• ಹೋಂ
  • »
  • ನ್ಯೂಸ್
  • »
  • Jobs
  • »
  • BEL Recruitment 2023: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಿಸಿದ ಭಾರತ್​ ಎಲೆಕ್ಟ್ರಾನಿಕ್ಸ್ ಲಿಮಿಟೆಡ್​

BEL Recruitment 2023: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಿಸಿದ ಭಾರತ್​ ಎಲೆಕ್ಟ್ರಾನಿಕ್ಸ್ ಲಿಮಿಟೆಡ್​

BEL

BEL

ಈ ಮೊದಲು ಮಾರ್ಚ್ 22, 2023 ಅಂದರೆ ಇಂದು ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿತ್ತು (Last Date). ಆದರೆ ಈಗ ಆ ದಿನಾಂಕವನ್ನು ಮಾರ್ಚ್​ 31, 2023 ರವರೆಗೆ ವಿಸ್ತರಿಸಲಾಗಿದೆ.

  • News18 Kannada
  • 3-MIN READ
  • Last Updated :
  • Bangalore [Bangalore], India
  • Share this:

BEL Recruitment 2023: ಭಾರತ್ ಎಲೆಕ್ಟ್ರಾನಿಕ್ಸ್​ ಲಿಮಿಟೆಡ್(Bharat Electronics Limited) ಅರ್ಜಿ ಸಲ್ಲಿಕೆ ದಿನಾಂಕವನ್ನು ವಿಸ್ತರಿಸಿದೆ. ಒಟ್ಟು 8 ಟ್ರೈನಿ​ ಎಂಜಿನಿಯರ್(Trainee Engineer) ಹುದ್ದೆಗಳು ಖಾಲಿ ಇದ್ದು, ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿತ್ತು. ಈ ಮೊದಲು ಮಾರ್ಚ್ 22, 2023 ಅಂದರೆ ಇಂದು ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿತ್ತು (Last Date). ಆದರೆ ಈಗ ಆ ದಿನಾಂಕವನ್ನು ಮಾರ್ಚ್​ 31, 2023 ರವರೆಗೆ ವಿಸ್ತರಿಸಲಾಗಿದೆ. ಅಭ್ಯರ್ಥಿಗಳು ಆಫ್​​ಲೈನ್ (Offline) ಮೂಲಕ ಅರ್ಜಿ ಸಲ್ಲಿಸಬೇಕು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರು (Bengaluru)ನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.


ಅರ್ಜಿ ಸಲ್ಲಿಸುವ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.


ವಿದ್ಯಾರ್ಹತೆ:
ಭಾರತ್ ಎಲೆಕ್ಟ್ರಾನಿಕ್ಸ್​ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಕಂಪ್ಯೂಟರ್ ಸೈನ್ಸ್​/ ಕಂಪ್ಯೂಟರ್​ ಸೈನ್ಸ್ & ಎಂಜಿನಿಯರಿಂಗ್​​/ ಕಂಪ್ಯೂಟರ್ ಸೈನ್ಸ್​ ಎಂಜಿನಿಯರಿಂಗ್​​ನಲ್ಲಿ ಬಿಇ/ಬಿ.ಟೆಕ್, ಬಿಎಸ್ಸಿ ಪೂರ್ಣಗೊಳಿಸಿರಬೇಕು.


ವಯೋಮಿತಿ:
ಭಾರತ್ ಎಲೆಕ್ಟ್ರಾನಿಕ್ಸ್​ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಮಾರ್ಚ್ 1, 2023ಕ್ಕೆ ಗರಿಷ್ಠ 28 ವರ್ಷ ಮೀರಿರಬಾರದು.




ವಯೋಮಿತಿ ಸಡಿಲಿಕೆ:
OBC (NCL) ಅಭ್ಯರ್ಥಿಗಳು- 3 ವರ್ಷ
SC/ST ಅಭ್ಯರ್ಥಿಗಳು- 5 ವರ್ಷ
PWB ಅಭ್ಯರ್ಥಿಗಳು- 10 ವರ್ಷ


ಅರ್ಜಿ ಶುಲ್ಕ:
SC/ST/PWD ಅಭ್ಯರ್ಥಿಗಳು- ಅರ್ಜಿ ಶುಲ್ಕ ಇಲ್ಲ
ಉಳಿದ ಎಲ್ಲಾ ಅಭ್ಯರ್ಥಿಗಳು- 150 ರೂ.
ಪಾವತಿಸುವ ಬಗೆ- SBI ಕಲೆಕ್ಟ್​


ಇದನ್ನೂ ಓದಿ: JOBS: ಮೈಸೂರಿನಲ್ಲಿ ಅಸಿಸ್ಟೆಂಟ್ ಪ್ರೊಫೆಸರ್ ಹುದ್ದೆ ಖಾಲಿ ಇದೆ- ಮಾರ್ಚ್​​ 24ಕ್ಕೆ ಸಂದರ್ಶನ


ವೇತನ:
ಮಾಸಿಕ ₹ 30,000-40,000


ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಸಂದರ್ಶನ


ಅರ್ಜಿ ಸಲ್ಲಿಸುವುದು ಹೇಗೆ?
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು.


ಮ್ಯಾನೇಜರ್ HR (MS/HLS&SCB)
ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್
ಜಾಲಹಳ್ಳಿ ಪೋಸ್ಟ್
ಬೆಂಗಳೂರು - 560013


ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 08/03/2023
ಅರ್ಜಿ ಸಲ್ಲಿಸಲು ಕೊನೆಯ ದಿನ: ಮಾರ್ಚ್​ 31, 2023


ಇದನ್ನೂ ಓದಿ: Banking Jobs: ಸೆಂಟ್ರಲ್ ಬ್ಯಾಂಕ್​​ನಲ್ಲಿ 5000 ಅಪ್ರೆಂಟಿಸ್ ಹುದ್ದೆಗಳ ನೇಮಕ- ಡಿಗ್ರಿ ಪಾಸಾದವರು ಅಪ್ಲೈ ಮಾಡಿ


ಹೆಚ್ಚಿನ ವಿವರಗಳಿಗಾಗಿ ದೂರವಾಣಿ ಸಂಖ್ಯೆ 080-22195629 ಗೆ ಕರೆ ಮಾಡಿ. ಅಥವಾ ಇ-ಮೇಲ್ ಐಡಿ rechr4042@bel.co.in ಗೆ ಸಂಪರ್ಕಿಸಿ.

First published: