BSF Recruitment 2021: 65 ಕಾನ್ಸ್‌ಟೇಬಲ್ ಮತ್ತು ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ; SSLC ಆದವರಿಗೂ ಅವಕಾಶ

10ನೇ ತರಗತಿ, ಡಿಪ್ಲೋಮಾ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

JOB

JOB

  • Share this:
    ಬಾರ್ಡರ್ ಸೆಕ್ಯುರಿಟಿ ಫೋರ್ಸ್​​ನಲ್ಲಿ ಖಾಲಿ ಇರುವ 65 ಅಸಿಸ್ಟೆಂಟ್ ಏರ್‌ಕ್ರಾಫ್ಟ್ ಮೆಕ್ಯಾನಿಕ್, ಅಸಿಸ್ಟೆಂಟ್ ರೇಡಿಯೋ ಮೆಕ್ಯಾನಿಕ್ ಮತ್ತು ಕಾನ್‌ಸ್ಟೇಬಲ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹವಾನಿಸಲಾಗಿದೆ. ಆಸಕ್ತ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಸಲ್ಲಿಸಬಹುದಾಗಿದೆ. 

    ವಿದ್ಯಾರ್ಹತೆ:

    10ನೇ ತರಗತಿ, ಡಿಪ್ಲೋಮಾ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

    ವಯೋಮಿತಿ:

    ಕನಿಷ್ಟ 20 ರಿಂದ ಗರಿಷ್ಟ 28 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

    ವೇತನ:

    ವಿವಿಧ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 21,700 ದಿಂದ 92,300 ರೂ.ಗಳ ವರೆಗೆ ವೇತನವನ್ನು ನೀಡಲಾಗುವುದು.

    ಆಯ್ಕೆ ಹೇಗೆ?:

    ದೈಹಿಕ ಪರೀಕ್ಷೆ, ವೈದ್ಯಕೀಯ ಪರೀಕ್ಷೆ, ಲಿಖಿತ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುವುದು.

    ಅರ್ಜಿ ಶುಲ್ಕ:

    ಅರ್ಜಿದಾರರು 100 ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ. ಇತರೆ ಅಭ್ಯರ್ಥಿಗಳು ಶುಲ್ಕ ವಿನಾಯಿತಿಯನ್ನು ಹೊಂದಿರುತ್ತಾರೆ.

    ಅರ್ಜಿ ಸಲ್ಲಿಸುವುದು: ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://bsf.gov.in/Home ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಜುಲೈ 26,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
    Published by:Harshith AS
    First published: