BEL-THALES ಸಿಸ್ಟಮ್ಸ್ ಲಿಮಿಟೆಡ್(BEL-THALES Systems Limited (BTSL)) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 3 ಅಕೌಂಟ್ಸ್ ಆಫೀಸರ್(Accounts Officer), ಡೆಪ್ಯುಟಿ ಎಂಜಿನಿಯರ್(Deputy Engineer) ಹುದ್ದೆಗಳು ಖಾಲಿ ಇವೆ. ಕೇಂದ್ರ ಸರ್ಕಾರದ ಉದ್ಯೋಗ ಅರಸುತ್ತಿರುವವರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬಹುದು. ಇದೇ ಡಿಸೆಂಬರ್ 28, 2022 ಅರ್ಜಿ ಸಲ್ಲಿಸಲು ಕೊನೆಯ ದಿನ(Last Date)ವಾಗಿದೆ. ಆಸಕ್ತರು ಈ ಕೂಡಲೇ ಆಫ್ಲೈನ್/ಪೋಸ್ಟ್ ಮುಖಾಂತರ ಅರ್ಜಿ ಹಾಕಿ.
ಅರ್ಜಿ ಸಲ್ಲಿಸುವ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
ಸಂಸ್ಥೆ | BEL-THALES ಸಿಸ್ಟಮ್ಸ್ ಲಿಮಿಟೆಡ್ |
ಹುದ್ದೆ | ಅಕೌಂಟ್ಸ್ ಆಫೀಸರ್, ಡೆಪ್ಯುಟಿ ಎಂಜಿನಿಯರ್ |
ಒಟ್ಟು ಹುದ್ದೆ | 3 |
ವೇತನ | ಮಾಸಿಕ ₹ 40,000-1,40,000 |
ಉದ್ಯೋಗದ ಸ್ಥಳ | ಭಾರತದಲ್ಲಿ ಎಲ್ಲಿ ಬೇಕಾದರೂ |
ಇದನ್ನೂ ಓದಿ: AAI Recruitment 2023: ವಿಮಾನ ನಿಲ್ದಾಣ ಪ್ರಾಧಿಕಾರದಲ್ಲಿ ಎಂಜಿನಿಯರಿಂಗ್ ಆದವರಿಗೆ ಉದ್ಯೋಗ, ತಿಂಗಳಿಗೆ 1.40 ಲಕ್ಷ ಸಂಬಳ
ಶೈಕ್ಷಣಿಕ ಅರ್ಹತೆ ಏನಿರಬೇಕು?
ಅಕೌಂಟ್ಸ್ ಆಫೀಸರ್- ಸಿಎ/ICWA, CMA
ಡೆಪ್ಯುಟಿ ಎಂಜಿನಿಯರ್ (ಪ್ರಾಡಕ್ಟ್ ಸಪೋರ್ಟ್) ಎಲೆಕ್ಟ್ರಾನಿಕ್ಸ್-ಎಲೆಕ್ಟ್ರಾನಿಕ್ಸ್/ ಎಲೆಕ್ಟ್ರಾನಿಕ್ಸ್ & ಕಮ್ಯುನಿಕೇಷನ್/ ಟೆಲಿಕಮ್ಯುನಿಕೇಷನ್/ ಎಲೆಕ್ಟ್ರಿಕಲ್ & ಎಲೆಕ್ಟ್ರಾನಿಕ್ಸ್ ವಿಭಾಗದಲ್ಲಿ ಬಿಇ/ಬಿ.ಟೆಕ್
ಡೆಪ್ಯುಟಿ ಎಂಜಿನಿಯರ್ (ಪ್ರಾಡಕ್ಟ್ ಸಪೋರ್ಟ್) ಮೆಕ್ಯಾನಿಕಲ್- ಮೆಕ್ಯಾನಿಕಲ್ ಎಂಜಿನಿಯರಿಂಗ್ನಲ್ಲಿ ಬಿಇ/ಬಿ.ಟೆಕ್
ವಯೋಮಿತಿ:
BEL-THALES ಸಿಸ್ಟಮ್ಸ್ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಡಿಸೆಂಬರ್ 1, 2022ಕ್ಕೆ ಗರಿಷ್ಠ 32 ವರ್ಷ ಮೀರಿರಬಾರದು.
ವಯೋಮಿತಿ ಸಡಿಲಿಕೆ:
ಒಬಿಸಿ ಅಭ್ಯರ್ಥಿಗಳು- 3 ವರ್ಷ
SC/ST ಅಭ್ಯರ್ಥಿಗಳು -5 ವರ್ಷ
PWD ಅಭ್ಯರ್ಥಿಗಳು- 10 ವರ್ಷ
ಅರ್ಜಿ ಶುಲ್ಕ ಎಷ್ಟು?
SC/ST/PWD ಅಭ್ಯರ್ಥಿಗಳು- ಅರ್ಜಿ ಶುಲ್ಕ ಇಲ್ಲ
ಉಳಿದ ಎಲ್ಲಾ ಅಭ್ಯರ್ಥಿಗಳಿಗೆ- 590 ರೂ.
ಅರ್ಜಿ ಶುಲ್ಕ ಪಾವತಿಸುವ ಬಗೆ- SBI ಕಲೆಕ್ಟ್
ಆಯ್ಕೆ ಪ್ರಕ್ರಿಯೆ ಹೇಗಿರುತ್ತೆ?
ಲಿಖಿತ ಪರೀಕ್ಷೆ
ಸಂದರ್ಶನ
ಇದನ್ನೂ ಓದಿ: Post Office Jobs: 8ನೇ ತರಗತಿ ಪಾಸಾಗಿದ್ರೆ ಅಂಚೆ ಇಲಾಖೆಯಲ್ಲಿದೆ ಉದ್ಯೋಗ, ತಿಂಗಳಿಗೆ 63,000 ಸಂಬಳ
ಅರ್ಜಿ ಸಲ್ಲಿಸುವುದು ಹೇಗೆ?
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು.
ಹೆಡ್-ಹ್ಯೂಮನ್ ರಿಸೋರ್ಸಸ್
BEL-THALES ಸಿಸ್ಟಮ್ಸ್ ಲಿಮಿಟೆಡ್
CNP ಏರಿಯಾ
BEL ಇಂಡಸ್ಟ್ರಿಯಲ್ ಎಸ್ಟೇಟ್
ಜಾಲಹಳ್ಳಿ ಪೋಸ್ಟ್
ಬೆಂಗಳೂರು-560013
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 08/12/2022
ಅರ್ಜಿ ಸಲ್ಲಿಸಲು ಕೊನೆ ದಿನ: 28/12/2022
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ