Air India Recruitment 2023: ಏರ್ ಇಂಡಿಯಾ ಲಿಮಿಟೆಡ್ (Air India Limited) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 3 ಅಸಿಸ್ಟೆಂಟ್ ಬೇಸ್ ಮ್ಯಾನೇಜರ್ (Assistant Base Manager) ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಇದೇ ಮೇ 31, 2023 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ (Last Date). ಅಭ್ಯರ್ಥಿಗಳು ಆನ್ಲೈನ್ (Online) ಮೂಲಕ ಅರ್ಜಿ ಹಾಕಬೇಕು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ (Bengaluru) ಪೋಸ್ಟಿಂಗ್ ನೀಡಲಾಗುತ್ತದೆ.
ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
ಸಂಸ್ಥೆ | ಏರ್ ಇಂಡಿಯಾ ಲಿಮಿಟೆಡ್ |
ಹುದ್ದೆ | ಅಸಿಸ್ಟೆಂಟ್ ಬೇಸ್ ಮ್ಯಾನೇಜರ್ |
ಒಟ್ಟು ಹುದ್ದೆ | 3 |
ವಿದ್ಯಾರ್ಹತೆ | ಪದವಿ |
ವೇತನ | ನಿಗದಿಪಡಿಸಿಲ್ಲ |
ಉದ್ಯೋಗದ ಸ್ಥಳ | ಭಾರತ |
ಅರ್ಜಿ ಸಲ್ಲಿಸಲು ಕೊನೆಯ ದಿನ | ಮೇ 31, 2023 |
ಇದನ್ನೂ ಓದಿ: ITBP Jobs: ತಿಂಗಳಿಗೆ 81,000 ಸಂಬಳ- 10ನೇ ಕ್ಲಾಸ್ ಪಾಸಾದವ್ರಿಗೆ ಬಂಪರ್ ಉದ್ಯೋಗ
ವೇತನ:
ಅಭ್ಯರ್ಥಿಗಳಿಗೆ ವೇತನವನ್ನು ನಿಗದಿಪಡಿಸಿಲ್ಲ. ಅನುಭವ & ಕಾರ್ಯಕ್ಷಮತೆಯ ಆಧಾರದ ಮೇಲೆ ಸಂಬಳ ಕೊಡಲಾಗುತ್ತದೆ.
ಅರ್ಜಿ ಶುಲ್ಕ:
ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕ ಪಾವತಿಸುವಂತಿಲ್ಲ.
ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಸಂದರ್ಶನ
ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.
ಹೆಚ್ಚಿನ ವಿವರಗಳಿಗಾಗಿ ಅಧಿಕೃತ ನೋಟಿಫಿಕೇಶನ್ PDF ಇಲ್ಲಿದೆ- ಚೆಕ್ ಮಾಡಿ.
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 16/05/2023
ಅರ್ಜಿ ಸಲ್ಲಿಸಲು ಕೊನೆಯ ದಿನ: ಮೇ 31, 2023
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ