ಒಳಗೊಂಡಿರಬೇಕು. ಕಂಪ್ಯೂಟರ್ ಬಳಕೆಯಲ್ಲಿ ನಿಪುಣರಿರಬೇಕು.
ಡೆಪ್ಯುಟೇಶನ್
ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ಪಡೆದಿರಬೇಕು. ಭಾರತೀಯ ಖಾತೆಗಳು ಮತ್ತು ಲೆಕ್ಕ ಪರಿಶೋಧಕ ಸೇವೆ/ಭಾರತೀಯ ರೈಲ್ವೆ ಖಾತೆಗಳ ಸೇವೆಗಳ ಸದಸ್ಯರಾಗಿರಬೇಕು.
ಅರ್ಜಿ ಸಲ್ಲಿಸಿದ ದಿನಾಂಕದಂದು ಅಭ್ಯರ್ಥಿಯು 7ನೇ ವೇತನ ಆಯೋಗದ ಮ್ಯಾಟ್ರಿಕ್ಸ್ನ ಹಂತ 11/12ರಲ್ಲಿ ಕೆಲಸ ಮಾಡುತ್ತಿರಬೇಕು. ಕಂಪ್ಯೂಟರ್ ಬಳಕೆಯಲ್ಲಿ ನಿಪುಣರಾಗಿರಬೇಕು.
ಅರ್ಜಿ ಸಲ್ಲಿಸುವುದು ಹೇಗೆ?
ಬಿಎಂಆರ್ಸಿಎಲ್ನಲ್ಲಿ ಖಾಲಿ ಇರುವ ಡೆಪ್ಯುಟಿ ಜನರಲ್ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರು ಆಫ್ಲೈನ್/ಪೋಸ್ಟ್ ಮೂಲಕ ಅರ್ಜಿ ಹಾಕಬೇಕು. ಸರಿಯಾಗಿ ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಈ ಕೆಳಗಿನ ವಿಳಾಸಕ್ಕೆ ಲಕೋಟೆ(ಎನ್ವಲಪ್)ಯಲ್ಲಿ ‘‘ಡೆಪ್ಯುಟಿ ಜನರಲ್ ಮ್ಯಾನೇಜರ್ ಹುದ್ದೆಗೆ ಅರ್ಜಿ‘‘ ಎಂದು ನಮೂದಿಸಿ ಕಳುಹಿಸಬೇಕು. ಅರ್ಜಿಗಳನ್ನು ಸ್ವೀಕರಿಸಲು ಕೊನೆಯ ದಿನಾಂಕ 27/10/2021 ರ ಸಂಜೆ 4 ಗಂಟೆ.
General Manager (HR),
Bangalore Metro Rail Corporation Limited,
III Floor,
BMTC Complex,
K.H. Road,
Shanthinagar,
Bangalore- 560027
ಈ ವಿಳಾಸಕ್ಕೆ ಅರ್ಜಿ ಸಲ್ಲಿಸಬೇಕು.
ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಇಲಾಖೆಯಲ್ಲಿ ಕೆಲಸ ಹುಡುಕುತ್ತಿದ್ದೀರಾ? ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ