Air India Recruitment 2023: ಏರ್ ಇಂಡಿಯಾ ಲಿಮಿಟೆಡ್(Air India Limited) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅನೇಕ ಸೀನಿಯರ್ ಟ್ರೈನಿ ಪೈಲಟ್(Senior Trainee Pilot) ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಜನವರಿ 1, 2023 ಅರ್ಜಿ ಹಾಕಲು ಕೊನೆಯ ದಿನವಾಗಿದೆ. ಅಭ್ಯರ್ಥಿಗಳು ಆನ್ಲೈನ್(Online) ಮೂಲಕ ಅರ್ಜಿ ಸಲ್ಲಿಸಬೇಕು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರು, ಮುಂಬೈ ಹಾಗೂ ನವದೆಹಲಿಯಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಆಸಕ್ತರು ಈ ಕೂಡಲೇ ಅಪ್ಲೈ ಮಾಡಿ.
ಅರ್ಜಿ ಸಲ್ಲಿಸುವ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
ಸಂಸ್ಥೆ | ಏರ್ ಇಂಡಿಯಾ ಲಿಮಿಟೆಡ್ |
ಹುದ್ದೆ | ಸೀನಿಯರ್ ಟ್ರೈನಿ ಪೈಲಟ್ |
ವಿದ್ಯಾರ್ಹತೆ | ಪಿಯುಸಿ |
ವೇತನ | ನಿಯಮಾನುಸಾರ |
ಉದ್ಯೋಗದ ಸ್ಥಳ | ಬೆಂಗಳೂರು, ಮುಂಬೈ, ನವದೆಹಲಿ |
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 23/12/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 01/01/2023
ಲಿಖಿತ ಪರೀಕ್ಷೆ ನಡೆಯುವ ದಿನಾಂಕ: 08/01/2023
ಸಂದರ್ಶನ ಶುರುವಾಗುವ ದಿನಾಂಕ: ಜನವರಿ 2ನೇ ವಾರ, 2023
ಇದನ್ನೂ ಓದಿ: CRPF Recruitment 2023: ಪಿಯುಸಿ ಪಾಸಾದವ್ರಿಗೆ ಬಂಪರ್ ಉದ್ಯೋಗ-ತಿಂಗಳಿಗೆ 92,000 ಸಂಬಳ
ಶೈಕ್ಷಣಿಕ ಅರ್ಹತೆ:
ಏರ್ ಇಂಡಿಯಾ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಪಿಯುಸಿ ಪಾಸಾಗಿರಬೇಕು.
ವಯೋಮಿತಿ:
ಏರ್ ಇಂಡಿಯಾ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಗರಿಷ್ಠ 30 ವರ್ಷ ಮೀರಿರಬಾರದು.
ಅರ್ಜಿ ಶುಲ್ಕ:
ಶುಲ್ಕ ವಿನಾಯಿತಿ ನೀಡಲಾಗಿದೆ.
ವೇತನ:
ನಿಯಮಾನುಸಾರ ನೀಡಲಾಗುತ್ತದೆ.
ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಸಂದರ್ಶನ
ಇದನ್ನೂ ಓದಿ: Job Alert: ಸ್ಯಾಮ್ಸಂಗ್ ಕಂಪನಿಯಲ್ಲಿ ಉದ್ಯೋಗ ಮಾಡಲು ಆಸಕ್ತಿ ಇದ್ದವರು ಇಲ್ಲಿ ಅಪ್ಲೈ ಮಾಡಿ
ಉದ್ಯೋಗದ ಸ್ಥಳ:
ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರು, ಮುಂಬೈ ಹಾಗೂ ನವದೆಹಲಿಯಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ