BWSSB Recruitment 2022: ಬೆಂಗಳೂರು ಜಲಮಂಡಳಿಯಲ್ಲಿ ಲೀಗಲ್ ಆಫೀಸರ್ ಹುದ್ದೆ ಖಾಲಿ, ಈಗಲೇ Apply ಮಾಡಿ

ಜನವರಿ 31ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಅಭ್ಯರ್ಥಿಗಳು ಆಫ್​ಲೈನ್(Offline)​ ಮೂಲಕ ಅರ್ಜಿ ಸಲ್ಲಿಸಬೇಕು. ಫೆಬ್ರವರಿ 15 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ.

BWSSB

BWSSB

  • Share this:
BWSSB Recruitment 2022: ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ(Bangalore Water Supply and Sewerage Board-BWSSB) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 1 ಲೀಗಲ್ ಆಫೀಸರ್(Legal Officer) ಹುದ್ದೆ ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಬೆಂಗಳೂರಿನಲ್ಲಿ ಉದ್ಯೋಗ ಅರಸುತ್ತಿರುವ ಅಭ್ಯರ್ಥಿಗಳಿಗೆ ಇದೊಂದು ಸುವರ್ಣಾವಕಾಶವಾಗಿದೆ. ಜನವರಿ 31ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಅಭ್ಯರ್ಥಿಗಳು ಆಫ್​ಲೈನ್(Offline)​ ಮೂಲಕ ಅರ್ಜಿ ಸಲ್ಲಿಸಬೇಕು. ಫೆಬ್ರವರಿ 15 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಹೆಚ್ಚಿನ ಮಹಿತಿಗಾಗಿ bwssb.gov.in ಗೆ ಭೇಟಿ ನೀಡಿ.

ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.



































ಸಂಸ್ಥೆಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ
ಹುದ್ದೆಯ ಹೆಸರುಲೀಗಲ್ ಆಫೀಸರ್
ಒಟ್ಟು ಹುದ್ದೆಗಳು1
ಉದ್ಯೋಗದ ಸ್ಥಳಬೆಂಗಳೂರು
 ವೇತನನಿಯಮಾನುಸಾರ
ಅರ್ಜಿ ಸಲ್ಲಿಕೆ ಬಗೆಆಫ್​ಲೈನ್​
ಅರ್ಜಿ ಸಲ್ಲಿಕೆ ಆರಂಭ ದಿನಾಂಕ31/01/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ15/02/2022



ವಿದ್ಯಾರ್ಹತೆ:
ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ನೇಮಕಾತಿ ಅಧಿಸೂಚನೆ ಪ್ರಕಾರ, ಲೀಗಲ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಶೈಕ್ಷಣಿಕ ಅರ್ಹತೆ BWSSBಯ ನೇಮಕಾತಿ ನಿಯಮಾವಳಿಗಳ ಅನುಸಾರ ಇರಬೇಕು.

ಇದನ್ನೂ ಓದಿ:UAS Dharwad Recruitment 2022: ತಿಂಗಳಿಗೆ 35,000 ಸಂಬಳ, ಅಸಿಸ್ಟೆಂಟ್ ಪ್ರೊಫೆಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಅನುಭವ:
ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ನೇಮಕಾತಿ ಅಧಿಸೂಚನೆ ಪ್ರಕಾರ, ಲೀಗಲ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ನ್ಯಾಯಾಂಗ ಇಲಾಖೆಯಲ್ಲಿ ನ್ಯಾಯಾಧೀಶರಾಗಿ ನಿವೃತ್ತರಾಗಿರಬೇಕು ಅಥವಾ ಸ್ವಯಂ ನಿವೃತ್ತರಾಗಿರಬೇಕು.

ವಯಸ್ಸಿನ ಮಿತಿ:
ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಗರಿಷ್ಠ ವಯಸ್ಸು 70 ವರ್ಷಕ್ಕಿಂತ ಕಡಿಮೆ ಇರಬೇಕು.

ವಯೋಮಿತಿ ಸಡಿಲಿಕೆ:
ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ನಿಯಮಗಳ ಪ್ರಕಾರ ಆಯಾಯ ವರ್ಗಾನುಸಾರ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.

ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಸಂದರ್ಶನ

ಇದನ್ನೂ ಓದಿ:KPTCL Recruitment 2022: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ, Last Date ಯಾವಾಗ ಗೊತ್ತಾ?

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 31/01/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 15/02/2022

ಅರ್ಜಿ ಸಲ್ಲಿಸುವುದು ಹೇಗೆ?
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು.

ಬೇರೆ ಬೇರೆ ಉದ್ಯೋಗ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ.

ಮುಖ್ಯ ಆಡಳಿತಾಧಿಕಾರಿ ಮತ್ತು ಕಾರ್ಯದರ್ಶಿ
ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ
1 ನೇ ಮಹಡಿ, ಕಾವೇರಿ ಭವನ, ಕೆ.ಜಿ ರಸ್ತೆ,
ಬೆಂಗಳೂರು - 560009
Published by:Latha CG
First published: