• Home
  • »
  • News
  • »
  • jobs
  • »
  • Aadhar Card Jobs: ಡಿಗ್ರಿ ಪಾಸಾಗಿದ್ರೆ ಆಧಾರ್ ಕಾರ್ಡ್​ ಹುದ್ದೆಗಳಿಗೆ ಈಗಲೇ ಅರ್ಜಿ ಸಲ್ಲಿಸಿ-ಬೆಂಗಳೂರಿನಲ್ಲಿ ಕೆಲಸ

Aadhar Card Jobs: ಡಿಗ್ರಿ ಪಾಸಾಗಿದ್ರೆ ಆಧಾರ್ ಕಾರ್ಡ್​ ಹುದ್ದೆಗಳಿಗೆ ಈಗಲೇ ಅರ್ಜಿ ಸಲ್ಲಿಸಿ-ಬೆಂಗಳೂರಿನಲ್ಲಿ ಕೆಲಸ

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ(Bengaluru) ಪೋಸ್ಟಿಂಗ್ ನೀಡಲಾಗುತ್ತದೆ. ಆಸಕ್ತರು ಜನವರಿ 08, 2023ರೊಳಗೆ ಆಫ್​ಲೈನ್​ ಮೂಲಕ ಅರ್ಜಿ ಸಲ್ಲಿಸಿ.

  • Share this:

    UIDAI Recruitment 2022: ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ(Unique Identification Authority of India) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 10 ಅಸಿಸ್ಟೆಂಟ್ ಟೆಕ್ನಿಕಲ್ ಆಫೀಸರ್, ಡೆಪ್ಯುಟಿ ಡೈರೆಕ್ಟರ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಈಗಲೇ ಅರ್ಜಿ ಹಾಕಿ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ(Bengaluru) ಪೋಸ್ಟಿಂಗ್ ನೀಡಲಾಗುತ್ತದೆ. ಆಸಕ್ತರು ಜನವರಿ 08, 2023ರೊಳಗೆ ಆಫ್​ಲೈನ್​ ಮೂಲಕ ಅರ್ಜಿ ಸಲ್ಲಿಸಿ.


    ಅರ್ಜಿ ಸಲ್ಲಿಸುವ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.

    ಸಂಸ್ಥೆಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ
    ಹುದ್ದೆಯ ಹೆಸರುಅಸಿಸ್ಟೆಂಟ್ ಟೆಕ್ನಿಕಲ್ ಆಫೀಸರ್, ಡೆಪ್ಯುಟಿ ಡೈರೆಕ್ಟರ್
    ಒಟ್ಟು ಹುದ್ದೆ10
    ವೇತನನಿಯಮಾನುಸಾರ
    ಉದ್ಯೋಗದ ಸ್ಥಳಬೆಂಗಳೂರು


    ಹುದ್ದೆಯ ಮಾಹಿತಿ:
    ಡೆಪ್ಯುಟಿ ಡೈರೆಕ್ಟರ್ -2
    ಟೆಕ್ನಿಕಲ್ ಆಫೀಸರ್- 3
    ಅಸಿಸ್ಟೆಂಟ್ ಟೆಕ್ನಿಕಲ್ ಆಫೀಸರ್- 5


    ವಿದ್ಯಾರ್ಹತೆ ಏನಿರಬೇಕು?
    ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಎಂಜಿನಿಯರಿಂಗ್/ ಟೆಕ್ನಾಲಜಿಯಲ್ಲಿ ಪದವಿ ಪೂರ್ಣಗೊಳಿಸಿರಬೇಕು. ಸ್ನಾತಕೋತ್ತರ ಪದವಿ ಪಡೆದಿರಬೇಕು.


    ವಯೋಮಿತಿ ಎಷ್ಟಿರಬೇಕು?
    ಅಭ್ಯರ್ಥಿಗಳ ಗರಿಷ್ಠ ವಯಸ್ಸು ಜನವರಿ 8, 2023ಕ್ಕೆ ಗರಿಷ್ಠ 56 ವರ್ಷ ಮೀರಿರಬಾರದು.


    ಇದನ್ನೂ ಓದಿ: Teaching Jobs: ಗುಲಬರ್ಗಾ ವಿಶ್ವವಿದ್ಯಾಲಯದಲ್ಲಿ 53 ಅತಿಥಿ ಉಪನ್ಯಾಸಕ ಹುದ್ದೆಗಳಿಗೆ ಅರ್ಜಿ ಆಹ್ವಾನ


    ಆಯ್ಕೆ ಪ್ರಕ್ರಿಯೆ ಹೇಗೆ ನಡೆಯುತ್ತೆ?


    ಲಿಖಿತ ಪರೀಕ್ಷೆ
    ಸಂದರ್ಶನ


    ಅರ್ಜಿ ಹಾಕೋದು ಹೇಗೆ?
    ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಪೋಸ್ಟ್ ಮುಖಾಂತರ ಕಳುಹಿಸಬೇಕು.


    ನಿರ್ದೇಶಕರು (HR),
    ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ (UIDAI)
    ಆಧಾರ್ ಕಾಂಪ್ಲೆಕ್ಸ್​
    NTI ಲೇಔಟ್,
    ಟಾಟಾ ನಗರ
    ಕೊಡಿಗೇಹಳ್ಳಿ
    ಟೆಕ್ನಾಲಜಿ ಸೆಂಟರ್
    ಬೆಂಗಳೂರು- 560092


    ಪ್ರಮುಖ ದಿನಾಂಕಗಳು:
    ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 23/11/2022
    ಆರ್ಜಿ ಸಲ್ಲಿಸಲು ಕೊನೆ ದಿನ: 08/01/2023

    Published by:Latha CG
    First published: