BEL Recruitment 2023: ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್(Bharat Electronics Limited) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 8 ಟ್ರೈನಿ ಎಂಜಿನಿಯರ್(Trainee Engineer) ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಇದೇ ಮಾರ್ಚ್ 22, 2023 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ (Last Date). ಅಭ್ಯರ್ಥಿಗಳು ಆಫ್ಲೈನ್ (Offline) ಮೂಲಕ ಅರ್ಜಿ ಸಲ್ಲಿಸಬೇಕು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರು (Bengaluru)ನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.
ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
ಸಂಸ್ಥೆ | ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ |
ಹುದ್ದೆ | ಟ್ರೈನಿ ಎಂಜಿನಿಯರ್ |
ಒಟ್ಟು ಹುದ್ದೆ | 8 |
ವಿದ್ಯಾರ್ಹತೆ | ಬಿಇ/ಬಿ.ಟೆಕ್, ಬಿಎಸ್ಸಿ |
ವೇತನ | ಮಾಸಿಕ ₹ 30,000-40,000 |
ಉದ್ಯೋಗದ ಸ್ಥಳ | ಬೆಂಗಳೂರು |
ಅರ್ಜಿ ಸಲ್ಲಿಸಲು ಕೊನೆಯ ದಿನ | ಮಾರ್ಚ್ 1, 2023 |
ವಯೋಮಿತಿ:
ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಮಾರ್ಚ್ 1, 2023ಕ್ಕೆ ಗರಿಷ್ಠ 28 ವರ್ಷ ಮೀರಿರಬಾರದು.
ವಯೋಮಿತಿ ಸಡಿಲಿಕೆ:
OBC (NCL) ಅಭ್ಯರ್ಥಿಗಳು- 3 ವರ್ಷ
SC/ST ಅಭ್ಯರ್ಥಿಗಳು- 5 ವರ್ಷ
PWB ಅಭ್ಯರ್ಥಿಗಳು- 10 ವರ್ಷ
ಇದನ್ನೂ ಓದಿ: Karnataka High Court: 10ನೇ ತರಗತಿ ಪಾಸಾಗಿದ್ರೆ ₹ 81,000 ಸಂಬಳ- ಹೈ ಕೋರ್ಟ್ನಲ್ಲಿ ಡ್ರೈವರ್ ಹುದ್ದೆಗಳು ಖಾಲಿ
ಅರ್ಜಿ ಶುಲ್ಕ:
SC/ST/PWD ಅಭ್ಯರ್ಥಿಗಳು- ಅರ್ಜಿ ಶುಲ್ಕ ಇಲ್ಲ
ಉಳಿದ ಎಲ್ಲಾ ಅಭ್ಯರ್ಥಿಗಳು- 150 ರೂ.
ಪಾವತಿಸುವ ಬಗೆ- SBI ಕಲೆಕ್ಟ್
ವೇತನ:
ಮಾಸಿಕ ₹ 30,000-40,000
ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಸಂದರ್ಶನ
ಅರ್ಜಿ ಸಲ್ಲಿಸುವುದು ಹೇಗೆ?
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು.
ಮ್ಯಾನೇಜರ್ HR (MS/HLS&SCB)
ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್
ಜಾಲಹಳ್ಳಿ ಪೋಸ್ಟ್
ಬೆಂಗಳೂರು - 560013
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 08/03/2023
ಅರ್ಜಿ ಸಲ್ಲಿಸಲು ಕೊನೆಯ ದಿನ: ಮಾರ್ಚ್ 22, 2023
ಹೆಚ್ಚಿನ ವಿವರಗಳಿಗಾಗಿ ದೂರವಾಣಿ ಸಂಖ್ಯೆ 080-22195629 ಗೆ ಕರೆ ಮಾಡಿ. ಅಥವಾ ಇ-ಮೇಲ್ ಐಡಿ rechr4042@bel.co.in ಗೆ ಸಂಪರ್ಕಿಸಿ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ