BMTC Recruitment 2021: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ(Bengaluru Metropolitan City Corporation)ಯಲ್ಲಿ ಹಲವು ಹುದ್ದೆಗಳು ಖಾಲಿ ಇದ್ದು, ಉದ್ಯೋಗಾಂಕ್ಷಿಗಳು(Jobseekers) ಅರ್ಜಿ ಸಲ್ಲಿಸಬಹುದಾಗಿದೆ. ಒಟ್ಟು 500 ಡೀಸೆಲ್ ಮೆಕ್ಯಾನಿಕ್(Diesel Mechanic) ಹುದ್ದೆಗಳು ಖಾಲಿ ಇದ್ದು, SSLC ಪಾಸಾಗಿರುವವರು ಅರ್ಜಿ ಸಲ್ಲಿಸಬಹುದಾಗಿದೆ. ಅಭ್ಯರ್ಥಿಗಳು ಆನ್ಲೈನ್(Online) ಮೂಲಕವೇ ಅರ್ಜಿ ಸಲ್ಲಿಸಬೇಕು. ಇದೇ ನವೆಂಬರ್ 18ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದೆ. ಇದೇ ನವೆಂಬರ್ 30 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಅಧಿಕೃತ ವೆಬ್ಸೈಟ್(Official Website) apprenticeshipindia.org ಗೆ ಭೇಟಿ ನೀಡಬಹುದು.
ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
ಸಂಸ್ಥೆ |
ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ-BMTC |
ಹುದ್ದೆಯ ಹೆಸರು |
ಡೀಸೆಲ್ ಮೆಕ್ಯಾನಿಕ್ |
ಒಟ್ಟು ಹುದ್ದೆಗಳು |
500 |
ವಿದ್ಯಾರ್ಹತೆ |
10ನೇ ತರಗತಿ ಪಾಸ್ |
ಉದ್ಯೋಗದ ಸ್ಥಳ |
ಬೆಂಗಳೂರು |
ವೇತನ |
ಮಾಸಿಕ ₹ 8,000-9,000 |
ಅರ್ಜಿ ಸಲ್ಲಿಕೆ ವಿಧಾನ |
ಆನ್ಲೈನ್ |
ಅರ್ಜಿ ಸಲ್ಲಿಕೆ ಆರಂಭ ದಿನಾಂಕ |
18/11/2021 |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ |
30/11/2021 |
ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 18/11/2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 30/11/2021
ಇದನ್ನೂ ಓದಿ: BEL Recruitment 2021: ತಿಂಗಳಿಗೆ ₹ 1,80,000 ಸಂಬಳ, ಬೆಂಗಳೂರಿನಲ್ಲಿ ಉದ್ಯೋಗ, BE, B Tech ಅಭ್ಯರ್ಥಿಗಳು ಅರ್ಜಿ ಸಲ್ಲಿಸಿ
ವಿದ್ಯಾರ್ಹತೆ:
ಬಿಎಂಟಿಸಿಯಲ್ಲಿ ಖಾಲಿ ಇರುವ ಡೀಸೆಲ್ ಮೆಕ್ಯಾನಿಕ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಬೋರ್ಡ್/ ಶಿಕ್ಷಣ ಸಂಸ್ಥೆಯಿಂದ 10ನೇ ತರಗತಿ/SSLC ಪಾಸಾಗಿರಬೇಕು.
ಉದ್ಯೋಗದ ಸ್ಥಳ:
ಡೀಸೆಲ್ ಮೆಕ್ಯಾನಿಕ್ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಉದ್ಯೋಗ ನೀಡಲಾಗುತ್ತದೆ.
ವೇತನ:
ಡೀಸೆಲ್ ಮೆಕ್ಯಾನಿಕ್ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ 8,000-9,000 ವೇತನ ನೀಡಲಾಗುತ್ತದೆ.
ಇದನ್ನೂ ಓದಿ: HAL Recruitment 2021: ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ನಲ್ಲಿ ಟ್ರೇಡ್ ಅಪ್ರೆಂಟಿಸ್ ಹುದ್ದೆಗಳು ಖಾಲಿ
ಆಯ್ಕೆ ಪ್ರಕ್ರಿಯೆ:
ದಾಖಲಾತಿ ಪರಿಶೀಲನೆ
ವೈಯಕ್ತಿಕ ಸಂದರ್ಶನ
ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಇಲಾಖೆಯಲ್ಲಿ ಕೆಲಸ ಹುಡುಕುತ್ತಿದ್ದೀರಾ? ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ. ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ