BOB Recruitment 2021: ತಿಂಗಳಿಗೆ ₹ 63,840 ಸಂಬಳ, BE, B Tech ಆದವರಿಗೆ ಬ್ಯಾಂಕ್ ಆಫ್ ಬರೋಡಾದಲ್ಲಿ ಉದ್ಯೋಗ

ಡಿಸೆಂಬರ್ 8ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಡಿಸೆಂಬರ್ 28 ರವರೆಗೆ ಅರ್ಜಿ ಸಲ್ಲಿಸಬಹುದಾಗಿದೆ.

Bank of Baroda

Bank of Baroda

  • Share this:
Bank of Baroda Recruitment 2021: ಬ್ಯಾಂಕ್ ಆಫ್​ ಬರೋಡ(Bank of Baroda) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 52 ಐಟಿ ಪ್ರೊಫೆಶನಲ್ ಹುದ್ದೆಗಳು ಖಾಲಿ ಇದ್ದು,  ಬಿಇ, ಬಿ ಟೆಕ್ ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಆಸಕ್ತರು ಆನ್​ಲೈನ್(Online)​ ಮೂಲಕ ಅರ್ಜಿ ಸಲ್ಲಿಸಬೇಕು. ಡಿಸೆಂಬರ್ 8ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಡಿಸೆಂಬರ್ 28 ರವರೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಬ್ಯಾಂಕ್​ ಆಫ್​ ಬರೋಡ(Bank of Baroda)ದ ಅಧಿಕೃತ ವೆಬ್​ಸೈಟ್​​ www.bankofbaroda.in ಗೆ ಭೇಟಿ ನೀಡಬಹುದಾಗಿದೆ.

ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.







































ಸಂಸ್ಥೆಬ್ಯಾಂಕ್ ಆಫ್​ ಬರೋಡಾ
ಹುದ್ದೆಯ ಹೆಸರುಐಟಿ ಪ್ರೊಫೆಶನಲ್
ಒಟ್ಟು ಹುದ್ದೆಗಳು52
ವಿದ್ಯಾರ್ಹತೆಬಿಇ, ಬಿ ಟೆಕ್
ಉದ್ಯೋಗದ ಸ್ಥಳಭಾರತದಲ್ಲಿ ಎಲ್ಲಿ ಬೇಕಾದರೂ
ವೇತನಮಾಸಿಕ ₹ 36,000-63,840
ಅರ್ಜಿ ಸಲ್ಲಿಸುವ ವಿಧಾನಆನ್​ಲೈನ್
​​ಅರ್ಜಿ ಸಲ್ಲಿಕೆ ಆರಂಭ ದಿನಾಂಕ08/12/2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ28/12/2021



ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಕೆ ಆರಂಭ ದಿನಾಂಕ : 08/12/2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 28/12/2021

ಇದನ್ನೂ ಓದಿ:KPSC: ಪ್ರೌಢಶಾಲಾ ಶಿಕ್ಷಕರ ನೇಮಕಾತಿ, ಮಾಸಿಕ ವೇತನ ₹ 62,400, ಇಂದೇ ಅರ್ಜಿ ಸಲ್ಲಿಸಿ

ಅರ್ಜಿ ಶುಲ್ಕ:
SC/SC/PWD- 100 ರೂ.
ಸಾಮಾನ್ಯ/ಒಬಿಸಿ/EWS- 600 ರೂ.

ವಿದ್ಯಾರ್ಹತೆ:
ಐಟಿ ಪ್ರೊಫೆಶನಲ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಬೋರ್ಡ್​​ನಿಂದ  ಬಿಇ/ ಬಿ.ಟೆಕ್ ಪೂರ್ಣಗೊಳಿಸಿರಬೇಕು.

ವಯೋಮಿತಿ:
ಐಟಿ ಪ್ರೊಫೆಶನಲ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು ಕನಿಷ್ಠ 25ರಿಂದ ಗರಿಷ್ಠ 45 ವರ್ಷದೊಳಗಿರಬೇಕು.

ಉದ್ಯೋಗದ ಸ್ಥಳ:
ಐಟಿ ಪ್ರೊಫೆಶನಲ್ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಭಾರತದಲ್ಲಿ ಎಲ್ಲಿ ಬೇಕಾದರೂ ಉದ್ಯೋಗ ನೀಡಲಾಗುತ್ತದೆ.

ಇದನ್ನೂ ಓದಿ: SSLC, PUC ಪಾಸಾದವರಿಗೆ ಪೋಸ್ಟ್​ ಆಫೀಸ್​​ನಲ್ಲಿ ಬಂಪರ್ ಉದ್ಯೋಗ, ಮಾಸಿಕ ವೇತನ ₹ 81,000

ವೇತನ:
ಐಟಿ ಪ್ರೊಫೆಶನಲ್ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ ₹ 36,000-63,840 ವೇತನ ನೀಡಲಾಗುತ್ತದೆ.

ಬೇರೆ ಬೇರೆ ಉದ್ಯೋಗ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ.

ಆಯ್ಕೆ ಪ್ರಕ್ರಿಯೆ:
ಆನ್​ಲೈನ್​ ಟೆಸ್ಟ್
​ವೈಯಕ್ತಿಕ ಸಂದರ್ಶನ
Published by:Latha CG
First published: