CeNS Recruitment 2023: ನ್ಯಾನೋ ಮತ್ತು ಸಾಫ್ಟ್ ಮ್ಯಾಟರ್ ಸೈನ್ಸಸ್ (Centre for Nano and Soft Matter Sciences) ಕೇಂದ್ರ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 1 ಸೈಂಟಿಸ್ಟ್ ಸಿ(Scientist C) ಹುದ್ದೆ ಖಾಲಿ ಇದ್ದು, ಆಸಕ್ತರು ಈಗಲೇ ಅಪ್ಲೈ ಮಾಡಿ. ಜನವರಿ 20, 2023 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ(Last Date). ಅಭ್ಯರ್ಥಿಗಳು ಆನ್ಲೈನ್(Online) ಮೂಲಕ ಅರ್ಜಿ ಸಲ್ಲಿಸಬೇಕು. ಆಯ್ಕೆಯಾಗುವ ಅಭ್ಯರ್ಥಿಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.
ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
ಸಂಸ್ಥೆ | ನ್ಯಾನೋ ಮತ್ತು ಸಾಫ್ಟ್ ಮ್ಯಾಟರ್ ಸೈನ್ಸಸ್ ಕೇಂದ್ರ |
ಹುದ್ದೆ | ಸೈಂಟಿಸ್ಟ್ ಸಿ |
ಒಟ್ಟು ಹುದ್ದೆ | 1 |
ವೇತನ | ಮಾಸಿಕ ₹ 15,600-39,100 |
ಉದ್ಯೋಗದ ಸ್ಥಳ | ಬೆಂಗಳೂರು |
ಇದನ್ನೂ ಓದಿ:UAS Raichur Recruitment 2023: ರಾಯಚೂರಿನಲ್ಲಿದೆ 54,000 ಸಂಬಳದ ಉದ್ಯೋಗ-ಜ.11ಕ್ಕೆ ಸಂದರ್ಶನ
ವಯೋಮಿತಿ:
ನ್ಯಾನೋ ಮತ್ತು ಸಾಫ್ಟ್ ಮ್ಯಾಟರ್ ಸೈನ್ಸಸ್ ಕೇಂದ್ರ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಜನವರಿ 20, 2023ಕ್ಕೆ ಗರಿಷ್ಠ 40 ವರ್ಷ ಮೀರಿರಬಾರದು. ಮೀಸಲಾತಿಗೆ ಅನುಗುಣವಾಗಿ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.
ಅರ್ಜಿ ಶುಲ್ಕ:
SC/ST/OBC/PWD/ಮಾಜಿ ಸೈನಿಕ/EWS & ಮಹಿಳಾ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ಇಲ್ಲ.
ಉಳಿದ ಎಲ್ಲಾ ಅಭ್ಯರ್ಥಿಗಳಿಗೆ 1,500 ರೂ.
ಪಾವತಿಸುವ ಬಗೆ- ಆನ್ಲೈನ್
ವೇತನ:
ನ್ಯಾನೋ ಮತ್ತು ಸಾಫ್ಟ್ ಮ್ಯಾಟರ್ ಸೈನ್ಸಸ್ ಕೇಂದ್ರ ನೇಮಕಾತಿ ಅಧಿಸೂಚನೆ ಪ್ರಕಾರ, ಸೈಂಟಿಸ್ಟ್ ಸಿ ಹುದ್ದೆಗೆ ಆಯ್ಕೆಯಾಗುವ ಅಭ್ಯರ್ಥಿಗೆ ಮಾಸಿಕ ₹ 15,600-39,100 ವರೆಗೆ ವೇತನ ಕೊಡಲಾಗುತ್ತದೆ.
ಉದ್ಯೋಗದ ಸ್ಥಳ:
ನ್ಯಾನೋ ಮತ್ತು ಸಾಫ್ಟ್ ಮ್ಯಾಟರ್ ಸೈನ್ಸಸ್ ಕೇಂದ್ರ ನೇಮಕಾತಿ ಅಧಿಸೂಚನೆ ಪ್ರಕಾರ, ಸೈಂಟಿಸ್ಟ್ ಸಿ ಹುದ್ದೆಗೆ ಆಯ್ಕೆಯಾಗುವ ಅಭ್ಯರ್ಥಿಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.
ಇದನ್ನೂ ಓದಿ: Government Job: ರಾಜ್ಯ ಸರ್ಕಾರದ ಈ ಹುದ್ದೆಗೆ ಅರ್ಜಿ ಹಾಕಲು ನಾಳೆಯೇ ಕೊನೆ ದಿನ
ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಸಂದರ್ಶನ
ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 30/12/2022
ಅರ್ಜಿ ಸಲ್ಲಿಸಲು ಕೊನೆಯ ದಿನ: 20/01/2023
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ