BEL Recruitment 2023: ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್(Bharat Electronics Limited) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 110 ಪ್ರಾಜೆಕ್ಟ್ ಎಂಜಿನಿಯರ್(Project Engineer) ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಇದೇ ಮಾರ್ಚ್ 17, 2023 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ (Last Date). ಅಭ್ಯರ್ಥಿಗಳು ಆನ್ಲೈನ್ (Online) ಮೂಲಕ ಅರ್ಜಿ ಸಲ್ಲಿಸಬೇಕು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರು (Bengaluru) ಮತ್ತು ಘಾಜಿಯಾಬಾದ್ನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.
ಅರ್ಜಿ ಸಲ್ಲಿಸುವ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
ಸಂಸ್ಥೆ | ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ |
ಹುದ್ದೆ | ಪ್ರಾಜೆಕ್ಟ್ ಎಂಜಿನಿಯರ್ |
ಒಟ್ಟು ಹುದ್ದೆ | 110 |
ವಿದ್ಯಾರ್ಹತೆ | ಬಿಇ/ಬಿ.ಟೆಕ್ |
ವೇತನ | ಮಾಸಿಕ ₹ 40,000-55,000 |
ಉದ್ಯೋಗದ ಸ್ಥಳ | ಬೆಂಗಳೂರು |
ಅರ್ಜಿ ಸಲ್ಲಿಸಲು ಕೊನೆಯ ದಿನ | ಮಾರ್ಚ್ 17, 2023 |
ವಯೋಮಿತಿ:
ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಫೆಬ್ರವರಿ 1, 2023ಕ್ಕೆ ಗರಿಷ್ಠ 32 ವರ್ಷ ಮೀರಿರಬಾರದು.
ವಯೋಮಿತಿ ಸಡಿಲಿಕೆ:
ಒಬಿಸಿ (NCL) ಅಭ್ಯರ್ಥಿಗಳು- 3 ವರ್ಷ
SC/ST ಅಭ್ಯರ್ಥಿಗಳು- 5 ವರ್ಷ
PWD ಅಭ್ಯರ್ಥಿಗಳು- 10 ವರ್ಷ
ಇದನ್ನೂ ಓದಿ: NIMHANS Recruitment 2023: ತಿಂಗಳಿಗೆ 67 ಸಾವಿರ ಸಂಬಳ- ಬೆಂಗಳೂರಿನಲ್ಲಿ ಕೆಲಸ
ವೇತನ:
ಮಾಸಿಕ ₹ 40,000-55,000
ಉದ್ಯೋಗದ ಸ್ಥಳ:
ಬೆಂಗಳೂರು, ಘಾಜಿಯಾಬಾದ್, ನವದೆಹಲಿ, ವಿಶಾಖಪಟ್ಟಣಂ
ಅರ್ಜಿ ಶುಲ್ಕ:
ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕ ಪಾವತಿಸುವಂತಿಲ್ಲ.
ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಸಂದರ್ಶನ
ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 03/03/2023
ಅರ್ಜಿ ಸಲ್ಲಿಸಲು ಕೊನೆಯ ದಿನ: ಮಾರ್ಚ್ 17, 2023
ಹೆಚ್ಚಿನ ವಿವರಗಳಿಗಾಗಿ ಅಭ್ಯರ್ಥಿಗಳು ದೂರವಾಣಿ ಸಂಖ್ಯೆ 080-22197160 ಗೆ ಕರೆ ಮಾಡಿ ಅಥವಾ ಇ-ಮೇಲ್ ಐಡಿ hrsoftware@bel.co.in ಗೆ ಸಂಪರ್ಕಿಸಿ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ