BMRCL Recruitment 2022: ಬೆಂಗಳೂರು ಮೆಟ್ರೋ ರೈಲು ಕಾರ್ಪೋರೇಷನ್ ಲಿಮಿಟೆಡ್(Bengaluru Metro Rail Corporation Limited) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 11 ಅಸಿಸ್ಟೆಂಟ್ ಮ್ಯಾನೇಜರ್, ಸೀನಿಯರ್ ಟ್ರಾನ್ಸ್ಪೋರ್ಟ್ ಪ್ಲ್ಯಾನರ್ ಹುದ್ದೆಗಳು ಖಾಲಿ ಇದ್ದು, ಬಿಇ, ಬಿ.ಟೆಕ್, ಎಂಬಿಎ, ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರುವವರು ಅರ್ಜಿ ಸಲ್ಲಿಸಬಹುದು. ಜನವರಿ 21ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಅಭ್ಯರ್ಥಿಗಳು ಆನ್ಲೈನ್(Online) ಮೂಲಕ ಅರ್ಜಿ ಸಲ್ಲಿಸಬೇಕು. ಫೆಬ್ರವರಿ 21, 2022 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ(Last Date). ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಬೆಂಗಳೂರು ಮೆಟ್ರೋದ ಅಧಿಕೃತ ವೆಬ್ಸೈಟ್ english.bmrc.co.in ಗೆ ಭೇಟಿ ನೀಡಬಹುದು.
ಅರ್ಜಿ ಸಲ್ಲಿಸುವ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
ಸಂಸ್ಥೆ |
ಬೆಂಗಳೂರು ಮೆಟ್ರೋ ರೈಲು ಕಾರ್ಪೋರೇಷನ್ ಲಿಮಿಟೆಡ್ |
ಹುದ್ದೆಯ ಹೆಸರು |
ಅಸಿಸ್ಟೆಂಟ್ ಮ್ಯಾನೇಜರ್, ಸೀನಿಯರ್ ಟ್ರಾನ್ಸ್ಪೋರ್ಟ್ ಪ್ಲ್ಯಾನರ್ |
ಒಟ್ಟು ಹುದ್ದೆಗಳು |
11 |
ವಿದ್ಯಾರ್ಹತೆ |
ಬಿಇ, ಬಿ.ಟೆಕ್, ಎಂಬಿಎ, ಸ್ನಾತಕೋತ್ತರ ಪದವಿ |
ಉದ್ಯೋಗದ ಸ್ಥಳ |
ಬೆಂಗಳೂರು |
ವೇತನ |
ಮಾಸಿಕ ₹ 50,000-1,80,000 |
ಅರ್ಜಿ ಸಲ್ಲಿಕೆ ವಿಧಾನ |
ಆನ್ಲೈನ್ |
ಅರ್ಜಿ ಸಲ್ಲಿಕೆ ಆರಂಭ ದಿನಾಂಕ |
21/01/2022 |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ |
21/02/2022 |
ಹುದ್ದೆಯ ಮಾಹಿತಿ:
ಚೀಫ್ ಎಂಜಿನಿಯರ್ಸ್/ಅಡ್ವೈಸರ್ಸ್-4
ಸೀನಿಯರ್ ಟ್ರಾನ್ಸ್ಪೋರ್ಟ್ ಪ್ಲ್ಯಾನರ್(ಕನ್ಸಲ್ಟೆಂಟ್)-1
ಅಸಿಸ್ಟೆಂಟ್ ಮ್ಯಾನೇಜರ್(ಪ್ರಾಪರ್ಟಿ ಡೆವಲಪ್ಮೆಂಟ್)-6
ಇದನ್ನೂ ಓದಿ: Government Job: ರಾಜ್ಯ ಮಾಹಿತಿ ತಂತ್ರಜ್ಞಾನ ಸಮಾಲೋಚಕರ ನೇಮಕಾತಿಗೆ ಅರ್ಜಿ ಆಹ್ವಾನ- ತಿಂಗಳಿಗೆ 1 ಲಕ್ಷದ ವರೆಗೆ ಸಂಬಳ
ವಿದ್ಯಾರ್ಹತೆ:
ಚೀಫ್ ಎಂಜಿನಿಯರ್ಸ್/ಅಡ್ವೈಸರ್ಸ್-ಸಿವಿಲ್ ಎಂಜಿನಿಯರಿಂಗ್ನಲ್ಲಿ ಬಿಇ, ಬಿ.ಟೆಕ್
ಸೀನಿಯರ್ ಟ್ರಾನ್ಸ್ಪೋರ್ಟ್ ಪ್ಲ್ಯಾನರ್(ಕನ್ಸಲ್ಟೆಂಟ್)- ಸಿವಿಲ್ ಎಂಜಿನಿಯರಿಂಗ್, ಟ್ರಾನ್ಸ್ಪೋರ್ಟ್ ಪ್ಲ್ಯಾನಿಂಗ್ನಲ್ಲಿ ಸ್ನಾತಕೋತ್ತರ ಪದವಿ
ಅಸಿಸ್ಟೆಂಟ್ ಮ್ಯಾನೇಜರ್(ಪ್ರಾಪರ್ಟಿ ಡೆವಲಪ್ಮೆಂಟ್)- ಎಂಬಿಎ, ಎಕನಾಮಿಕ್ಸ್/ಕಾಮರ್ಸ್ನಲ್ಲಿ ಸ್ನಾತಕೋತ್ತರ ಪದವಿ.
ಅನುಭವ
ಚೀಫ್ ಎಂಜಿನಿಯರ್ಸ್/ಅಡ್ವೈಸರ್ಸ್- ಕನಿಷ್ಠ 18 ವರ್ಷ ಅನುಭವ
ಸೀನಿಯರ್ ಟ್ರಾನ್ಸ್ಪೋರ್ಟ್ ಪ್ಲ್ಯಾನರ್(ಕನ್ಸಲ್ಟೆಂಟ್)- 8ರಿಂದ 10 ವರ್ಷ ಅನುಭವ
ಅಸಿಸ್ಟೆಂಟ್ ಮ್ಯಾನೇಜರ್(ಪ್ರಾಪರ್ಟಿ ಡೆವಲಪ್ಮೆಂಟ್)-ಕನಿಷ್ಠ 5 ವರ್ಷ ಅನುಭವ
ವಯೋಮಿತಿ:
ಚೀಫ್ ಎಂಜಿನಿಯರ್ಸ್/ಅಡ್ವೈಸರ್ಸ್- 55-63 ವರ್ಷ
ಸೀನಿಯರ್ ಟ್ರಾನ್ಸ್ಪೋರ್ಟ್ ಪ್ಲ್ಯಾನರ್(ಕನ್ಸಲ್ಟೆಂಟ್)-ಬಿಎಂಆರ್ಸಿಎಲ್ ನೇಮಕಾತಿ ಪ್ರಕಾರ
ಅಸಿಸ್ಟೆಂಟ್ ಮ್ಯಾನೇಜರ್(ಪ್ರಾಪರ್ಟಿ ಡೆವಲಪ್ಮೆಂಟ್)- 35
ವೇತನ:
ಚೀಫ್ ಎಂಜಿನಿಯರ್ಸ್/ಅಡ್ವೈಸರ್ಸ್- ಮಾಸಿಕ ₹ 1,40,000-1,80,000
ಸೀನಿಯರ್ ಟ್ರಾನ್ಸ್ಪೋರ್ಟ್ ಪ್ಲ್ಯಾನರ್(ಕನ್ಸಲ್ಟೆಂಟ್)- ಮಾಸಿಕ ₹ 1,00,000
ಅಸಿಸ್ಟೆಂಟ್ ಮ್ಯಾನೇಜರ್(ಪ್ರಾಪರ್ಟಿ ಡೆವಲಪ್ಮೆಂಟ್)- ಮಾಸಿಕ ₹ 50,000
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 21/01/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 21/02/2022
ಇದನ್ನೂ ಓದಿ: Job Alert: ತಿಂಗಳಿಗೆ ₹ 55,000 ಸಂಬಳ, ಬೆಂಗಳೂರು BELನಲ್ಲಿ 247 ಹುದ್ದೆಗಳು ಖಾಲಿ
ಆಯ್ಕೆ ಪ್ರಕ್ರಿಯೆ:
ಆನ್ಲೈನ್ ಸಂದರ್ಶನ
ಬೇರೆ ಬೇರೆ ಉದ್ಯೋಗ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ.
ಅರ್ಜಿ ಸಲ್ಲಿಸುವುದು ಹೇಗೆ?
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು.
ಜನರಲ್ ಮ್ಯಾನೇಜರ್(HR)
ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್
3ನೇ ಮಹಡಿ, ಬಿಎಂಟಿಸಿ ಕಾಂಪ್ಲೆಕ್ಸ್
ಕೆ.ಹೆಚ್. ರಸ್ತೆ , ಶಾಂತಿನಗರ
ಬೆಂಗಳೂರು-560027
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ