Agriculture Insurance Company of India Recruitment 2023: ಭಾರತೀಯ ಕೃಷಿ ವಿಮಾ ಕಂಪನಿ ನಿಯಮಿತ(Agriculture Insurance Company of India Limited) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 40 ಮ್ಯಾನೇಜ್ಮೆಂಟ್ ಟ್ರೈನಿ(Management Trainee) ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಏಪ್ರಿಲ್ 6, 2023 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ(Last Date). ಅಭ್ಯರ್ಥಿಗಳು ಆನ್ಲೈನ್ (Online) ಮೂಲಕ ಅರ್ಜಿ ಸಲ್ಲಿಸಬೇಕು. ಕೇಂದ್ರ ಸರ್ಕಾರದ ಉದ್ಯೋಗ ಹುಡುಕುತ್ತಿರುವವರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ.
ಅಭ್ಯರ್ಥಿಗಳು ಅರ್ಜಿ ಹಾಕುವ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
ಸಂಸ್ಥೆ | ಭಾರತೀಯ ಕೃಷಿ ವಿಮಾ ಕಂಪನಿ ನಿಯಮಿತ |
ಹುದ್ದೆ | ಮ್ಯಾನೇಜ್ಮೆಂಟ್ ಟ್ರೈನಿ |
ಒಟ್ಟು ಹುದ್ದೆ | 40 |
ವಿದ್ಯಾರ್ಹತೆ | ಕಾನೂನು ಪದವಿ, ಎಂಬಿಎ, ಸ್ನಾತಕೋತ್ತರ ಪದವಿ |
ವೇತನ | ಮಾಸಿಕ ₹ 60,000 |
ಉದ್ಯೋಗದ ಸ್ಥಳ | ಭಾರತ |
ಅರ್ಜಿ ಸಲ್ಲಿಸಲು ಕೊನೆಯ ದಿನ | ಏಪ್ರಿಲ್ 6, 2023 |
ಇದನ್ನೂ ಓದಿ: JOBS: ಜಿಲ್ಲಾಧಿಕಾರಿಗಳ ಕಾರ್ಯಾಲಯ ರಾಯಚೂರಿನಲ್ಲಿ ಕೆಲಸ ಖಾಲಿ ಇದೆ- ಈಗಲೇ ಅರ್ಜಿ ಹಾಕಿ
ವಯೋಮಿತಿ:
ಭಾರತೀಯ ಕೃಷಿ ವಿಮಾ ಕಂಪನಿ ನಿಯಮಿತ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಮಾರ್ಚ್ 1, 2023ಕ್ಕೆ ಕನಿಷ್ಠ 21 ವರ್ಷ ಮತ್ತು ಗರಿಷ್ಠ 30 ವರ್ಷ ಮೀರಿರಬಾರದು.
ವಯೋಮಿತಿ ಸಡಿಲಿಕೆ:
ಒಬಿಸಿ (NCL) ಅಭ್ಯರ್ಥಿಗಳು- 3 ವರ್ಷ
SC/ST ಅಭ್ಯರ್ಥಿಗಳು- 5 ವರ್ಷ
PWBD ಅಭ್ಯರ್ಥಿಗಳು- 10 ವರ್ಷ
ಉದ್ಯೋಗದ ಸ್ಥಳ:
ಭಾರತದಲ್ಲಿ ಎಲ್ಲಿ ಬೇಕಾದರೂ
ವೇತನ:
ಮಾಸಿಕ ₹60,000
ಇದನ್ನೂ ಓದಿ: KITS Recruitment 2023: ಕರ್ನಾಟಕ ಸರ್ಕಾರ ಅರ್ಜಿ ಆಹ್ವಾನಿಸಿರುವ 7 ಹುದ್ದೆಗಳಿಗೆ ಈಗಲೇ ಅಪ್ಲೈ ಮಾಡಿ- 45 ಸಾವಿರ ಸಂಬಳ
ಅರ್ಜಿ ಶುಲ್ಕ:
SC/ST/PWBD ಅಭ್ಯರ್ಥಿಗಳು-200 ರೂ.
ಉಳಿದ ಎಲ್ಲಾ ಅಭ್ಯರ್ಥಿಗಳು- 1000 ರೂ.
ಪಾವತಿಸುವ ಬಗೆ- ಆನ್ಲೈನ್
ಆಯ್ಕೆ ಪ್ರಕ್ರಿಯೆ:
ಆನ್ಲೈನ್ ಪರೀಕ್ಷೆ
ಸಂದರ್ಶನ
ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 22/03/2023
ಅರ್ಜಿ ಸಲ್ಲಿಸಲು ಕೊನೆಯ ದಿನ: ಏಪ್ರಿಲ್ 6, 2023
ಪರೀಕ್ಷೆ ನಡೆಯುವ ದಿನಾಂಕ: ಏಪ್ರಿಲ್/ ಮೇ 2023
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ