BHEL Recruitment 2023: ಭಾರತ್ ಹೆವಿ ಎಲೆಕ್ಟ್ರಾನಿಕ್ಸ್ ಲಿಮಿಟೆಡ್(Bharat Heavy Electronics Limited) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 10 ಪ್ರಾಜೆಕ್ಟ್ ಸೂಪರ್ವೈಸರ್ ಹುದ್ದೆಗಳು ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ(Apply) ಸಲ್ಲಿಸಬಹುದಾಗಿದೆ. ಅಭ್ಯರ್ಥಿಗಳು ಆಫ್ಲೈನ್(Offline) & ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಏಪ್ರಿಲ್ 29, 2023 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ.
ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ BHELನ ಅಧಿಕೃತ ವೆಬ್ಸೈಟ್ www.bhel.com ಗೆ ಭೇಟಿ ನೀಡಬಹುದು. ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
ಸಂಸ್ಥೆ | ಭಾರತ್ ಹೆವಿ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ |
ಹುದ್ದೆ | ಪ್ರಾಜೆಕ್ಟ್ ಸೂಪರ್ವೈಸರ್ |
ಒಟ್ಟು ಹುದ್ದೆ | 10 |
ವಿದ್ಯಾರ್ಹತೆ | ಡಿಪ್ಲೊಮಾ |
ವೇತನ | ಮಾಸಿಕ ₹ 43,550 |
ಉದ್ಯೋಗದ ಸ್ಥಳ | ಬೆಂಗಳೂರು |
ಅರ್ಜಿ ಸಲ್ಲಿಸಲು ಕೊನೆಯ ದಿನ | ಏಪ್ರಿಲ್ 29, 2023 |
ಇದನ್ನೂ ಓದಿ: Banking Jobs: ಸೆಂಟ್ರಲ್ ಬ್ಯಾಂಕ್ನಲ್ಲಿ 5000 ಹುದ್ದೆಗಳಿಗೆ ಅರ್ಜಿ ಹಾಕಿ- ನಾಳೆಯೇ ಕೊನೆ ದಿನ
ವಯೋಮಿತಿ:
ಭಾರತ್ ಹೆವಿ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಮಾರ್ಚ್ 31, 2023ಕ್ಕೆ ಗರಿಷ್ಠ 32 ವರ್ಷ ಮೀರಿರಬಾರದು.
ವಯೋಮಿತಿ ಸಡಿಲಿಕೆ:
OBC (NCL) ಅಭ್ಯರ್ಥಿಗಳು: 03 ವರ್ಷಗಳು
SC/ST ಅಭ್ಯರ್ಥಿಗಳು: 05 ವರ್ಷಗಳು
PwBD (ಸಾಮಾನ್ಯ) ಅಭ್ಯರ್ಥಿಗಳು: 10 ವರ್ಷಗಳು
PwBD [OBC (NCL)] ಅಭ್ಯರ್ಥಿಗಳು: 13 ವರ್ಷಗಳು
PwBD (SC/ST) ಅಭ್ಯರ್ಥಿಗಳು: 15 ವರ್ಷಗಳು
ಅರ್ಜಿ ಶುಲ್ಕ:
SC/ST/PwD ಅಭ್ಯರ್ಥಿಗಳು: ಇಲ್ಲ
ಸಾಮಾನ್ಯ/OBC ಮತ್ತು EWS ಅಭ್ಯರ್ಥಿಗಳು: ರೂ.200/-
ಪಾವತಿ ವಿಧಾನ: ಆನ್‌ಲೈನ್
ಇದನ್ನೂ ಓದಿ: SBI Recruitment 2023: ಭಾರತೀಯ ಸ್ಟೇಟ್ ಬ್ಯಾಂಕ್ನಲ್ಲಿ 1031 ಹುದ್ದೆಗಳಿಗೆ ಅರ್ಜಿ ಆಹ್ವಾನ
ವೇತನ:
ಮಾಸಿಕ ₹ 43,550
ಉದ್ಯೋಗದ ಸ್ಥಳ:
ಬೆಂಗಳೂರು
ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಸಂದರ್ಶನ
ಅರ್ಜಿ ಹಾಕೋದು ಹೇಗೆ?
ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.
ಅಭ್ಯರ್ಥಿಗಳು ಆಫ್ಲೈನ್ ಮೂಲಕವೂ ಅರ್ಜಿ ಸಲ್ಲಿಸಬಹುದು. ಅದಕ್ಕೆ ಮೇ 6, 2023 ಕೊನೆಯ ದಿನವಾಗಿದೆ. ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು.
AGM (HR)
ಭಾರತ್ ಹೆವಿ ಎಲೆಕ್ಟ್ರಿಕಲ್ಸ್ ಲಿಮಿಟೆಡ್
ಎಲೆಕ್ಟ್ರಾನಿಕ್ಸ್ ವಿಭಾಗ
P. B. No. 2606
ಮೈಸೂರು ರಸ್ತೆ
ಬೆಂಗಳೂರು-560026
ಪ್ರಮುಖ ದಿನಾಂಕಗಳು:
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 10-04-2023
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಏಪ್ರಿಲ್ 29, 2023
ಆನ್‌ಲೈನ್‌ನಲ್ಲಿ ಸಲ್ಲಿಸಿದ ಅರ್ಜಿಗಳ ಹಾರ್ಡ್ ಕಾಪಿಯ ಸ್ವೀಕೃತಿಯ ಕೊನೆಯ ದಿನಾಂಕ: ಮೇ 6,2023
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ