• Home
  • »
  • News
  • »
  • jobs
  • »
  • BE/B.Tech ಪದವೀಧರರಿಗೆ ಬೆಂಗಳೂರಿನ BELನಲ್ಲಿದೆ ಕೆಲಸ- ತಿಂಗಳಿಗೆ 50,000 ಸಂಬಳ

BE/B.Tech ಪದವೀಧರರಿಗೆ ಬೆಂಗಳೂರಿನ BELನಲ್ಲಿದೆ ಕೆಲಸ- ತಿಂಗಳಿಗೆ 50,000 ಸಂಬಳ

BEL

BEL

ಒಟ್ಟು 14 ಪ್ರಾಜೆಕ್ಟ್​ ಎಂಜಿನಿಯರ್-I(Project Engineer) ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಜನವರಿ 7, 2023 ಕೊನೆಯ ದಿನವಾಗಿದೆ. ಆಸಕ್ತರು ಆಫ್​ಲೈನ್​​ ಮೂಲಕ ಈಗಲೇ ಅರ್ಜಿ ಸಲ್ಲಿಸಿ.

  • News18 Kannada
  • 2-MIN READ
  • Last Updated :
  • Bangalore [Bangalore], India
  • Share this:

    BEL Recruitment 2022: ಬೆಂಗಳೂರಿನಲ್ಲಿ ಕೆಲಸ ಹುಡುಕುತ್ತಿರುವ ಉದ್ಯೋಕಾಂಕ್ಷಿಗಳಿಗೆ ಇಲ್ಲೊಂದು ಸುವರ್ಣಾವಕಾಶವಿದೆ. ಭಾರತ್ ಎಲೆಕ್ಟ್ರಾನಿಕ್ಸ್​ ಲಿಮಿಟೆಡ್(Bharath Electronics Limited) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 14 ಪ್ರಾಜೆಕ್ಟ್​ ಎಂಜಿನಿಯರ್-I(Project Engineer) ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಜನವರಿ 7, 2023 ಕೊನೆಯ ದಿನವಾಗಿದೆ. ಆಸಕ್ತರು ಆಫ್​ಲೈನ್​​ ಮೂಲಕ ಈಗಲೇ ಅರ್ಜಿ ಸಲ್ಲಿಸಿ.


    ಅರ್ಜಿ ಸಲ್ಲಿಸುವ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.

    ಸಂಸ್ಥೆಭಾರತ್ ಎಲೆಕ್ಟ್ರಾನಿಕ್ಸ್​ ಲಿಮಿಟೆಡ್
    ಹುದ್ದೆಪ್ರಾಜೆಕ್ಟ್​ ಎಂಜಿನಿಯರ್-I
    ಒಟ್ಟು ಹುದ್ದೆ14
    ವೇತನತಿಂಗಳಿಗೆ 40,000-50,000
    ಉದ್ಯೋಗದ ಸ್ಥಳಬೆಂಗಳೂರು

    ವಿದ್ಯಾರ್ಹತೆ:
    ಭಾರತ್ ಎಲೆಕ್ಟ್ರಾನಿಕ್ಸ್​ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಎಲೆಕ್ಟ್ರಾನಿಕ್ಸ್/ಎಲೆಕ್ಟ್ರಾನಿಕ್ಸ್ ಮತ್ತು ಸಂವಹನ/ಎಲೆಕ್ಟ್ರಾನಿಕ್ಸ್ ಮತ್ತು ದೂರಸಂಪರ್ಕ/ಸಂವಹನ/ದೂರಸಂಪರ್ಕ, ಮೆಕ್ಯಾನಿಕಲ್, ಕೆಮಿಕಲ್ ಇಂಜಿನಿಯರಿಂಗ್​ನಲ್ಲಿ ಬಿಇ/ಬಿ.ಟೆಕ್ ಪೂರ್ಣಗೊಳಿಸಿರಬೇಕು.


    ವಯೋಮಿತಿ:
    ಭಾರತ್ ಎಲೆಕ್ಟ್ರಾನಿಕ್ಸ್​ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಡಿಸೆಂಬರ್ 1, 2022ಕ್ಕೆ ಗರಿಷ್ಠ 32 ವರ್ಷ ಮೀರಿರಬಾರದು.


    ಇದನ್ನೂ ಓದಿ: Spices Board Recruitment 2022: ಮಸಾಲೆ ಮಂಡಳಿಯಲ್ಲಿ ಡಿಗ್ರಿ ಪಾಸಾದವರಿಗೆ ಕೆಲಸ-25,000 ಸಂಬಳ- ಸಂದರ್ಶನ ಮಾತ್ರ


    ವಯೋಮಿತಿ ಸಡಿಲಿಕೆ:
    ಒಬಿಸಿ ಅಭ್ಯರ್ಥಿಗಳು- 3 ವರ್ಷ
    ಎಸ್​​ಸಿ/ಎಸ್​ಟಿ ಅಭ್ಯರ್ಥಿಗಳು- 5 ವರ್ಷ
    PWD ಅಭ್ಯರ್ಥಿಗಳು-10 ವರ್ಷ


    ವೇತನ:
    ಭಾರತ್ ಎಲೆಕ್ಟ್ರಾನಿಕ್ಸ್​ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಪ್ರಾಜೆಕ್ಟ್​ ಎಂಜಿನಿಯರ್-I ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ತಿಂಗಳಿಗೆ 40,000-50,000 ಸಂಬಳ ಕೊಡಲಾಗುತ್ತದೆ.


    ಅರ್ಜಿ ಶುಲ್ಕ:
    ಎಸ್​​ಸಿ/ಎಸ್​ಟಿ/PWD ಅಭ್ಯರ್ಥಿಗಳು- ಅರ್ಜಿ ಶುಲ್ಕ ಇಲ್ಲ
    ಸಾಮಾನ್ಯ ಅಭ್ಯರ್ಥಿಗಳು- 472 ರೂ.
    ಅರ್ಜಿ ಪಾವತಿಸುವ ಬಗೆ- SBI ಕಲೆಕ್ಟ್​


    ಆಯ್ಕೆ ಪ್ರಕ್ರಿಯೆ:
    ಲಿಖಿತ ಪರೀಕ್ಷೆ
    ಸಂದರ್ಶನ


    ಅರ್ಜಿ ಸಲ್ಲಿಸುವ ಬಗೆ:
    ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು.


    DGM (HR/MR,MS&ADSN)
    ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್
    ಜಾಲಹಳ್ಳಿ, P.O.,
    ಬೆಂಗಳೂರು - 560013


    ಇದನ್ನೂ ಓದಿ: Post Office Jobs: 10ನೇ ತರಗತಿ ಪಾಸಾಗಿದ್ರೆ ಪೋಸ್ಟ್​ ಆಫೀಸ್​​ನಲ್ಲಿದೆ ಬಂಪರ್ ಉದ್ಯೋಗ-ಲಿಖಿತ ಪರೀಕ್ಷೆ ಇಲ್ಲ


    ಪ್ರಮುಖ ದಿನಾಂಕಗಳು:
    ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 20/12/2022
    ಅರ್ಜಿ ಸಲ್ಲಿಸಲು ಕೊನೆಯ ದಿನ: 07/01/2023

    Published by:Latha CG
    First published: