ASRB Recruitment 2023: ಕೃಷಿ ವಿಜ್ಞಾನಿಗಳ ನೇಮಕಾತಿ ಮಂಡಳಿಯು (Agricultural Scientist Recruitment Board) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 260 ಸೈಂಟಿಸ್ಟ್ (Scientist) ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಜುಲೈ 26, 2023 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಅಭ್ಯರ್ಥಿಗಳು ಆಫ್ಲೈನ್/ ಆನ್ಲೈನ್ (Offline/Online) ಮೂಲಕ ಅರ್ಜಿ ಹಾಕಬೇಕು. ಕೇಂದ್ರ ಸರ್ಕಾರದ ಉದ್ಯೋಗ ಹುಡುಕುತ್ತಿರುವವರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬಹುದು.
ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
ಸಂಸ್ಥೆ | ಕೃಷಿ ವಿಜ್ಞಾನಿಗಳ ನೇಮಕಾತಿ ಮಂಡಳಿ |
ಹುದ್ದೆ | ಸೈಂಟಿಸ್ಟ್ |
ಒಟ್ಟು ಹುದ್ದೆ | 60 |
ವಿದ್ಯಾರ್ಹತೆ | ಪಿಎಚ್. ಡಿ |
ವೇತನ | ಮಾಸಿಕ ₹ 57,700- 1,82,400 |
ಉದ್ಯೋಗದ ಸ್ಥಳ | ಭಾರತ |
ಅರ್ಜಿ ಸಲ್ಲಿಸಲು ಕೊನೆಯ ದಿನ | ಜುಲೈ 26, 2023 |
ಇದನ್ನೂ ಓದಿ: FPI Jobs: ಬೆಂಗಳೂರಿನ ಈ ಸರ್ಕಾರಿ ಕಚೇರಿಯಲ್ಲಿ ಕೆಲಸ ಖಾಲಿ ಇದೆ- ತಿಂಗಳಿಗೆ 60,000 ಸಂಬಳ
ವಯೋಮಿತಿ:
ಕೃಷಿ ವಿಜ್ಞಾನಿಗಳ ನೇಮಕಾತಿ ಮಂಡಳಿ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಜನವರಿ 1, 2023ಕ್ಕೆ ಕನಿಷ್ಠ 21 ವರ್ಷ ಮತ್ತು ಗರಿಷ್ಠ 35 ವರ್ಷ ಮೀರಿರಬಾರದು.
ವಯೋಮಿತಿ ಸಡಿಲಿಕೆ:
ಒಬಿಸಿ ಅಭ್ಯರ್ಥಿಗಳು- 3 ವರ್ಷ
SC/ST ಅಭ್ಯರ್ಥಿಗಳು- 5 ವರ್ಷ
PwBD ಅಭ್ಯರ್ಥಿಗಳು- 10 ವರ್ಷ
ಅರ್ಜಿ ಶುಲ್ಕ:
SC/ST/PwBD/ ಮಹಿಳಾ ಅಭ್ಯರ್ಥಿಗಳು- ಅರ್ಜಿ ಶುಲ್ಕ ಇಲ್ಲ
ಸಾಮಾನ್ಯ/EWS/OBC ಅಭ್ಯರ್ಥಿಗಳು- 800 ರೂ.
ಪಾವತಿಸುವ ಬಗೆ- ಆನ್ಲೈನ್
ಇದನ್ನೂ ಓದಿ: NIT ಕರ್ನಾಟಕದಲ್ಲಿ ಕೆಲಸ ಖಾಲಿ ಇದೆ- ಆಸಕ್ತರು ಇಂದೇ ಅರ್ಜಿ ಹಾಕಿ
ವೇತನ:
ಮಾಸಿಕ ₹ 57,700- 1,82,400
ಉದ್ಯೋಗದ ಸ್ಥಳ:
ಭಾರತದಲ್ಲಿ ಎಲ್ಲಿ ಬೇಕಾದರೂ
ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಸಂಶೋಧನಾ ಸಾಧನೆಗಳು
ವೈಯಕ್ತಿಕ ಸಂದರ್ಶನ
ಅರ್ಜಿ ಹಾಕೋದು ಹೇಗೆ?
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು.
ಪರೀಕ್ಷೆಗಳ ನಿಯಂತ್ರಕರು
ASRB
KAB-I
ಪುಸಾ
ನವದೆಹಲಿ-110012
ಅಥವಾ ars2023@asrb.org.in ಗೆ ಇಮೇಲ್ ಮಾಡಿ.
ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 05/07/2023
ಅರ್ಜಿ ಸಲ್ಲಿಸಲು ಕೊನೆಯ ದಿನ: ಜುಲೈ 26, 2023
ಹೆಚ್ಚಿನ ವಿವರಗಳಿಗಾಗಿ ದೂರವಾಣಿ ಸಂಖ್ಯೆ ದೂರವಾಣಿ ಸಂಖ್ಯೆ: 011-25846166/25848172 (Extn. 202) ಗೆ ಕರೆ ಮಾಡಿ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ