Govt Job Alert: ಕೇಂದ್ರ ಸರ್ಕಾರದ ವಿವಿಧ ಇಲಾಖೆಯಲ್ಲಿದೆ ಉದ್ಯೋಗ: ಈ ವಾರದ ಟಾಪ್​ ಹುದ್ದೆಗಳ ಅಧಿಸೂಚನೆ ಇಲ್ಲಿದೆ

ಈ ವಾರ ಕೇಂದ್ರ ಸರ್ಕಾರದಿಂದ ಬಿಡುಗಡೆಯಾದ ಪ್ರಮುಖ ಅಧಿಸೂಚನೆಗಳ ಪಟ್ಟಿ ಇಲ್ಲಿದೆ. ಈ ಮೂಲಕ ಅಭ್ಯರ್ಥಿಗಳು ಹುದ್ದೆಗೆ ಅರ್ಜಿ ಸಲ್ಲಿಸಿ, ತಯಾರಿ ನಡೆಸಬಹುದಾಗಿದೆ. 

ಇಲ್ಲಿದೆ ಉದ್ಯೋಗ ಮಾಹಿತಿ

ಇಲ್ಲಿದೆ ಉದ್ಯೋಗ ಮಾಹಿತಿ

  • Share this:
    ಕೇಂದ್ರ ಸರ್ಕಾರದ (Central Government) ಹುದ್ದೆಗೆ ಆಯ್ಕೆ ಆಗಬೇಕು ಎಂಬುದು ಅನೇಕರ ಕನಸು. ಇದಕ್ಕಾಗಿ ಅಭ್ಯರ್ಥಿಗಳು ಹಗಲು ರಾತ್ರಿ ಕಷ್ಟಪಟ್ಟು ತಯಾರಿ ನಡೆಸುತ್ತಾರೆ. ಕೇಂದ್ರ ಸರ್ಕಾರದಿಂದ ಕೂಡ ಸಕಾಲಿಕವಾಗಿ ವಿವಿಧ ಇಲಾಖೆಗಳ ಹುದ್ದೆಗಳ ಭರ್ತಿಗೆ ಅಧಿಸೂಚನೆ (Notification) ಹೊರಡಿಸಲಾಗುವುದು. ಈ ಮೂಲಕ ಹುದ್ದೆ ಪಡೆಯಬೇಕು ಎಂಬ ದೇಶದ ಅಭ್ಯರ್ಥಿಗಳಿಗೆ ಅವಕಾಶ ನೀಡಲಾಗುವುದು. ಇನ್ನು ಈ ವಾರ ಕೇಂದ್ರ ಸರ್ಕಾರದಿಂದ ಬಿಡುಗಡೆಯಾದ ಪ್ರಮುಖ ಅಧಿಸೂಚನೆಗಳ ಪಟ್ಟಿ ಇಲ್ಲಿದೆ. ಈ ಮೂಲಕ ಅಭ್ಯರ್ಥಿಗಳು ಹುದ್ದೆಗೆ ಅರ್ಜಿ ಸಲ್ಲಿಸಿ, ತಯಾರಿ ನಡೆಸಬಹುದಾಗಿದೆ. 

    ರಾಷ್ಟ್ರೀಯ ತನಿಖಾ ಸಂಸ್ಥೆಯಲ್ಲಿ (National Investigation Agency) ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಸಹಾಯಕ (Assistant) ಮತ್ತು ಅಕೌಂಟೆಂಟ್ (Accountant)​ ಹುದ್ದೆ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಒಟ್ಟು 48 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಪದವಿ ಆಗಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಆಸಕ್ತ ಮತ್ತು ಸೂಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಯನ್ನು ಆಫ್​ಲೈನ್​ ಮೂಲಕ ಮಾಡಬಹುದಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಆಗಸ್ಟ್​ 28 ಆಗಿದೆ.

    ರಾಷ್ಟ್ರೀಯ ತನಿಖಾ ಸಂಸ್ಥೆಯಲ್ಲಿ ಪದವಿ ಆದವರಿಗೆ ಉದ್ಯೋಗಾವಕಾಶ

    ಡೈರೆಕ್ಟರೇಟ್ ಜನರಲ್ ಆಫ್ ಸಿವಿಲ್ ಏವಿಯೇಷನ್​ನಲ್ಲಿ (Directorate General of Civil Aviation) ಕನ್ಸಲ್ಟೇಂಟ್​ (Consultant) ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 58 ಹುದ್ದೆಗಳು ಖಾಲಿ ಇದ್ದು, ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಪದವೀಧರ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ದೇಶದ ಯಾವುದೇ ಮೂಲೆಯಲ್ಲಿ ಕೆಲಸ ಮಾಡಲು ಸಿದ್ದರಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿಯನ್ನು ಆಫ್​ಲೈನ್​ ಮೂಲಕ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಆಗಸ್ಟ್​ 18 ಆಗಿದೆ.

    ಕನ್ಸಲ್ಟೇಂಟ್​ ಹುದ್ದೆಗಳಿಗೆ ಅರ್ಜಿ ಆಹ್ವಾನ; ಮಾಸಿಕ 65000 ರೂ ವೇತನ

    ಬೆಂಗಳೂರಿನಲ್ಲಿರುವ ರಾಷ್ಟ್ರೀಯ ಹೈನುಗಾರಿಕಾ ಸಂಶೋಧನಾ ಸಂಸ್ಥೆಯಲ್ಲಿ (National Dairy Research Institute) ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಬಿಸಿನೆಸ್ ಮ್ಯಾನೇಜರ್, ಗುತ್ತಿಗೆ ಸಹಾಯಕ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಈ ಹುದ್ದೆಗಳನ್ನು ತಾತ್ಕಾಲಿಕವಾಗಿ ಒಪ್ಪಂದದ ಆಧಾರದ ಮೇಲೆ ನೇಮಕ ಮಾಡಲಾಗುವುದು. ಆಸಕ್ತ ಅಭ್ಯರ್ಥಿಗಳು ಇ ಮೇಲ್​ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಆಗಸ್ಟ್​ 20 ಆಗಿದೆ.

    ರಾಷ್ಟ್ರೀಯ ಹೈನುಗಾರಿಕಾ ಸಂಶೋಧನಾ ಸಂಸ್ಥೆಯಲ್ಲಿದೆ ಕೆಲಸ; ಪಿಯುಸಿ ಆಗಿದ್ರೆ ಸಾಕು

    ನ್ಯಾಷನಲ್ ಅಲ್ಯೂಮಿನಿಯಂ ಕಂಪನಿ ಲಿಮಿಟೆಡ್​​ನಲ್ಲಿ (National Aluminium Company Limited) ಗ್ರಾಜುಯೇಟ್​ ಇಂಜಿನಿಯರ್​​ ಟ್ರೈನಿ (Graduate Engineer Trainees) ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 189 ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಬಿಇ ಪದವಿ ಹೊಂದಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿಯನ್ನು ಅಭ್ಯರ್ಥಿಗಳು ಆನ್​ಲೈನ್​ ಮೂಲಕ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಸೆಪ್ಟೆಂಬರ್​ 11 ಆಗಿದೆ.

    ಗ್ರಾಜುಯೇಟ್​ ಇಂಜಿನಿಯರ್​​ ಟ್ರೈನಿ ಹುದ್ದೆಗಳಿಗೆ ಅರ್ಜಿ ಆಹ್ವಾನ; ಮಾಸಿಕ 40 ಸಾವಿರ ರೂ ವೇತನ

    ವಿಶೇಷ ಸೂಚನೆ: ಮೇಲ್ಕಂಡ ಹುದ್ದೆಗಳ ಲಿಂಕ್​ಗಳನ್ನು ಕ್ಲಿಕ್​ ಮಾಡುವ ಮೂಲಕ ಆಯಾ ಹುದ್ದೆಗಳ ಕುರಿತ ಸಂಪೂರ್ಣ ಮಾಹಿತಿಯನ್ನು ಪಡೆಯಬಹುದಾಗಿದೆ.
    Published by:Seema R
    First published: