IISc Recruitment 2022: ಭಾರತೀಯ ವಿಜ್ಞಾನ ಸಂಸ್ಥೆ(Indian Institute of Science)ಯಲ್ಲಿ ಅನೇಕ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಈ ಕೂಡಲೇ ಅರ್ಜಿ ಸಲ್ಲಿಸಿ. ಖಾಲಿ ಇರುವ 2 ಇನ್ಸ್ಟ್ರಕ್ಟರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಬೆಂಗಳೂರಿ(Bengaluru)ನಲ್ಲಿ ವೃತ್ತಿ ಮಾಡ ಬಯಸುವವರು ಹಾಗೂ ಎಂ.ಟೆಕ್ ಹಾಗೂ ಪಿಎಚ್.ಡಿ ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಹಾಕಬಹುದು. ಡಿಸೆಂಬರ್ 15, 2022 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಅಭ್ಯರ್ಥಿಗಳು ಆನ್ಲೈನ್(Online) ಮೂಲಕ ಅರ್ಜಿ ಹಾಕಿ.
ಅರ್ಜಿ ಸಲ್ಲಿಸುವ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
ಸಂಸ್ಥೆ | ಭಾರತೀಯ ವಿಜ್ಞಾನ ಸಂಸ್ಥೆ |
ಹುದ್ದೆ | ಇನ್ಸ್ಟ್ರಕ್ಟರ್ |
ಒಟ್ಟು ಹುದ್ದೆ | 2 |
ಉದ್ಯೋಗದ ಸ್ಥಳ | ಬೆಂಗಳೂರು |
ವೇತನ | ಮಾಸಿಕ ₹ 25,000-74,000 |
ಶೈಕ್ಷಣಿಕ ಅರ್ಹತೆ:
ಭಾರತೀಯ ವಿಜ್ಞಾನ ಸಂಸ್ಥೆ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಕಂಪ್ಯೂಟರ್ ಸೈನ್ಸ್ನಲ್ಲಿ ಎಂ.ಟೆಕ್, ಪಿಎಚ್.ಡಿ ಪೂರ್ಣಗೊಳಿಸಿರಬೇಕು.
ವಯೋಮಿತಿ:
ಭಾರತೀಯ ವಿಜ್ಞಾನ ಸಂಸ್ಥೆ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಡಿಸೆಂಬರ್ 15, 2022ಕ್ಕೆ ಗರಿಷ್ಠ 35 ವರ್ಷ ಮೀರಿರಬಾರದು.
ಇದನ್ನೂ ಓದಿ: Job Alert: ಡಿಗ್ರಿ ಪಾಸಾಗಿದ್ರೆ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿದೆ ಉದ್ಯೋಗ
ಅರ್ಜಿ ಶುಲ್ಕ:
ಶುಲ್ಕ ವಿನಾಯಿತಿ ನೀಡಲಾಗಿದೆ.
ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಸಂದರ್ಶನ
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 25/11/2022
ಅರ್ಜಿ ಸಲ್ಲಿಸಲು ಕೊನೆ ದಿನ: 15/12/2022
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ