BSNL Recruitment: ನಿರುದ್ಯೋಗಿಗಳಿಗೆ ಶುಭ ಸುದ್ದಿ; ಬಿಎಸ್​ಎನ್​ಎಲ್​ನಲ್ಲಿ 100 ಹುದ್ದೆಗೆ ಅರ್ಜಿ ಆಹ್ವಾನ

ಬೆಂಗಳೂರು ವಿಭಾಗದಲ್ಲಿ ಕಾರ್ಯ ನಿರ್ವಹನಿಸಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿಯನ್ನು ಆನ್​ಲೈನ್​ ಮೂಲಕ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಆಗಸ್ಟ್​ 30 ಆಗಿದೆ.

ಬೇಗ ಅರ್ಜಿ ಸಲ್ಲಿಸಿ

ಬೇಗ ಅರ್ಜಿ ಸಲ್ಲಿಸಿ

  • Share this:
    ಭಾರತ್ ಸಂಚಾರ್ ನಿಗಮ್ ಲಿಮಿಟೆಡ್ (Bharat Sanchar Nigam Limited) 100 ಹುದ್ದೆಗೆ ಅರ್ಜಿ ಆಹ್ವಾನಿಸಿದೆ. ಪದವಿ ಮತ್ತು ತಾಂತ್ರಿಕ ಅಂಪ್ರೆಂಟಿಸ್ (Apprentice)​ ಹುದ್ದೆಗೆ ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ. ಬೆಂಗಳೂರು ವಿಭಾಗದಲ್ಲಿ ಕಾರ್ಯ ನಿರ್ವಹನಿಸಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿಯನ್ನು ಆನ್​ಲೈನ್​ ಮೂಲಕ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಆಗಸ್ಟ್​ 30 ಆಗಿದೆ.

    ಈ ಅಪ್ರೆಂಟಿಸ್​ ಹುದ್ದೆಗಳನ್ನು ಒಂದು ವರ್ಷದ ಅವಧಿಗೆ ನೇಮಕ ಮಾಡಲಾಗುತ್ತಿದೆ. ಈ ನೇಮಕಾತಿಗೆ ಸಂಬಂಧಿಸಿದ ಇತರ ಪ್ರಮುಖ ಮಾಹಿತಿಗಳಾದ ಅರ್ಜಿ ಪ್ರಕ್ರಿಯೆ, ಖಾಲಿ ಹುದ್ದೆಗಳ ಸಂಖ್ಯೆ, ವೇತನಗಳು, ಆಯ್ಕೆ ವಿಧಾನ ಇತ್ಯಾದಿಗಳ ಮಾಹಿತಿ ಈ ಕೆಳಗಿನಂತಿವೆ.

    ಸಂಸ್ಥೆಯ ಹೆಸರು: ಭಾರತ್ ಸಂಚಾರ್ ನಿಗಮ್ ಲಿಮಿಟೆಡ್ (BSNL)
    ಹುದ್ದೆಯ ಹೆಸರು: ಪದವಿ ಮತ್ತು ತಂತ್ರಜ್ಞ ಅಪ್ರೆಂಟಿಸ್
    ಹುದ್ದೆಗಳ ಸಂಖ್ಯೆ: 100
    ಉದ್ಯೋಗ ಸ್ಥಳ: ಬೆಂಗಳೂರು - ಕರ್ನಾಟಕ
    ಸ್ಟೈಪೆಂಡ್: 8000-9000ರೂ. ಪ್ರತಿ ತಿಂಗಳು


















    ಹುದ್ದೆಹುದ್ದೆ ಸಂಖ್ಯೆವೇತನ
    ಮಾರಾಟ ಮತ್ತು ಮಾರ್ಕೆಟಿಂಗ್399000 ರೂ ಮಾಸಿಕ
    ಟೆಲಿಕಾಂ, ಐಟಿ, ಮಾರಾಟ ಮತ್ತು ಮಾರ್ಕೆಟಿಂಗ್618000 ರೂ ಮಾಸಿಕ

    ಶೈಕ್ಷಣಿಕ ಅರ್ಹತೆ:  ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಮಾನ್ಯತೆ ಪಡೆದ ಯಾವುದೇ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ ಯಾವುದೇ ವಿಷಯದಲ್ಲಿ ಪದವಿ ಅಥವಾ  ಡಿಪ್ಲೊಮಾ ಪದವಿ ಪಡೆದಿರಬೇಕು.

    ಇದನ್ನು ಓದಿ: ಧಾರವಾಡ ಕೃಷಿ ವಿವಿಯಲ್ಲಿ ನೇಮಕಾತಿ; ಮಾಸಿಕ 31 ಸಾವಿರ ರೂ ವೇತನ

    ವಯಸ್ಸಿನ ಮಿತಿ: ಭಾರತ್ ಸಂಚಾರ್ ನಿಗಮ್ ಲಿಮಿಟೆಡ್ ನೇಮಕಾತಿ ಅಧಿಸೂಚನೆಯ ಪ್ರಕಾರ  ವಯಸ್ಸಿನ ಮಿತಿಯನ್ನು ಹೊಂದಿರಬೇಕು.

    ವಯಸ್ಸಿನ ಸಡಿಲಿಕೆ:
    ಭಾರತ್ ಸಂಚಾರ್ ನಿಗಮ್ ಲಿಮಿಟೆಡ್ ನಿಯಮಗಳ ಪ್ರಕಾರ

    ಅರ್ಜಿ ಶುಲ್ಕ:
    ಅರ್ಜಿ ಶುಲ್ಕ ವಿನಾಯಿತಿ ನೀಡಲಾಗಿದೆ

    ಪ್ರಮುಖ ದಿನಾಂಕಗಳು:
    ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 22 ಆಗಸ್ಟ್​ 2022
    ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 30 ಆಗಸ್ಟ್ 2022
    NATS ಪೋರ್ಟಲ್‌ನಲ್ಲಿ ನೋಂದಾಯಿಸಲು ಕೊನೆಯ ದಿನಾಂಕ: 29 ಆಗಸ್ಟ್​​ 2022
    ಪ್ರಮಾಣಪತ್ರ ಪರಿಶೀಲನೆ ನಡೆಸಲು ಬಿಎಸ್​ಎನ್​ಎಲ್​​ ಕರ್ನಾಟಕ ವೃತ್ತಕ್ಕೆ ಡೇಟಾಬೇಸ್ ಹಸ್ತಾಂತರಿಸುವ ದಿನಾಂಕ: 05 ಸೆಪ್ಟೆಂಬರ್​​2022

    ಅಧಿಸೂಚನೆ ಪ್ರಮುಖ ಲಿಂಕ್‌ಗಳು
    ಅಧಿಕೃತ ಅಧಿಸೂಚನೆ ಪಿಡಿಎಫ್: ಇಲ್ಲಿ ಕ್ಲಿಕ್ ಮಾಡಿ
    ಅಧಿಕೃತ ವೆಬ್‌ಸೈಟ್: bsnl.co.in

    ಇದನ್ನು ಓದಿ: ಭಾರತೀಯ ರೈಲ್ವೆಯಲ್ಲಿ 60 ಹುದ್ದೆಗಳ ನೇಮಕಾತಿ; ಡಿಗ್ರಿ ಆದವರು ಅರ್ಜಿ ಸಲ್ಲಿಸಿ

    ಅರ್ಜಿ ಸಲ್ಲಿಕೆ ಪ್ರಕ್ರಿಯೆ

    ನೇಮಕಾತಿ ಅಧಿಸೂಚನೆ ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಳ್ಳಿ.

    ಈ ಮೇಲಿನ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮೊದಲು ಎನ್​ಟಿಎಸ್​ನಲ್ಲಿ ನೋಂದಾಣಿ ಮಾಡಬೇಕು. ಈ ವೆಬ್​ಸೈಟ್​ನಲ್ಲಿ ನೋಂದಾಣಿ ಮಾಡಲು ಇಲ್ಲಿ ಕ್ಲಿಕ್​ ಮಾಡಿ.

    ಬಳಿಕ ಬಿಎಸ್​ಎಲ್​ಎಲ್​ ವೆಬ್​ಸೈಟ್​ನಲ್ಲಿ ಅಭ್ಯರ್ಥಿಗಳು ನಿಗದಿತ ಅರ್ಜಿಗಳನ್ನು ಭೆರ್ತಿ ಮಾಡಬೇಕು.

    ಈ ವೇಳೆ ಅಭ್ಯರ್ಥಿಗಳು ದಯವಿಟ್ಟು ಸಂವಹನ ಉದ್ದೇಶಕ್ಕಾಗಿ ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು, ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ಯಾವುದೇ ಅನುಭವಗಳನ್ನು ಅರ್ಜಿ ಜೊತೆ ಲಗತ್ತಿಸಿ.

    ಎಲ್ಲಾ ಮಾಹಿತಿಯನ್ನು ಪೂರ್ಣಗೊಳಿಸಿದ ನಂತರ, ಒದಗಿಸಿದ ವಿವರಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿ. ಬಳಿಕ ಸಲ್ಲಿಸು ಬಟನ್​ ಕ್ಲಿಕ್​ ಮಾಡಿ.
    Published by:Seema R
    First published: