ಭಾರತ್ ಸಂಚಾರ್ ನಿಗಮ್ ಲಿಮಿಟೆಡ್(Bharat Sanchar Nigam Limited-BSNL)ನಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 10 ಡಿಪ್ಲೋಮಾ ಅಪ್ರೆಂಟಿಸ್(Diploma Apprentice) ಹುದ್ದೆಗಳು ಖಾಲಿ ಇವೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ಲೈನ್(Online) ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಜನವರಿ 20, 2022 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಬಿಎಸ್ಎನ್ಎಲ್(BSNL)ನ ಅಧಿಕೃತ ವೆಬ್ಸೈಟ್ bsnl.co.in ಗೆ ಭೇಟಿ ನೀಡಬಹುದು.
ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
ಸಂಸ್ಥೆ |
ಭಾರತ್ ಸಂಚಾರ್ ನಿಗಮ್ ಲಿಮಿಟೆಡ್ |
ಹುದ್ದೆಯ ಹೆಸರು |
ಡಿಪ್ಲೋಮಾ ಅಪ್ರೆಂಟಿಸ್ |
ಒಟ್ಟು ಹುದ್ದೆಗಳು |
10 |
ವಿದ್ಯಾರ್ಹತೆ |
ಡಿಪ್ಲೋಮಾ |
ಉದ್ಯೋಗದ ಸ್ಥಳ |
ಡೆಹ್ರಾಡೂನ್, ಹರಿದ್ವಾರ್, ನೈನಿತಾಲ್ |
ಸ್ಟಿಪಂಡ್ |
ಮಾಸಿಕ ₹ 8,000 |
ಅರ್ಜಿ ಸಲ್ಲಿಸುವ ವಿಧಾನ |
ಆನ್ಲೈನ್ |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ |
20/01/2022 |
ವಿದ್ಯಾರ್ಹತೆ:
ಡಿಪ್ಲೋಮಾ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು AICTE ಅಥವಾ GOI ನಿಂದ ಗುರುತಿಸಲ್ಪಟ್ಟ ಇಂಜಿನಿಯರಿಂಗ್/ತಂತ್ರಜ್ಞಾನ ಕ್ಷೇತ್ರದಲ್ಲಿ (ದೂರಸಂಪರ್ಕ/ಎಲೆಕ್ಟ್ರಾನಿಕ್ಸ್/ಎಲೆಕ್ಟ್ರಿಕಲ್/ರೇಡಿಯೋ/ಕಂಪ್ಯೂಟರ್/ಇನ್ಸ್ಟ್ರುಮೆಂಟೇಶನ್/ಮಾಹಿತಿ ತಂತ್ರಜ್ಞಾನ) ಡಿಪ್ಲೊಮಾ ಕೋರ್ಸ್ ಹೊಂದಿರಬೇಕು.
ಇದನ್ನೂ ಓದಿ:NVS Recruitment: 1925 A, B ಮತ್ತು C ಗ್ರೂಪ್ ಹುದ್ದೆಗಳಿಗೆ ಅರ್ಜಿ ಆಹ್ವಾನ, ಮಾಸಿಕ ವೇತನ 2 ಲಕ್ಷದವರೆಗೆ
ವಯೋಮಿತಿ:
ಡಿಪ್ಲೋಮಾ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು 25 ವರ್ಷ ಮೀರಿರಬಾರದು.
ವೇತನ:
ಡಿಪ್ಲೋಮಾ ಅಪ್ರೆಂಟಿಸ್ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ ₹ 8,000 ಸ್ಟಿಪೆಂಡ್ ನೀಡಲಾಗುತ್ತದೆ.
ಉದ್ಯೋಗದ ಸ್ಥಳ:
ಡಿಪ್ಲೋಮಾ ಅಪ್ರೆಂಟಿಸ್ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಧ್ಯಪ್ರದೇಶದ ಭೋಪಾಲ್ನಲ್ಲಿ ಪೋಸ್ಟ್ ನೀಡಲಾಗುತ್ತದೆ.
ಇದನ್ನೂ ಓದಿ: Jobs Alert: ಟಿಸಿಎಸ್, ವಿಪ್ರೋ, ಇನ್ಫೋಸಿಸ್ನಿಂದ 1 ಲಕ್ಷಕ್ಕಿಂತಲೂ ಹೆಚ್ಚಿನ ಉದ್ಯೋಗಿಗಳ ನೇಮಕಾತಿ; ವಿವರ ಇಲ್ಲಿದೆ
ಆಯ್ಕೆ ಪ್ರಕ್ರಿಯೆ:
ಡಿಪ್ಲೋಮಾ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳನ್ನು ಎರಡು ಹಂತದಲ್ಲಿ ಆಯ್ಕೆ ಮಾಡಲಾಗುತ್ತದೆ.
ಬೇರೆ ಬೇರೆ ಉದ್ಯೋಗ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ.
ದಾಖಲಾತಿ ಪರಿಶೀಲನೆ
ವೈಯಕ್ತಿಕ ಸಂದರ್ಶನ
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ