• ಹೋಂ
  • »
  • ನ್ಯೂಸ್
  • »
  • Jobs
  • »
  • BECIL Recruitment 2023: ಡಿಗ್ರಿ ಪಾಸಾಗಿದ್ರೆ ಇಲ್ಲಿದೆ ಬಂಪರ್ ಉದ್ಯೋಗ- ಜ.30ರೊಳಗೆ ಅರ್ಜಿ ಹಾಕಿ

BECIL Recruitment 2023: ಡಿಗ್ರಿ ಪಾಸಾಗಿದ್ರೆ ಇಲ್ಲಿದೆ ಬಂಪರ್ ಉದ್ಯೋಗ- ಜ.30ರೊಳಗೆ ಅರ್ಜಿ ಹಾಕಿ

BECIL Receuitment

BECIL Receuitment

ಜನವರಿ 25 ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದೆ. ಇದೇ ಜನವರಿ 30, 2023 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದ್ದು, ಅಭ್ಯರ್ಥಿಗಳು ಆನ್​ಲೈನ್(Online)​ ಮೂಲಕ ಅರ್ಜಿ ಸಲ್ಲಿಸಬೇಕು.

  • Share this:

BECIL Recruitment 2023: ಬ್ರಾಡ್​ಕಾಸ್ಟ್​ ಎಂಜಿನಿಯರಿಂಗ್​ ಕನ್ಸಲ್ಟೆಂಟ್ಸ್​ ಇಂಡಿಯಾ ಲಿಮಿಟೆಡ್(The Broadcast Engineering Consultants India Ltd)​ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 27 ಮಾನಿಟರಿಂಗ್ ಆಫೀಸರ್(Monitoring Officer) ಹುದ್ದೆಗಳು ಖಾಲಿ ಇದ್ದು, ಪದವಿ ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಜನವರಿ 25 ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದೆ. ಇದೇ ಜನವರಿ 30, 2023 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದ್ದು, ಅಭ್ಯರ್ಥಿಗಳು ಆನ್​ಲೈನ್(Online)​ ಮೂಲಕ ಅರ್ಜಿ ಸಲ್ಲಿಸಬೇಕು.


ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಅಧಿಕೃತ ವೆಬ್​ಸೈಟ್​​ becil.com ಗೆ ಭೇಟಿ ನೀಡಿ. ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.

ಸಂಸ್ಥೆಬ್ರಾಡ್​ಕಾಸ್ಟ್​ ಎಂಜಿನಿಯರಿಂಗ್​ ಕನ್ಸಲ್ಟೆಂಟ್ಸ್​ ಇಂಡಿಯಾ ಲಿಮಿಟೆಡ್
ಹುದ್ದೆಮಾನಿಟರಿಂಗ್ ಆಫೀಸರ್
ಒಟ್ಟು ಹುದ್ದೆ27
ವಿದ್ಯಾರ್ಹತೆಪದವಿ
ವೇತನಮಾಸಿಕ ₹ 28,635
ಉದ್ಯೋಗದ ಸ್ಥಳನವದೆಹಲಿ
ಅರ್ಜಿ ಸಲ್ಲಿಸಲು ಕೊನೆಯ ದಿನಜನವರಿ 30, 2023

ವಿದ್ಯಾರ್ಹತೆ:
ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಪದವಿ ಪೂರ್ಣಗೊಳಿಸಿರಬೇಕು.


ಉದ್ಯೋಗದ ಸ್ಥಳ:
ನವದೆಹಲಿ


ವೇತನ:
ಮಾಸಿಕ ₹ 28,635



ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ದಾಖಲಾತಿ ಪರಿಶೀಲನೆ
ಸಂದರ್ಶನ


ಅರ್ಜಿ ಸಲ್ಲಿಸುವುದು ಹೇಗೆ?
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಇ-ಮೇಲ್ ಐಡಿ hrsection@becil.com ಗೆ ಕಳುಹಿಸಿ.


ಇದನ್ನೂ ಓದಿ: UPSC Recruitment 2023: ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ ಕೇಂದ್ರ ಲೋಕಸೇವಾ ಆಯೋಗ


ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 25/01/2023
ಅರ್ಜಿ ಸಲ್ಲಿಸಲು ಕೊನೆಯ ದಿನ: ಜನವರಿ 30, 2023

Published by:Latha CG
First published: