ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ನೇತೃತ್ವದ ರಾಜ್ಯ ಬಿಜೆಪಿ ಸರ್ಕಾರದ ಕೊನೆಯ ಬಜೆಟ್ ವಿಧಾನಸಭೆಯಲ್ಲಿ ಮಂಡನೆಯಾಗಿದೆ. ಸಿಎಂ ಬಸವರಾಜ ಬೊಮ್ಮಾಯಿ ತಮ್ಮ ಈ ಆಡಳಿತಾವಧಿಯ ಕೊನೆಯ ಬಜೆಟ್ (Budget) ಮಂಡನೆ ಮಾಡಿದ್ದಾರೆ. ಚುನಾವಣಾ ವರ್ಷ (Year) ಆಗಿರುವುದರಿಂದ ಬಜೆಟ್‌ನಲ್ಲಿ ಎಲ್ಲಾ ವರ್ಗದ ಜನರನ್ನು ತಲುಪಲು ಪ್ರಯತ್ನ ಪಟ್ಟಿರುವ ಸಿಎಂ ಬೊಮ್ಮಾಯಿ, ಭರಪೂರ ಘೋಷಣೆಗಳನ್ನು ಮಾಡಿದ್ದಾರೆ. ಇದರ ಜೊತೆಜೊತೆಗೆ ಯುವ ಜನತೆಗೆ ಅನುಕೂಲವಾಗುವ ಯೋಜನೆಗಳನ್ನೂ (Plan) ಘೋಷಣೆ ಮಾಡಿದ್ದಾರೆ.
ಈ ಭಾರಿ ಕರ್ನಾಟಕ ಬಜೆಟ್ ಮಂಡನೆಯ ಸಂದರ್ಭದಲ್ಲಿ ಉತ್ತಮ ಸೌಲಭ್ಯಗಳನ್ನು ಶಿಕ್ಷಣ ಕ್ಷೇತ್ರಕ್ಕೆ ಹಾಗೂ ಯುವ ಜನತೆಗೆ ನೀಡಲಾಗುತ್ತಿದೆ. ಈ ಯೋಜನೆಗಳಿಂದ ಎಷ್ಟು ಸಹಾಯವಾಗಲಿದೆ ಹಾಗೂ ಯಾವ ರೀತಿಯ ಯೋಜನೆಯನ್ನು ಈ ಬಾರಿ ನೀಡಲಾಗಿದೆ ಎಂಬ ಮಾಹಿತಿ ಇಲ್ಲಿದೆ.
ಇದನ್ನೂ ಓದಿ: Karnataka Budget 2023 Live Updates: ಕೊನೆಗೂ ನನಸಾದ ಉತ್ತರ ಕನ್ನಡ ಜನರ ಕನಸು, ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಘೋಷಣೆ
IIT, IIM, IISc, NIT ಸಂಸ್ಥೆಗಳಲ್ಲಿ ಪ್ರವೇಶ ಪಡೆಯುವ ಅಭ್ಯರ್ಥಿಗಳಿಗೆ ಪ್ರೊತ್ಸಾಹ ಧನವನ್ನು 2 ರಿಂದ 4 ಲಕ್ಷ ಕ್ಕೆ ಎರಿಕೆ ಮಾಡಲಾಗಿದೆ. ಇದರಿಂದ ಹಲವಾರಿಗೆ ಆರ್ಥಿಕವಾಗಿ ಸಹಾಯವಾಗಲಿದೆ.
30 ಕೋಟಿ ವೆಚ್ಚದಲ್ಲಿ ಸ್ಟಾರ್ಟ್ಪ್ ಪಾರ್ಕ್
ಬೆಂಗಳೂರಿನಲ್ಲಿ ಎಲ್ಲರಿಗೂ ಅನುಕೂಲವಾಗುವಂತೆ ಕೆಂಪೇಗೌಡ ವಿಮಾನ ನಿಲ್ದಾಣದ ಬಳಿ ಸ್ಟಾರ್ಟ್ಪ್ ಪಾರ್ಕ್ ನಿರ್ಮಾಣ ಮಾಡಲಾಗುವುದು ಎಂದು ತಿಳಿಸಿದ್ದಾರೆ. ಯುವ ಜನತೆಗೆ ಈ ಯೋಜನೆಯಿಂದ ತುಂಬಾ ಸಹಕಾರಿಯಾಗಲಿದೆ. ಅಷ್ಟೇ ಅಲ್ಲಾ ಯಾವೆಲ್ಲಾ ಯುವಜನರಿಗೆ ಉದ್ಯೋಗ ಇಲ್ಲವೋ ಅಂತಹ ನಿರುದ್ಯೋಗಿಗಳಿಗೆ 2000ರೂ ನೀಡಲಾಗುವುದು ಎಂದು ಹೇಳಿದ್ದಾರೆ. ಆರ್ಥಿಕವಾಗಿ ಯಾವುದೇ ಬೆಂಬಲ ಇರದ ನಿರುದ್ಯೋಗಿಗಳಿಗೆ ಇದರಿಂದ ಸಹಾಯವಾಗಲಿದೆ. ಅದೇ ರೀತಿ ಶಿಕ್ಷಣ ಕ್ಷೇತ್ರಕ್ಕೂ ಬೆಂಬಲ ಸಿಕ್ಕಿದೆ ಆ ಕುರಿತ ಮಾಹಿತಿ ಇಲ್ಲಿದೆ ಗಮನಿಸಿ
350 ಕೋಟಿ ವೆಚ್ಚದಲ್ಲಿ ಉಚಿತ ಬಸ್ಸು ಪಾಸ್ ಸೌಲಭ್ಯ
ನೀಡಲಾಗುತ್ತಿದೆ. ಇದರಿಂದ ರಾಜ್ಯದ 8 ಲಕ್ಷ ಹೆಣ್ಣು ಮಕ್ಕಳ ಶಿಕ್ಷಣಕ್ಕೆ ಅನುಕೂಲವಾಗಲಿದೆ.ಈ ಭಾರಿ ಕರ್ನಾಟಕ ಬಜೆಟ್ ಮಂಡನೆಯ ಸಂದರ್ಭದಲ್ಲಿ ಉತ್ತಮ ಸೌಲಭ್ಯಗಳನ್ನು ಶಿಕ್ಷಣ ಕ್ಷೇತ್ರಕ್ಕೆ ಹಾಗೂ ಯುವ ಜನತೆಗೆ ನೀಡಲಾಗುತ್ತಿದೆ. ಈ ಯೋಜನೆಗಳಿಂದ ಎಷ್ಟು ಸಹಾಯವಾಗಲಿದೆ ಹಾಗೂ ಯಾವ ರೀತಿಯ ಯೋಜನೆಯನ್ನು ಈ ಬಾರಿ ನೀಡಲಾಗಿದೆ. IIT, IIM, IISc, NIT ಸಂಸ್ಥೆಗಳಲ್ಲಿ ಪ್ರವೇಶ ಪಡೆಯುವ ಅಭ್ಯರ್ಥಿಗಳಿಗೆ ಪ್ರೊತ್ಸಾಹ ಧನವನ್ನು 2 ರಿಂದ 4 ಲಕ್ಷ ಕ್ಕೆ ಎರಿಕೆ ಮಾಡಲಾಗಿದೆ. ಇದರಿಂದ ಹಲವಾರಿಗೆ ಆರ್ಥಿಕವಾಗಿ ಸಹಾಯವಾಗಲಿದೆ.
ವಿದ್ಯಾರ್ಥಿಗಳಿಗೆ ಉತ್ತಮ ಕಲಿಕಾ ವಾತಾವರಣ ನಿರ್ಮಾಣ
ವಿದ್ಯಾರ್ಥಿಗಳಿಗೆ ಉತ್ತಮ ಕಲಿಕಾ ವಾತಾವರಣ ನಿರ್ಮಾಣ ಮಾಡಲು ಹಾಗೂ ಮೂಕ ಸೌಕರ್ಯಗಳಿರುವ ವಸತಿ ಶಾಲೆಗಳನ್ನು ನಿರ್ಮಾಣ ಮಾಡಲು ಬಜೆಟ್ ಬಿಡುಗಡೆ ಮಾಡಲಾಗಿದೆ. ರಾಜ್ಯದ 93 ಅಭಿವೃದ್ಧಿ ಆಕಾಂಕ್ಷಿ ತಾಲೂಕುಗಳಲ್ಲಿ ವಿದ್ಯಾರ್ಥಿಗಳಿಗೆ ಉತ್ತಮ ಕಲಿಕೆಯ ವಾತಾವರಣವನ್ನು ಒದಗಿಸಲು ಎಲ್ಲಾ ಶಾಲೆಗಳು ಮತ್ತು ಪದವಿಪೂರ್ವ ಕಾಲೇಜುಗಳಲ್ಲಿ 632 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ಅಲ್ಪಸಂಖ್ಯಾತ ಸಮುದಾಯಗಳ ಸರ್ವತೋಮುಖ ಅಭಿವೃದ್ಧಿ
ಶಿಕ್ಷಣ ಹಾಗೂ ಆರೋಗ್ಯ ಸೇವೆಗಳು ಎಲ್ಲ ವರ್ಗಗಳ, ಎಲ್ಲ ಪ್ರದೇಶಗಳ ಜನರಿಗೆ ಸುಲಭವಾಗಿ ದೊರೆಯುವಂತೆ ಮಾಡುವುದು ನಮ್ಮ ಆದ್ಯತೆಯಾಗಿದೆ ಎಂದು ಸಿಎಂ ಬೊಮ್ಮಾಯಿ ಬಜೆಟ್‌ನಲ್ಲಿ ಹೇಳಿದ್ದಾರೆ. ಪಂಗಡಗಳು, ಅಂತೆಯೇ ಪರಿಶಿಷ್ಟ ಜಾತಿ, ಪರಿಶಿಷ್ಟ ಹಿಂದುಳಿದ ವರ್ಗಗಳು ಅಲ್ಪಸಂಖ್ಯಾತ ಸಮುದಾಯಗಳ ಸರ್ವತೋಮುಖ ಅಭಿವೃದ್ಧಿಗೆ ಜಾರಿಯಲ್ಲಿರುವ ಯೋಜನೆಗಳನ್ನು ಸರಳ, ಸುಗಮಗೊಳಿಸುವ ಜೊತೆಗೆ ನೂತನ ಕಾರ್ಯಕ್ರಮಗಳನ್ನು ರೂಪಿಸಲಾಗಿದೆ ಎಂದರು.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ