Canara Bank Recruitment 2021: ಕೆನರಾ ಬ್ಯಾಂಕ್​ ಚೀಫ್ ಡಿಜಿಟಲ್ ಅಧಿಕಾರಿ ಹುದ್ದೆಗೆ ಅರ್ಜಿ ಆಹ್ವಾನ

ಕನಿಷ್ಟ 35 ರಿಂದ ಗರಿಷ್ಟ 50 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಕೆನರಾ ಬ್ಯಾಂಕ್

ಕೆನರಾ ಬ್ಯಾಂಕ್

  • Share this:
    ಕೆನರಾ ಬ್ಯಾಂಕ್ ಚೀಫ್ ಡಿಜಿಟಲ್ ಅಧಿಕಾರಿ ಹುದ್ದೆಯನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ತಿಳಿಸಿದೆ. ಜೂನ್ 30,2021ರೊಳಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ.

    ವಿದ್ಯಾರ್ಹತೆ:

    ಬಿ.ಇ/ಬಿ.ಟೆಕ್ ಮತ್ತು ಎಂಬಿಎ ಮತ್ತು ಪ್ರಾಜೆಕ್ಟ್ ಮ್ಯಾನೇಜ್ಮೆಂಟ್ ನಲ್ಲಿ ಸರ್ಟಿಫಿಕೇಶನ್ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿ ತಿಳಿಸಿದೆ.

    ವಯೋಮಿತಿ:

    ಕನಿಷ್ಟ 35 ರಿಂದ ಗರಿಷ್ಟ 50 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ.

    ಆಯ್ಕೆ ಪ್ರಕ್ರಿಯೆ:

    ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಕಿರುಪಟ್ಟಿ ಸಿದ್ಧಪಡಿಸಿ ನಂತರ ಗುಂಪು ಚರ್ಚೆ ಅಥವಾ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

    ಅರ್ಜಿ ಶುಲ್ಕ:

    -ಸಾಮಾನ್ಯ ಅಭ್ಯರ್ಥಿಗಳು 1180ರೂ

    -ಪ.ಜಾ/ಪ.ಪಂ/ಪಿಡಬ್ಲ್ಯೂಬಿಡಿ/ಮಹಿಳಾ ಅಭ್ಯರ್ಥಿಗಳು 118ರೂ

    ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಶುಲ್ಕ ಪಾವತಿಸಬೇಕು

    ಅರ್ಜಿ ಸಲ್ಲಿಸುವುದು ಹೇಗೆ?:

    ಅರ್ಹ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಕೆನರಾ ಬ್ಯಾಂಕ್ ಅಧಿಕೃತ ವೆಬ್‌ಸೈಟ್ https://www.canarabank.com/ ಗೆ ಭೇಟಿ ನೀಡಿ. ಅಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿ ನಂತರ ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿಗೆ ಜೂನ್ 30,2021ರೊಳಗೆ ತಲುಪಿಸಬೇಕು

    ಕಚೇರಿ ವಿಳಾಸ:

    The Senior Manager,

    Canara Bank,

    Recruitment Cell, H R Wing,

    Head Office, 112, J C Road,

    Bengaluru-560 002.
    Published by:Harshith AS
    First published: