• Home
  • »
  • News
  • »
  • jobs
  • »
  • BMRCL Recruitment: ನಮ್ಮ ಮೆಟ್ರೋದಲ್ಲಿದೆ ಉದ್ಯೋಗಾವಕಾಶ; ಅರ್ಜಿ ಸಲ್ಲಿಕೆಗೆ ಇನ್ನು ಎರಡು ದಿನ ಬಾಕಿ

BMRCL Recruitment: ನಮ್ಮ ಮೆಟ್ರೋದಲ್ಲಿದೆ ಉದ್ಯೋಗಾವಕಾಶ; ಅರ್ಜಿ ಸಲ್ಲಿಕೆಗೆ ಇನ್ನು ಎರಡು ದಿನ ಬಾಕಿ

BMRCL 2022

BMRCL 2022

ಈ ನೇಮಕಾತಿ ಗೆ ಸಂಬಂಧಿಸಿದ ಇತರ ಪ್ರಮುಖ ಮಾಹಿತಿಗಳಾದ ಅರ್ಜಿ ಪ್ರಕ್ರಿಯೆ, ಖಾಲಿ ಹುದ್ದೆಗಳ ಸಂಖ್ಯೆ, ವೇತನಗಳು, ಆಯ್ಕೆ ವಿಧಾನ ಇತ್ಯಾದಿಗಳ ಮಾಹಿತಿ ಈ ಕೆಳಗಿನಂತಿವೆ.

  • Share this:

    ಬೆಂಗಳೂರು ಮೆಟ್ರೋ ರೈಲ್​ ಕಾರ್ಪೋರೇಷನ್ ಲಿಮಿಟೆಡ್​​​ನಲ್ಲಿ (Bangalore Metro Rail Corporation Limited) ವಿವಿಧ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಹಿರಿಯ ಭೂವಿಜ್ಞಾನಿ, ಕಿರಿಯ ಭೂವಿಜ್ಞಾನಿ (Senior Geologist, Junior Geologist)​ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಬೆಂಗಳೂರು ನಗರದಲ್ಲಿ ಕೆಲಸ ಮಾಡಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿಯನ್ನು ಅಭ್ಯರ್ಥಿಗಳು ಆಫ್​​ಲೈನ್​ ಮತ್ತು ಆನ್​ಲೈನ್​ ಮೂಲಕ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಸೆಪ್ಟೆಂಬರ್​​ 29 ಆಗಿದೆ.


    ಈ ಹುದ್ದೆಗಳನ್ನು ತಾತ್ಕಾಲಿಕವಾಗಿ ಒಪ್ಪಂದದ ಆಧಾರದ ಮೇಲೆ ನೇಮಕಾತಿ ಮಾಡಲಾಗುತ್ತಿದೆ. ಈ ನೇಮಕಾತಿ ಗೆ ಸಂಬಂಧಿಸಿದ ಇತರ ಪ್ರಮುಖ ಮಾಹಿತಿಗಳಾದ ಅರ್ಜಿ ಪ್ರಕ್ರಿಯೆ, ಖಾಲಿ ಹುದ್ದೆಗಳ ಸಂಖ್ಯೆ, ವೇತನಗಳು, ಆಯ್ಕೆ ವಿಧಾನ ಇತ್ಯಾದಿಗಳ ಮಾಹಿತಿ ಈ ಕೆಳಗಿನಂತಿವೆ.


    ಸಂಸ್ಥೆಯ ಹೆಸರು: ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (BMRCL)
    ಹುದ್ದೆಯ ಹೆಸರು: ಹಿರಿಯ ಭೂವಿಜ್ಞಾನಿ, ಕಿರಿಯ ಭೂವಿಜ್ಞಾನಿ
    ಹುದ್ದೆಗಳ ಸಂಖ್ಯೆ: 2
    ಉದ್ಯೋಗ ಸ್ಥಳ: ಬೆಂಗಳೂರು
    ಸಂಬಳ: 40000-80000ರೂ ಪ್ರತಿ ತಿಂಗಳು




    ಹುದ್ದೆಹುದ್ದೆ ಸಂಖ್ಯೆವಿದ್ಯಾರ್ಹತೆವಯೋಮಿತಿವೇತನ
    ಹಿರಿಯ ಭೂವಿಜ್ಞಾನಿ1ಭೂವಿಜ್ಞಾನ ಶಾಸ್ತ್ರದಲ್ಲಿ ಎಂಎಸ್ಸಿ ಅಥವಾ ಎಂಟೆಕ್​ ಪದವಿಗರಿಷ್ಟ 50 ವರ್ಷ80000 ರೂ ಮಾಸಿಕ
    ಕಿರಿಯ ಭೂವಿಜ್ಞಾನಿ1ಭೂವಿಜ್ಞಾನ ಶಾಸ್ತ್ರದಲ್ಲಿ ಎಂಎಸ್ಸಿ ಅಥವಾ ಎಂಟೆಕ್​ ಪದವಿಗರಿಷ್ಟ 30 ವರ್ಷ40000 ರೂ ಮಾಸಿಕ


    ವಯೋಮಿತಿ ಸಡಿಲಿಕೆ:
    ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ ನಿಯಮಗಳ ಪ್ರಕಾರ


    ಇದನ್ನು ಓದಿ: ವಿಜಯನಗರ ಡಿಸಿ ಕಚೇರಿಯಲ್ಲಿದೆ ಹುದ್ದೆ; ಇಲ್ಲಿದೆ ಸಂಪೂರ್ಣ ಮಾಹಿತಿ


    ಅರ್ಜಿ ಸಲ್ಲಿಕೆ: ಆಫ್​ಲೈನ್​ ಮತ್ತು ಆಫ್​ಲೈನ್​


    ಆಯ್ಕೆ ಪ್ರಕ್ರಿಯೆ
    ಸಂದರ್ಶನ


    ಅರ್ಜಿ ಸಲ್ಲಿಕೆ ವಿಳಾಸ


    ಜನರಲ್ ಮ್ಯಾನೇಜರ್ (ಎಚ್​ಆರ್​​), ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್, III ಮಹಡಿ, ಬಿಎಂಟಿಸಿ ಕಾಂಪ್ಲೆಕ್ಸ್, ಕೆ.ಎಚ್​​ ರಸ್ತೆ, ಶಾಂತಿನಗರ, ಬೆಂಗಳೂರು - 560027


    ಪ್ರಮುಖ ದಿನಾಂಕ


    ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 30 ಆಗಸ್ಟ್​​ 2022
    ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಮತ್ತು ಅರ್ಜಿಯ ಪ್ರಿಂಟೌಟ್‌ನ ಸಲ್ಲಿಕೆಗೆ ಕೊನೆಯ ದಿನಾಂಕ: 29 ಸೆಪ್ಟೆಂಬರ್ 2022


     ಅಧಿಸೂಚನೆ ಪ್ರಮುಖ ಲಿಂಕ್‌ಗಳು
    ಅಧಿಕೃತ ಅಧಿಸೂಚನೆ ಪಿಡಿಎಫ್: ಇಲ್ಲಿ ಕ್ಲಿಕ್ ಮಾಡಿ
    ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿ: ಇಲ್ಲಿ ಕ್ಲಿಕ್ ಮಾಡಿ
    ಅಧಿಕೃತ ವೆಬ್‌ಸೈಟ್: english.bmrc.co.in


    ಇದನ್ನು ಓದಿ: ಮನಶಾಸ್ತ್ರದಲ್ಲಿ ಪದವಿ ಆದವರಿಗೆ ಉದ್ಯೋಗಾವಕಾಶ; ಮಾಸಿಕ 88000 ರೂ ವರೆಗೆ ವೇತನ


    ಅರ್ಜಿ ಸಲ್ಲಿಕೆ ವಿಧಾನ


    -ಅಧಿಸೂಚನೆ 2022 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಂಡು ಮುಂದುವರೆಯಿರಿ.


    -ಅಧಿಕೃತ ಅಧಿಸೂಚನೆಯಿಂದ ಅರ್ಜಿ ನಮೂನೆಯಲ್ಲಿ ಫಾರ್ಮ್ ಅನ್ನು ಭರ್ತಿ ಮಾಡಿ.


    - ಸಂವಹನ ಉದ್ದೇಶಕ್ಕಾಗಿ ದಯವಿಟ್ಟು ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆ ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ಇತ್ತೀಚಿನ ಫೋಟೋಗ್ರಾಫ್, ರೆಸ್ಯೂಮ್, ಯಾವುದೇ ಅನುಭವವಿದ್ದರೆ ಇತ್ಯಾದಿ ದಾಖಲೆಗಳನ್ನು ಸಿದ್ಧವಾಗಿಡಿ.


    -ಅನ್ವಯಿಸಿದರೆ, ನಿಮ್ಮ ವರ್ಗಕ್ಕೆ ಅನುಗುಣವಾಗಿ ಅರ್ಜಿ ಶುಲ್ಕವನ್ನು ಪಾವತಿಸಿ.
    ಎಲ್ಲಾ ಮಾಹಿತಿಯನ್ನು ಪೂರ್ಣಗೊಳಿಸಿದ ನಂತರ, ಒದಗಿಸಿದ ವಿವರಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿ. ನಂತರ ಸಲ್ಲಿಸು ಬಟನ್ ಅನ್ನು ಕ್ಲಿಕ್ ಮಾಡಿ.

    Published by:Seema R
    First published:

    ಸುದ್ದಿ 18ಕನ್ನಡ ಟ್ರೆಂಡಿಂಗ್

    ಮತ್ತಷ್ಟು ಓದು