BSF Recruitment: ಗಡಿ ಭದ್ರತಾ ಪಡೆಯಲ್ಲಿ 323 ಹುದ್ದೆಗಳಿಗೆ ಅರ್ಜಿ ಆಹ್ವಾನ; ಪಿಯುಸಿ ಆದವರಿಗೆ ಅವಕಾಶ

ಪಿಯುಸಿ ಓದಿರುವ ಮಹಿಳಾ ಮತ್ತು ಪುರಷ ಅಭ್ಯರ್ಥಿಗಳು ಈ ಹುದ್ದೆಗೆ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

 ಹುದ್ದೆಗೆ ಅರ್ಜಿ ಹಾಕಿ

ಹುದ್ದೆಗೆ ಅರ್ಜಿ ಹಾಕಿ

  • Share this:
    ಗಡಿ ಭದ್ರತಾ ಪಡೆಯಲ್ಲಿ (Border Security Force) ಸಹಾಯಕ ಸಬ್ ಇನ್ಸ್‌ಪೆಕ್ಟರ್, ಹೆಡ್ ಕಾನ್ಸ್‌ಟೇಬಲ್ (Assistant Sub Inspector, Head Constable)  ಹುದ್ದೆಗಳಿಗೆ ಅಧಿಸೂಚನೆ ಪ್ರಕಟಿಸಲಾಗಿದೆ. ಒಟ್ಟು 323 ಹುದ್ದೆಗಳ ನೇಮಕಾತಿ ನಡೆಸಲಾಗುವುದು. ಪಿಯುಸಿ ಓದಿರುವ ಮಹಿಳಾ ಮತ್ತು ಪುರಷ ಅಭ್ಯರ್ಥಿಗಳು ಈ ಹುದ್ದೆಗೆ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿಯನ್ನು ಆನ್​ಲೈನ್​ನಲ್ಲಿ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಆಗಸ್ಟ್​ 21 ಆಗಿದೆ.

    ಈ ನೇಮಕಾತಿಗೆ ಸಂಬಂಧಿಸಿದ ಇತರ ಪ್ರಮುಖ ಮಾಹಿತಿಗಳಾದ ಅರ್ಜಿ ಪ್ರಕ್ರಿಯೆ, ಖಾಲಿ ಹುದ್ದೆಗಳ ಸಂಖ್ಯೆ, ವೇತನಗಳು, ಆಯ್ಕೆ ವಿಧಾನ ಇತ್ಯಾದಿಗಳ ಮಾಹಿತಿ ಈ ಕೆಳಗಿನಂತಿವೆ.

    ಸಂಸ್ಥೆಯ ಹೆಸರು: ಗಡಿ ಭದ್ರತಾ ಪಡೆ (BSF)
    ಹುದ್ದೆಯ ಹೆಸರು: ಸಹಾಯಕ ಸಬ್ ಇನ್ಸ್‌ಪೆಕ್ಟರ್, ಹೆಡ್ ಕಾನ್ಸ್‌ಟೇಬಲ್
    ಹುದ್ದೆಗಳ ಸಂಖ್ಯೆ: 323
    ಉದ್ಯೋಗ ಸ್ಥಳ: ಅಖಿಲ ಭಾರತ
    ವೇತನ: 25500-92300 ರೂ ಪ್ರತಿ ತಿಂಗಳು


















    ಹುದ್ದೆಹುದ್ದೆ ಸಂಖ್ಯೆವೇತನ
    ಸಹಾಯಕ ಸಬ್ ಇನ್ಸ್‌ಪೆಕ್ಟರ್1129200-92300 ರೂ ಮಾಸಿಕ
    ಹೆಡ್ ಕಾನ್ಸ್ಟೇಬಲ್31225500-81100 ರೂ ಮಾಸಿಕ

    ಶೈಕ್ಷಣಿಕ ಅರ್ಹತೆ:  ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ 12 ನೇ ತರಗತಿಯನ್ನು ಪೂರ್ಣಗೊಳಿಸಿರಬೇಕು.

    ವಯಸ್ಸಿನ ಮಿತಿ:  ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ತೆ ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 25 ವರ್ಷಗಳನ್ನು ಹೊಂದಿರಬೇಕು.

    ಇದನ್ನು ಓದಿ: ನೌಕರರ ರಾಜ್ಯ ವಿಮಾ ನಿಗಮದಲ್ಲಿ 33 ಹುದ್ದೆಗಳಿಗೆ ವಾಕ್​-ಇನ್​-ಇಂಟರ್​ವ್ಯೂ

    ವಯೋಮಿತಿ ಸಡಿಲಿಕೆ:
    ಗಡಿ ಭದ್ರತಾ ಪಡೆಯ ನಿಯಮಗಳ ಪ್ರಕಾರ

    ಅರ್ಜಿ ಶುಲ್ಕ:
    ಅರ್ಜಿ ಶುಲ್ಕ ವಿನಾಯಿತಿ

    ಆಯ್ಕೆ ಪ್ರಕ್ರಿಯೆ:
    ಲಿಖಿತ ಪರೀಕ್ಷೆ ಮತ್ತು ಸಂದರ್ಶನ

    ಪ್ರಮುಖ ದಿನಾಂಕಗಳು:
    ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 22 ಜುಲೈ 2022
    ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 21 ಆಗಸ್ಟ್ 2022

    ಅಧಿಸೂಚನೆ ಪ್ರಮುಖ ಲಿಂಕ್‌ಗಳು
    ಅಧಿಕೃತ ಅಧಿಸೂಚನೆ ಪಿಡಿಎಫ್: ಇಲ್ಲಿ ಕ್ಲಿಕ್ ಮಾಡಿ
    ಅಧಿಕೃತ ವೆಬ್‌ಸೈಟ್: bsf.nic.in

    ಇದನ್ನು ಓದಿ: ರಾಷ್ಟ್ರೀಯ ತನಿಖಾ ಸಂಸ್ಥೆಯಲ್ಲಿ ಪದವಿ ಆದವರಿಗೆ ಉದ್ಯೋಗಾವಕಾಶ

    ಅರ್ಜಿ ಸಲ್ಲಿಕೆ ಪ್ರಕ್ರಿಯೆ

    ನೇಮಕಾತಿ ಅಧಿಸೂಚನೆ 2022 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಳ್ಳಿ.

    -ಮೇಲಿನ ಲಿಂಕ್‌ನಿಂದ ಅರ್ಜಿಯನ್ನು ಡೌನ್‌ಲೋಡ್ ಮಾಡಿ. ನಿಗದಿತ ನಮೂನೆಯಲ್ಲಿ ಫಾರ್ಮ್ ಅನ್ನು ಭರ್ತಿ ಮಾಡಿ.

    -ಸಂವಹನ ಉದ್ದೇಶಕ್ಕಾಗಿ ದಯವಿಟ್ಟು ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು ನೀಡಿ. ಜೊತೆಗೆ ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ಇತ್ತೀಚಿನ ಫೋಟೋಗ್ರಾಫ್, ಇತ್ಯಾದಿ ದಾಖಲೆಗಳನ್ನು ಅಪ್​ಲೋಡ್​ ಮಾಡಿ



    -ಎಲ್ಲಾ ಮಾಹಿತಿಯನ್ನು ಪೂರ್ಣಗೊಳಿಸಿದ ನಂತರ, ಒದಗಿಸಿದ ವಿವರಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿ. ನಂತರ ಸಲ್ಲಿಸು ಬಟನ್ ಅನ್ನು ಕ್ಲಿಕ್ ಮಾಡಿ
    Published by:Seema R
    First published: