• Home
  • »
  • News
  • »
  • jobs
  • »
  • Central Government Job: ಡಿಗ್ರಿ ಪಾಸಾಗಿದ್ರೆ ಕೇಂದ್ರ ಸರ್ಕಾರದ ನೌಕರಿ, ತಿಂಗಳಿಗೆ 45 ಸಾವಿರ ಸಂಬಳ

Central Government Job: ಡಿಗ್ರಿ ಪಾಸಾಗಿದ್ರೆ ಕೇಂದ್ರ ಸರ್ಕಾರದ ನೌಕರಿ, ತಿಂಗಳಿಗೆ 45 ಸಾವಿರ ಸಂಬಳ

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

ಆಸಕ್ತರು ನವೆಂಬರ್ 21, 2022 ರೊಳಗೆ ಆಫ್​ಲೈನ್(Offline) ಮೂಲಕ ಅರ್ಜಿ ಸಲ್ಲಿಸಬೇಕು.

  • News18 Kannada
  • Last Updated :
  • New Delhi, India
  • Share this:

    Cabinet Secretariat Recruitment 2022: ಭಾರತ ಸರ್ಕಾರದ ಕ್ಯಾಬಿನೆಟ್ ಸೆಕ್ರೆಟರಿಯೇಟ್ 15 ಡೆಪ್ಯುಟಿ ಫೀಲ್ಡ್​ ಆಫೀಸರ್(Deputy Field Officer) ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಅರ್ಹ ಮತ್ತು ಆಸಕ್ತರು ಅರ್ಜಿ ಹಾಕಬಹುದಾಗಿದೆ. ಕೇಂದ್ರ ಸರ್ಕಾರದ(Central Government) ಉದ್ಯೋಗ ಹುಡುಕುತ್ತಿರುವ ಆಕಾಂಕ್ಷಿಗಳಿಗೆ ಇದು ಉತ್ತಮ ಅವಕಾಶವಾಗಿದೆ. ಆಸಕ್ತರು ನವೆಂಬರ್ 21, 2022 ರೊಳಗೆ ಆಫ್​ಲೈನ್(Offline) ಮೂಲಕ ಅರ್ಜಿ ಸಲ್ಲಿಸಬೇಕು. ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಅಧಿಕೃತ ವೆಬ್​ಸೈಟ್​ cabsec.gov.in ಗೆ ಭೇಟಿ ನೀಡಬಹುದು.


    ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.

    ಸಂಸ್ಥೆಕ್ಯಾಬಿನೆಟ್ ಸೆಕ್ರೆಟರಿಯೇಟ್
    ಹುದ್ದೆಯ ಹೆಸರುಡೆಪ್ಯುಟಿ ಫೀಲ್ಡ್​ ಆಫೀಸರ್
    ಒಟ್ಟು ಹುದ್ದೆ15
    ವಿದ್ಯಾರ್ಹತೆಪದವಿ
    ಸ್ಥಳಭಾರತದಲ್ಲಿ ಎಲ್ಲಿ ಬೇಕಾದರೂ
    ವೇತನಮಾಸಿಕ ₹44,900
    ಅರ್ಜಿ ಸಲ್ಲಿಕೆ ಬಗೆಆಫ್​ಲೈನ್
    ಅರ್ಜಿ ಸಲ್ಲಿಕೆ ಆರಂಭ ದಿನಾಂಕ27/10/2022
    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ21/11/2022


    ಅರ್ಹತಾ ಮಾನದಂಡಗಳೇನು?


    ವಿದ್ಯಾರ್ಹತೆ:
    ಕ್ಯಾಬಿನೆಟ್ ಸೆಕ್ರೆಟರಿಯೇಟ್ ನೇಮಕಾತಿ ಅಧಿಸೂಚನೆ ಪ್ರಕಾರ, ಡೆಪ್ಯುಟಿ ಫೀಲ್ಡ್​ ಆಫೀಸರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಡಿಪ್ಲೋಮಾ/ ಪದವಿ ಪೂರ್ಣಗೊಳಿಸಿರಬೇಕು.


    ಇದನ್ನೂ ಓದಿ:NHM Karnataka Recruitment: 1048 ಸಮುದಾಯ ಆರೋಗ್ಯಾಧಿಕಾರಿ ಹುದ್ದೆಗಳು ಖಾಲಿ, ಬಿಎಸ್ಸಿ ನರ್ಸಿಂಗ್ ಆದವರು Apply ಮಾಡಿ


    ವಯೋಮಿತಿ:
    ಕ್ಯಾಬಿನೆಟ್ ಸೆಕ್ರೆಟರಿಯೇಟ್ ನೇಮಕಾತಿ ಅಧಿಸೂಚನೆ ಪ್ರಕಾರ, ಡೆಪ್ಯುಟಿ ಫೀಲ್ಡ್​ ಆಫೀಸರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು ನವೆಂಬರ್ 21, 2022ಕ್ಕೆ ಕನಿಷ್ಠ 21 ವರ್ಷ ಮತ್ತು ಗರಿಷ್ಠ 30 ವರ್ಷ ಇರಬೇಕು.


    ವಯೋಮಿತಿ ಸಡಿಲಿಕೆ:
    ಒಬಿಸಿ ಅಭ್ಯರ್ಥಿಗಳು- 3 ವರ್ಷ
    ಎಸ್​​ಸಿ/ಎಸ್​ಟಿ ಅಭ್ಯರ್ಥಿಗಳು- 5 ವರ್ಷ


    ಆಯ್ಕೆ ಪ್ರಕ್ರಿಯೆ:
    ಲಿಖಿತ ಪರೀಕ್ಷೆ
    ಸಂದರ್ಶನ


    ಅರ್ಜಿ ಸಲ್ಲಿಸುವುದು ಹೇಗೆ?
    ಆಸಕ್ತ ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ನವೆಂಬರ್ 21, 2022ರೊಳಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು.


    ಪೋಸ್ಟ್​ ಬಾಗ್ ನಂಬರ್.001
    ಲೋಧಿ ರಸ್ತೆ ಹೆಡ್​ ಪೋಸ್ಟ್​ ಆಫೀಸ್,
    ನವದೆಹಲಿ-110003


    ಇದನ್ನೂ ಓದಿ: IOCL Recruitment: 265 ಅಪ್ರೆಂಟಿಸ್ ಹುದ್ದೆಗಳ ನೇಮಕಾತಿ, PUC ಪಾಸಾದವರಿಗೂ ಅವಕಾಶ


    ಪ್ರಮುಖ ದಿನಾಂಕಗಳು:
    ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 27/10/2022
    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 21/11/2022

    Published by:Latha CG
    First published: