• ಹೋಂ
 • »
 • ನ್ಯೂಸ್
 • »
 • Jobs
 • »
 • Karnataka Budget 2023: ನಿರುದ್ಯೋಗಿಗಳಿಗೆ ಗುಡ್ ನ್ಯೂಸ್; ತಲಾ 2,000 ರೂಪಾಯಿ ಆರ್ಥಿಕ ನೆರವು

Karnataka Budget 2023: ನಿರುದ್ಯೋಗಿಗಳಿಗೆ ಗುಡ್ ನ್ಯೂಸ್; ತಲಾ 2,000 ರೂಪಾಯಿ ಆರ್ಥಿಕ ನೆರವು

ಪ್ರಾತಿನಿಧಿಕ ಚಿತ್ರ

ಪ್ರಾತಿನಿಧಿಕ ಚಿತ್ರ

ಕೆಲಸ ಸಿಗದ ಪದವೀಧರರಿಗೆ ಸಬ್ಸಿಡಿ ಘೋಷಿಸಲಾಗಿದೆ. 'ಯುವಸ್ನೇಹಿ' ಎಂಬ ಹೊಸ ಯೋಜನೆಯಡಿ ತಲಾ 2,000 ರೂಪಾಯಿ ನೀಡಲಾಗುವುದು.

 • News18 Kannada
 • 3-MIN READ
 • Last Updated :
 • Bangalore [Bangalore], India
 • Share this:

2023-24ನೇ ಬಜೆಟ್​ ನಲ್ಲಿ ಸಿಎಂ ಬಸವರಾಜ ಬೊಮ್ಮಾಯಿ (CM Basavaraj Bommai) ಸರ್ಕಾರ ನಿರುದ್ಯೋಗಿಗಳಿಗೆ ಬಂಪರ್​ ಕೊಡುಗೆ ಘೋಷಿಸಿದೆ. ಪದವಿ ಶಿಕ್ಷಣವನ್ನು ಮುಗಿಸಿ, ಮೂರು ವರ್ಷಗಳ ನಂತರವೂ ಯಾವುದೇ ಉದ್ಯೋಗ (Job) ದೊರೆಯದೆ ಇದ್ರೆ 2,000 ರೂಪಾಯಿ ಆರ್ಥಿಕ ನೆರವು ನೀಡುವುದಾಗಿ ಘೋಷಿಸಿದೆ. 'ಯುವಸ್ನೇಹಿ' ಎಂಬ ಹೊಸ ಯೋಜನೆಯಡಿ ತಲಾ 2,000 ರೂಪಾಯಿ ನೀಡಲಾಗುವುದು. ಒಂದು ಬಾರಿ ಮಾತ್ರ ಆರ್ಥಿಕ ನೆರವು ಸಿಗಲಿದೆ. ಇನ್ನು ಯುವಜನತೆಗೆ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಭಾಗವಹಿಸಲು ಪ್ರೋತ್ಸಾಹ ಧನ ನೀಡಲಾಗುವುದು ಎಂದು ಘೋಷಿಸಲಾಗಿದೆ.


ಇನ್ನು ಒಟ್ಟಾರೆ ಈ ಉದ್ಯೋಗಗಳಲ್ಲಿ ಇರುವವರ ಸಹಾಯಧನ ಏರಿಕೆ ಆಗಿದೆ.  ಆಶಾ ಕಾರ್ಯಕರ್ತರೆಯರು, ಅಂಗನವಾಡಿ ಕಾರ್ಯಕರ್ತೆಯರು, ಅಂಗನವಾಡಿ ಸಹಾಯಕರು, ಬಿಸಿಯೂಟ ತಯಾರಕರು, ಅತಿಥಿ ಉಪನ್ಯಾಸಕರು, ಅತಿಥಿ ಶಿಕ್ಷಕರು, ಗ್ರಾಮಸಹಾಯಕರು, ಗ್ರಾಮ ಪಂಚಾಯ್ತಿ ಗ್ರಂಥಾಲಯ ಮೇಲ್ವಿಚಾರಕರು, ಗ್ರಾಮ ಪಂಚಾಯ್ತಿ ಸದಸ್ಯರ ಗೌರವ ಧನ ಹೆಚ್ಚಳ ಆಗಿದೆ.


ಇದನ್ನೂ ಓದಿ: Karnataka Budget 2023 Live Updates


ಯಾವೆಲ್ಲಾ ಕ್ಷೇತ್ರಗಳ ಉದ್ಯೋಗಿಗಳಿಗೆ ನೆರವು ಸಿಕ್ಕಿದೆ? 


1) ಟೂರಿಸ್ಟ್​ ಗೈಡ್​ಗಳ ಗೌರವ ಧನ ಹೆಚ್ಚಳ ಮಾಡಲಾಗಿದೆ. 2000 ರೂ.ನಿಂದ 5000 ರೂ.ಗಳಿಗೆ ಹೆಚ್ಚಿಸಲಾಗಿದೆ.


2) ಗ್ರಾಮ ಸಹಾಯಕರ ಹುದ್ದೆಯನ್ನು ‘ಜನಸೇವಕ' ಎಂದು ಮರುನಾಮಕರಣ ಮಾಡಲಾಗಿದೆ. ಗ್ರಾಮ ಸಹಾಯಕರ ಮಾಸಿಕ ಗೌರವಧನ 13,000 ರೂ. ಗಳಿಂದ. 14,000 ರೂ. ಗೆ ಹೆಚ್ಚಳ.
3) ಅಂಗನವಾಡಿ, ಆಶಾ ಕಾರ್ಯಕರ್ತೆಯರ ಸಹಾಯಧನ 1000 ರೂ. ನಿಂದ 1500 ರೂ.ಗೆ ಏರಿಕೆ.


4) ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರಿಗೆ ಗ್ರಾಚ್ಯೂಟಿ ನೀಡಲಾಗುವುದು


5)  ಭೂರಹಿತ ಮಹಿಳಾ ಕೃಷಿ ಕಾರ್ಮಿಕರಿಗೆ ಪ್ರತಿ ತಿಂಗಳು ತಲಾ 500 ರೂ. ಗಳ ಸಹಾಯ ಧನವನ್ನು ಡಿ.ಬಿ.ಟಿ. ಮೂಲಕ ನೀಡಲಿದೆ


6) ವಕೀಲರಿಗೆ ಆರೋಗ್ಯ ಸೌಲಭ್ಯ ಕಲ್ಪಿಸಲಾಗುವುದು.


7) ಪದವೀಧರ ಮಹಿಳೆಯರಿಗೆ ಐಐಎಂಬಿ ತರಬೇತಿ.


8) ಚಾಲಕರಿಗಾಗಿ ನಗರ ಮತ್ತು ಪಟ್ಟಣಗಳಲ್ಲಿ ಖಾಲಿ ಇರುವ ಜಾಗಗಳನ್ನ ಗುರುತಿಸಿ ಖ್ಯಾತ ನಟರಾದ ದಿವಂಗತ ಶಂಕರ್ ನಾಗ್ ರವರ ಹೆಸರಿನಲ್ಲಿ ಟ್ಯಾಕ್ಸಿ ಮತ್ತು ಆಟೋ ನಿಲ್ದಾಣಗಳನ್ನ ನಿರ್ಮಾಣ ಮಾಡಲಾಗುವುದು.


9)  ರಾಜ್ಯದ ಸಂಘಟಿತ ವಲಯದಲ್ಲಿ ದುಡಿಯುವ ಮಹಿಳೆಯರಿಗೆ ಉಚಿತ ಬಸ್​ ಪಾಸ್ ಸೌಲಭ್ಯ ಘೋಷಣೆ


10)  35 ಸಾವಿರ ನೋಂದಾಯಿತ ಗೃಹರಕ್ಷಕರಿಗೆ ಪ್ರಸ್ತುತ ಪ್ರತಿ ದಿನಕ್ಕೆ ನೀಡುತ್ತಿರುವ ಕರ್ತವ್ಯಭತ್ಯೆ 100 ರೂ. ಹೆಚ್ಚಳ


ಉದ್ಯೋಗಾಕಾಂಕ್ಷಿಗಳಿಗೆ ಬಂಪರ್​- ಒಂದು ಲಕ್ಷ ಹುದ್ದೆಗಳ ಭರ್ತಿ


ರಾಜ್ಯದ ಆಡಳಿತ ವ್ಯವಸ್ಥೆಯನ್ನು ಬಲಪಡಿಸಿ, ನಾಗರಿಕರಿಗೆ ಅತ್ಯುತ್ತಮ ಸೇವೆಯನ್ನು ಒದಗಿಸಲು ಹಾಗೂ ಯುವ ಜನತೆಗೆ ಹೆಚ್ಚಿನ ಉದ್ಯೋಗವಕಾಶವನ್ನು ಒದಗಿಸಲು ನಮ್ಮ ಸರ್ಕಾರವು ಒಂದು ಲಕ್ಷ ಹುದ್ದೆಗಳನ್ನು ಭರ್ತಿ ಮಾಡುವ ಐತಿಹಾಸಿಕ ನಿರ್ಣಯವನ್ನು ಕೈಗೊಂಡಿದೆ ಎಂದು ಬಜೆಟ್‌ ಭಾಷಣದಲ್ಲಿ ಮುಖ್ಯಮಂತ್ರಿಗಳು ಹೇಳಿದ್ದಾರೆ.


ಮಹಿಳೆಯರು ವೃತ್ತಿ ರೂಪಿಸಿಕೊಳ್ಳಲು ನೆರವು 


ಮಹಿಳೆಯರಿಗೆ ಬಜೆಟ್‌ನಲ್ಲಿ ಹೆಚ್ಚು ಆದ್ಯತೆ ನೀಡಲಾಗಿದೆ. ಆಧುನಿಕತೆಗೆ ತಕ್ಕಂತೆ ಮಹಿಳೆಯರು ಉದ್ಯೋಗ ಪಡೆಯಲು ಅನುಕೂಲವಾಗುವಂತೆ 1 ಲಕ್ಷ ಮಹಿಳೆಯರಿಗೆ ಉಚಿತ ಕೌಶಲ್ಯ ತರಬೇತಿ ನೀಡುವುದಾಗಿ ಘೋಷಣೆ. ಮಹಿಳಾ ಉದ್ಯಮಿದಾರರಿಗೆ 2 ಕೋಟಿ ರೂ. ತನಕ ಸಾಲ ಸೌಲಭ್ಯವನ್ನು ನೀಡಲಾಗುತ್ತದೆ ಎಂದು ಬಜೆಟ್‌ನಲ್ಲಿ ಘೋಷಿಸಲಾಗಿದೆ.


ಮಹಿಳಾ ಉದ್ಯಮಿಗಳಿಗೆ 2 ಕೋಟಿ ರೂ.ವರೆಗೆ ಸಾಲ ನೀಡಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಅವರು ಬಜೆಟ್​ ನಲ್ಲಿ ಘೋಷಿಸಿದ್ದಾರೆ.

Published by:Kavya V
First published: