Stenographer Job: ಬೆಳಗಾವಿಯಲ್ಲಿದೆ ಸ್ಟೆನೋಗ್ರಾಫರ್​ ಹುದ್ದೆ; ಮಾಸಿಕ 52650 ರೂವರೆಗೆ ವೇತನ

ಅರ್ಜಿಯನ್ನು ಅಭ್ಯರ್ಥಿಗಳು ಆಫ್​ಲೈನ್​ ಮೂಲಕ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಸೆಪ್ಟೆಂಬರ್​ 9 ಆಗಿದೆ.

ಬೇಗ ಅರ್ಜಿ ಸಲ್ಲಿಸಿ

ಬೇಗ ಅರ್ಜಿ ಸಲ್ಲಿಸಿ

  • Share this:
    ಕಂಟೋನ್ಮೆಂಟ್ ಬೋರ್ಡ್  ಬೆಳಗಾವಿಯಲ್ಲಿ (Cantonment Board Belgaum) ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಸ್ಟೆನೋಗ್ರಾಫರ್​, ಸಹಾಯಕ ನೈರ್ಮಲ್ಯ ನಿರೀಕ್ಷಕ ಸೇರಿದಂತೆ ಒಟ್ಟು 3 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಪಿಯುಸಿ, ಡಿಪ್ಲೊಮಾ ಪದವೀಧರರು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿಯನ್ನು ಅಭ್ಯರ್ಥಿಗಳು ಆಫ್​ಲೈನ್​ ಮೂಲಕ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಸೆಪ್ಟೆಂಬರ್​ 9 ಆಗಿದೆ.

    ಈ ನೇಮಕಾತಿಗೆ ಸಂಬಂಧಿಸಿದ ಇತರ ಪ್ರಮುಖ ಮಾಹಿತಿಗಳಾದ ಅರ್ಜಿ ಪ್ರಕ್ರಿಯೆ, ಖಾಲಿ ಹುದ್ದೆಗಳ ಸಂಖ್ಯೆ, ವೇತನಗಳು, ಆಯ್ಕೆ ವಿಧಾನ ಇತ್ಯಾದಿಗಳ ಮಾಹಿತಿ ಈ ಕೆಳಗಿನಂತಿವೆ.

    ಸಂಸ್ಥೆಯ ಹೆಸರು: ಕಂಟೋನ್ಮೆಂಟ್ ಬೋರ್ಡ್ ಬೆಳಗಾವಿ
    ಹುದ್ದೆಯ ಹೆಸರು: ಸ್ಟೆನೋಗ್ರಾಫರ್, ಸಹಾಯಕ ನೈರ್ಮಲ್ಯ ನಿರೀಕ್ಷಕ
    ಹುದ್ದೆಗಳ ಸಂಖ್ಯೆ: 3
    ಉದ್ಯೋಗ ಸ್ಥಳ: ಬೆಳಗಾವಿ
    ವೇತನ: 17000-52650 ರೂ. ಪ್ರತಿ ತಿಂಗಳು



























    ಹುದ್ದೆಹುದ್ದೆ ಸಂಖ್ಯೆವಿದ್ಯಾರ್ಹತೆವೇತನ
    ಸ್ಟೆನೋಗ್ರಾಫರ್1ಪಿಯುಸಿ, ಡಿಪ್ಲೊಮಾ27650-52650 ರೂ ಮಾಸಿಕ
    ಸಹಾಯಕ ನೈರ್ಮಲ್ಯ ನಿರೀಕ್ಷಕರು1ಸ್ಯಾನಿಟರಿ ಹೆಲ್ತ್ ಇನ್‌ಸ್ಪೆಕ್ಟರ್‌ನಲ್ಲಿ ಡಿಪ್ಲೊಮಾ, ಪಿಯುಸಿ23500-47650 ರೂ ಮಾಸಿಕ
    ಮಾಲಿ1ತೋಟಗಾರಿಕೆಯಲ್ಲಿ ತರಬೇತಿ ಪ್ರಮಾಣಪತ್ರ17000-28950 ರೂ ಮಾಸಿಕ

    ವಯೋಮಿತಿ: ಕಂಟೋನ್ಮೆಂಟ್ ಬೋರ್ಡ್ ಬೆಳಗಾವಿ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಕನಿಷ್ಠ 21 ವರ್ಷಗಳು ಮತ್ತು ಗರಿಷ್ಠ 30 ವರ್ಷಗಳನ್ನು ಹೊಂದಿರಬೇಕು.

    ವಯೋಮಿತಿ ಸಡಿಲಿಕೆ
    ಒಬಿಸಿ ಅಭ್ಯರ್ಥಿಗಳು: 03 ವರ್ಷಗಳು
    ಪ.ಜಾ, ಪ.ಪಂ ಅಭ್ಯರ್ಥಿಗಳು: 05 ವರ್ಷಗಳು
    ವಿಕಲಚೇತನ ಅಭ್ಯರ್ಥಿಗಳು: 10 ವರ್ಷಗಳು

    ಇದನ್ನು ಓದಿ: ಬಿಬಿಎಂಪಿಯಲ್ಲಿ ಬೃಹತ್​ ನೇಮಕಾತಿ; 940 ಹುದ್ದೆಗೆ ವಾಕ್​ ಇನ್​ ಇಂಟರ್​ವ್ಯೂ

    ಅರ್ಜಿ ಶುಲ್ಕ
    ಅಂಗವಿಕಲ ಅಭ್ಯರ್ಥಿಗಳು: ಶುಲ್ಕ ವಿನಾಯಿತಿ
    ಎಲ್ಲಾ ಇತರ ಅಭ್ಯರ್ಥಿಗಳು: 500 ರೂ

    ಪಾವತಿ ವಿಧಾನ: ಡಿಮ್ಯಾಂಡ್ ಡ್ರಾಫ್ಟ್

    ಆಯ್ಕೆ ಪ್ರಕ್ರಿಯೆ
    ಲಿಖಿತ ಪರೀಕ್ಷೆ ಮತ್ತು ಸಂದರ್ಶನ

    ಅರ್ಜಿ ಸಲ್ಲಿಕೆ ವಿಳಾಸ

    ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ, ಕಂಟೋನ್ಮೆಂಟ್ ಬೋರ್ಡ್, BC ನಂ.41, ಖಾನಾಪುರ ರಸ್ತೆ, ಶಿಬಿರ, ಬೆಳಗಾವಿ-590001

    ಪ್ರಮುಖ ದಿನಾಂಕಗಳು:
    ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 30 ಜುಲೈ 2022
    ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 09 ಸೆಪ್ಟೆಂಬರ್​  2022

    ಇದನ್ನು ಓದಿ: 200 ಟ್ರೈನಿ ಹುದ್ದೆಗಳ ನೇಮಕಾತಿ; ವೇತನ, ಅರ್ಜಿ ಸಲ್ಲಿಕೆ ಸೇರಿದಂತೆ ಸಂಪೂರ್ಣ ಮಾಹಿತಿ

    ಅಧಿಸೂಚನೆ ಪ್ರಮುಖ ಲಿಂಕ್‌ಗಳು
    ಅಧಿಕೃತ ಅಧಿಸೂಚನೆ ಮತ್ತು ಅರ್ಜಿ ನಮೂನೆ: ಇಲ್ಲಿ ಕ್ಲಿಕ್ ಮಾಡಿ
    ಅಧಿಕೃತ ವೆಬ್‌ಸೈಟ್: cbbelgaum.in

    ಅರ್ಜಿ ಸಲ್ಲಿಕೆ ವಿಧಾನ

    ಅಧಿಸೂಚನೆ 2022 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಂಡು ಮುಂದುವರೆಯಿರಿ.

    ಬಳಿಕ ಮೇಲೆ ನೀಡಲಾದ ಲಿಂಕ್​ ಗೆ ಕ್ಲಿಕ್​ ಮಾಡಿ ಅಧಿಕೃತ ಅಧಿಸೂಚನೆಯಿಂದ ಅರ್ಜಿ ನಮೂನೆಯಲ್ಲಿ ಫಾರ್ಮ್ ಅನ್ನು ಭರ್ತಿ ಮಾಡಿ.

    - ಸಂವಹನ ಉದ್ದೇಶಕ್ಕಾಗಿ ದಯವಿಟ್ಟು ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆ ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ಇತ್ತೀಚಿನ ಫೋಟೋಗ್ರಾಫ್ ನೀಡಿ. ರೆಸ್ಯೂಮ್, ಯಾವುದೇ ಅನುಭವವಿದ್ದರೆ ಇತ್ಯಾದಿ ದಾಖಲೆಗಳನ್ನು ನೀಡಿ.

    -ಎಲ್ಲಾ ಮಾಹಿತಿಯನ್ನು ಪೂರ್ಣಗೊಳಿಸಿದ ನಂತರ, ಒದಗಿಸಿದ ವಿವರಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿದ ಬಳಿಕ ಮೇಲ್ಕಂಡ ವಿಳಾಸಕ್ಕೆ ನಿಗದಿತ ದಿನಾಂಕಕ್ಕೂ ಮುನ್ನ ಸ್ಪೀಡ್​ ಅಥವಾ ರಿಜಿಸ್ಟರ್​ ಪೋಸ್ಟ್​ ಮೂಲಕ ಅರ್ಜಿ ಸಲ್ಲಿಸಿ.
    Published by:Seema R
    First published: