CBI Recruitment 2023: ಕೇಂದ್ರೀಯ ತನಿಖಾ ದಳ(Central Bureau of Investigation) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅನೇಕ ಕನ್ಸಲ್ಟೆಂಟ್(Consultant) ಹುದ್ದೆಗಳನ್ನು ಭರ್ತಿ ಮಾಡಲು ನೇಮಕಾತಿ ಪ್ರಕ್ರಿಯೆ ನಡೆಸುತ್ತಿದೆ. ಅರ್ಜಿ ಸಲ್ಲಿಸಲು ಜನವರಿ 19, 2023 ಕೊನೆಯ ದಿನವಾಗಿದೆ(Last Date). ಕನ್ಸಲ್ಟೆಂಟ್ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಕೇಂದ್ರ ಸರ್ಕಾರದ ಹುದ್ದೆ ಹುಡುಕುತ್ತಿರುವವರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ.
ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
ಸಂಸ್ಥೆ | ಕೇಂದ್ರೀಯ ತನಿಖಾ ದಳ |
ಹುದ್ದೆ | ಕನ್ಸಲ್ಟೆಂಟ್ |
ವೇತನ | ಮಾಸಿಕ ₹ 40,000 |
ಉದ್ಯೋಗದ ಸ್ಥಳ | ಬೆಂಗಳೂರು |
ಇದನ್ನೂ ಓದಿ: ಹಣಕಾಸು ಸಚಿವಾಲಯ ನೇಮಕಾತಿ- ಸೀನಿಯರ್ ಪ್ರೈವೇಟ್ ಸೆಕ್ರೆಟರಿ ಹುದ್ದೆಗೆ ಅರ್ಜಿ ಹಾಕಿ-1.50 ಲಕ್ಷ ಸಂಬಳ
ವೇತನ:
ಕೇಂದ್ರೀಯ ತನಿಖಾ ದಳ ನೇಮಕಾತಿ ಅಧಿಸೂಚನೆ ಪ್ರಕಾರ, ಕನ್ಸಲ್ಟೆಂಟ್ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ ₹ 40,000 ವೇತನ ನೀಡಲಾಗುತ್ತದೆ.
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 14/12/2022
ಅರ್ಜಿ ಸಲ್ಲಿಸಲು ಕೊನೆಯ ದಿನ: 19/01/2023
ಅರ್ಜಿ ಸಲ್ಲಿಸುವ ವಿಧಾನ:
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಪೋಸ್ಟ್ ಮೂಲಕ ಕಳುಹಿಸಬೇಕು.
ಶಾಖೆಯ ಮುಖ್ಯಸ್ಥರು
CBI, BS & FB, ನಂ. 36
ಬಳ್ಳಾರಿ ರಸ್ತೆ
ಗಂಗಾನಗರ
ಬೆಂಗಳೂರು-560032
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ