ಭಾರತ್ ಸಂಚಾರ್ ನಿಗಮ್ ಲಿಮಿಟೆಡ್(Bharat Sanchar Nigam Limited-BSNL)ನಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 27 ಡಿಪ್ಲೋಮಾ ಅಪ್ರೆಂಟಿಸ್(Diploma Apprentice) ಹುದ್ದೆಗಳು ಖಾಲಿ ಇವೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ಲೈನ್(Online) ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ನವೆಂಬರ್ 6 ರಿಂದಲೇ ಅರ್ಜಿ ಸಲ್ಲಿಕೆ ಆರಂಭವಾಗಿದೆ. ನವೆಂಬರ್ 20, 2021 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಬಿಎಸ್ಎನ್ಎಲ್(BSNL)ನ ಅಧಿಕೃತ ವೆಬ್ಸೈಟ್ bsnl.co.in ಗೆ ಭೇಟಿ ನೀಡಬಹುದು.
ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
ಸಂಸ್ಥೆ |
ಭಾರತ್ ಸಂಚಾರ್ ನಿಗಮ್ ಲಿಮಿಟೆಡ್ |
ಹುದ್ದೆಯ ಹೆಸರು |
ಡಿಪ್ಲೋಮಾ ಅಪ್ರೆಂಟಿಸ್ |
ಒಟ್ಟು ಹುದ್ದೆಗಳು |
27 |
ವಿದ್ಯಾರ್ಹತೆ |
ಡಿಪ್ಲೋಮಾ |
ಉದ್ಯೋಗದ ಸ್ಥಳ |
ಭೂಪಾಲ್ |
ವೇತನ |
ಮಾಸಿಕ ₹ 8,000 |
ಅರ್ಜಿ ಸಲ್ಲಿಸುವ ವಿಧಾನ |
ಆನ್ಲೈನ್ |
ಅರ್ಜಿ ಸಲ್ಲಿಕೆ ಆರಂಭ ದಿನಾಂಕ |
06/11/2021 |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ |
20/11/2021 |
ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 06/11/2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 20/11/2021
ಇದನ್ನೂ ಓದಿ: KRCL Recruitment 2021: ಎಂಜಿನಿಯರಿಂಗ್ ಅಭ್ಯರ್ಥಿಗಳಿಗೆ ರೈಲ್ವೆ ಇಲಾಖೆಯಲ್ಲಿ ಬಂಪರ್ ಉದ್ಯೋಗ
ವಿದ್ಯಾರ್ಹತೆ:
ಡಿಪ್ಲೋಮಾ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಬೋರ್ಡ್/ವಿಶ್ವವಿದ್ಯಾಲಯದಿಂದ ಡಿಪ್ಲೋಮಾ ಪಾಸಾಗಿರಬೇಕು.
ವಯೋಮಿತಿ:
ಡಿಪ್ಲೋಮಾ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು 25 ವರ್ಷ ಮೀರಿರಬಾರದು.
ವೇತನ:
ಡಿಪ್ಲೋಮಾ ಅಪ್ರೆಂಟಿಸ್ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ ₹ 8,000 ವೇತನ ನೀಡಲಾಗುತ್ತದೆ.
ಉದ್ಯೋಗದ ಸ್ಥಳ:
ಡಿಪ್ಲೋಮಾ ಅಪ್ರೆಂಟಿಸ್ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಧ್ಯಪ್ರದೇಶದ ಭೋಪಾಲ್ನಲ್ಲಿ ಪೋಸ್ಟ್ ನೀಡಲಾಗುತ್ತದೆ.
ಆಯ್ಕೆ ಪ್ರಕ್ರಿಯೆ:
ಡಿಪ್ಲೋಮಾ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳನ್ನು ಎರಡು ಹಂತದಲ್ಲಿ ಆಯ್ಕೆ ಮಾಡಲಾಗುತ್ತದೆ.
ಇದನ್ನೂ ಓದಿ: NHB Recruitment 2021: ತಿಂಗಳಿಗೆ ₹ 70,000 ಸಂಬಳ, ನ್ಯಾಷನಲ್ ಹಾರ್ಟಿಕಲ್ಚರ್ ಬೋರ್ಡ್ನಲ್ಲಿ ಪದವೀಧರರಿಗೆ ಉದ್ಯೋಗ
ದಾಖಲಾತಿ ಪರಿಶೀಲನೆ
ವೈಯಕ್ತಿಕ ಸಂದರ್ಶನ
ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಇಲಾಖೆಯಲ್ಲಿ ಕೆಲಸ ಹುಡುಕುತ್ತಿದ್ದೀರಾ? ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ