• Home
  • »
  • News
  • »
  • jobs
  • »
  • CFTRI Recruitment 2022: M.Sc ಆಗಿದ್ರೆ ಮೈಸೂರಿನ CFTRIನಲ್ಲಿದೆ ಉದ್ಯೋಗಾವಕಾಶ, ಅರ್ಜಿ ಹಾಕಲು ನಾಳೆಯೇ ಕೊನೆ ದಿನ

CFTRI Recruitment 2022: M.Sc ಆಗಿದ್ರೆ ಮೈಸೂರಿನ CFTRIನಲ್ಲಿದೆ ಉದ್ಯೋಗಾವಕಾಶ, ಅರ್ಜಿ ಹಾಕಲು ನಾಳೆಯೇ ಕೊನೆ ದಿನ

CFTRI

CFTRI

CFTRI Recruitment 2022: ಕೇಂದ್ರೀಯ ಆಹಾರ ತಾಂತ್ರಿಕ ಸಂಶೋಧನಾ ಸಂಸ್ಥೆ ನೇಮಕಾತಿ ಅಧಿಸೂಚನೆ ಪ್ರಕಾರ, ಪ್ರಾಜೆಕ್ಟ್ ಅಸೋಸಿಯೇಟ್-1 ಹುದ್ದೆಗೆ ಅರ್ಜಿ ಹಾಕುವ ಅಭ್ಯರ್ಥಿಯ ವಯಸ್ಸು ಡಿಸೆಂಬರ್ 7, 2022ಕ್ಕೆ ಗರಿಷ್ಠ 35 ವರ್ಷ ಮೀರಿರಬಾರದು.

  • News18 Kannada
  • 3-MIN READ
  • Last Updated :
  • Mysore, India
  • Share this:

    CFTRI Recruitment 2022: ಕೇಂದ್ರೀಯ ಆಹಾರ ತಾಂತ್ರಿಕ ಸಂಶೋಧನಾ ಸಂಸ್ಥೆಯಲ್ಲಿ(Central Food Technological Research Institute) ಒಂದು ಪ್ರಾಜೆಕ್ಟ್​ ಅಸೋಸಿಯೇಟ್-1(Project Associate-1) ಹುದ್ದೆ ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಯ್ಕೆಯಾಗುವ ಅಭ್ಯರ್ಥಿಗೆ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ(Mysuru) ಪೋಸ್ಟಿಂಗ್ ನೀಡಲಾಗುತ್ತದೆ. ಅರಮನೆ ನಗರಿಯಲ್ಲಿ ವೃತ್ತಿ ಮಾಡಬಯಸುವವರಿಗೆ ಇದೊಂದು ಸುವರ್ಣಾವಕಾಶವಾಗಿದೆ. ಅರ್ಜಿ ಸಲ್ಲಿಸಲು ನಾಳೆಯೇ(ಡಿಸೆಂಬರ್ 7) ಕೊನೆಯ ದಿನವಾಗಿದ್ದು, ಆಸಕ್ತರು ಈ ಕೂಡಲೇ ಅಪ್ಲಿಕೇಶನ್ ಹಾಕಿ. ಹೆಚ್ಚಿನ ಮಾಹಿತಿಗೆ ಅಧಿಕೃತ ವೆಬ್​ಸೈಟ್​ cftri.res.in ಭೇಟಿ ಕೊಡಿ.


    ಅರ್ಜಿ ಸಲ್ಲಿಸುವ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.

    ಸಂಸ್ಥೆಕೇಂದ್ರೀಯ ಆಹಾರ ತಾಂತ್ರಿಕ ಸಂಶೋಧನಾ ಸಂಸ್ಥೆ
    ಹುದ್ದೆಪ್ರಾಜೆಕ್ಟ್​ ಅಸೋಸಿಯೇಟ್
    ಒಟ್ಟು ಹುದ್ದೆ1
    ವೇತನಮಾಸಿಕ ₹ 25,000
    ಉದ್ಯೋಗದ ಸ್ಥಳಮೈಸೂರು


    ವಿದ್ಯಾರ್ಹತೆ:
    ಕೇಂದ್ರೀಯ ಆಹಾರ ತಾಂತ್ರಿಕ ಸಂಶೋಧನಾ ಸಂಸ್ಥೆ ನೇಮಕಾತಿ ಅಧಿಸೂಚನೆ ಪ್ರಕಾರ, ಪ್ರಾಜೆಕ್ಟ್ ಅಸೋಸಿಯೇಟ್-1 ಹುದ್ದೆಗೆ ಅರ್ಜಿ ಹಾಕುವ ಅಭ್ಯರ್ಥಿ ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಲ್ಲಿ ಕಡ್ಡಾಯವಾಗಿ ಎಂಎಸ್ಸಿ ಪೂರ್ಣಗೊಳಿಸಿರಬೇಕು.


    ಇದನ್ನೂ ಓದಿ: WAPCOS Recruitment 2022: ನಿಮ್ಮದು ಡಿಪ್ಲೋಮಾ, ಎಂಜಿನಿಯರಿಂಗ್ ಆಗಿದೆಯಾ? ಇಲ್ಲಿದೆ ನೋಡಿ ಬಂಪರ್ ಉದ್ಯೋಗ


    ವಯೋಮಿತಿ:
    ಕೇಂದ್ರೀಯ ಆಹಾರ ತಾಂತ್ರಿಕ ಸಂಶೋಧನಾ ಸಂಸ್ಥೆ ನೇಮಕಾತಿ ಅಧಿಸೂಚನೆ ಪ್ರಕಾರ, ಪ್ರಾಜೆಕ್ಟ್ ಅಸೋಸಿಯೇಟ್-1 ಹುದ್ದೆಗೆ ಅರ್ಜಿ ಹಾಕುವ ಅಭ್ಯರ್ಥಿಯ ವಯಸ್ಸು ಡಿಸೆಂಬರ್ 7, 2022ಕ್ಕೆ ಗರಿಷ್ಠ 35 ವರ್ಷ ಮೀರಿರಬಾರದು.


    ಅರ್ಜಿ ಶುಲ್ಕ:
    ಶುಲ್ಕ ವಿನಾಯಿತಿ ನೀಡಲಾಗಿದೆ.


    ಆಯ್ಕೆ ಪ್ರಕ್ರಿಯೆ:
    ಲಿಖಿತ ಪರೀಕ್ಷೆ
    ಸಂದರ್ಶನ


    ಅರ್ಜಿ ಸಲ್ಲಿಸುವುದು ಹೇಗೆ?
    ಅಭ್ಯರ್ಥಿಗಳು ಆನ್​ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.


    ಇದನ್ನೂ ಓದಿ: ESIC Karnataka Recruitment 2022: ನೌಕರರ ರಾಜ್ಯ ವಿಮಾ ನಿಗಮದಲ್ಲಿ ಸೀನಿಯರ್ ರೆಸಿಡೆಂಟ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ


    ಪ್ರಮುಖ ದಿನಾಂಕಗಳು:
    ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 05/12/2022
    ಅರ್ಜಿ ಸಲ್ಲಿಸಲು ಕೊನೆಯ ದಿನ: 07/12/2022

    Published by:Latha CG
    First published:

    ಸುದ್ದಿ 18ಕನ್ನಡ ಟ್ರೆಂಡಿಂಗ್

    ಮತ್ತಷ್ಟು ಓದು