CFTRI Recruitment 2023: ಕೇಂದ್ರೀಯ ಆಹಾರ ತಾಂತ್ರಿಕ ಸಂಶೋಧನಾ ಸಂಸ್ಥೆಯು(Central Food Technological Research Institute) ಖಾಲಿ ಇರುವ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ನಡೆಸುತ್ತಿದೆ. ಒಟ್ಟು ಒಂದು ಪ್ರಾಜೆಕ್ಟ್ ಅಸಿಸ್ಟೆಂಟ್ ಹುದ್ದೆ ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಹಾಕಬಹುದು. ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ(Mysuru) ಪೋಸ್ಟಿಂಗ್ ನೀಡಲಾಗುತ್ತದೆ. ಅರಮನೆ ನಗರಿಯಲ್ಲಿ ವೃತ್ತಿ ಮಾಡಬಯಸುವವರಿಗೆ ಇದೊಂದು ಸುವರ್ಣಾವಕಾಶವಾಗಿದೆ. ಅರ್ಜಿ ಸಲ್ಲಿಸಲು ಜನವರಿ 21, ಅಂದರೆ ನಾಳೆಯೇ ಕೊನೆಯ ದಿನವಾಗಿದ್ದು, ಆಸಕ್ತರು ಈ ಕೂಡಲೇ ಅಪ್ಲಿಕೇಶನ್ ಹಾಕಿ.
ಹೆಚ್ಚಿನ ಮಾಹಿತಿಗೆ ಅಧಿಕೃತ ವೆಬ್ಸೈಟ್ cftri.res.in ಗೆ ಭೇಟಿ ಕೊಡಿ. ಅಭ್ಯರ್ಥಿಗಳು ಆನ್ಲೈನ್(Online) ಮೂಲಕ ಅರ್ಜಿ ಹಾಕಬೇಕು.
ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
ಸಂಸ್ಥೆ | ಕೇಂದ್ರೀಯ ಆಹಾರ ತಾಂತ್ರಿಕ ಸಂಶೋಧನಾ ಸಂಸ್ಥೆ |
ಹುದ್ದೆ | ಪ್ರಾಜೆಕ್ಟ್ ಅಸಿಸ್ಟೆಂಟ್ |
ಒಟ್ಟು ಹುದ್ದೆ | 1 |
ವಿದ್ಯಾರ್ಹತೆ | ಎಂಎಸ್ಸಿ |
ವೇತನ | ಮಾಸಿಕ 15,000 ರೂ. |
ಉದ್ಯೋಗದ ಸ್ಥಳ | ಮೈಸೂರು |
ಅರ್ಜಿ ಸಲ್ಲಿಸಲು ಕೊನೆಯ ದಿನ | ಜನವರಿ 21, 2023 |
ಇದನ್ನೂ ಓದಿ : ಮೈಸೂರಿನ CFTRI ನಲ್ಲಿ ಪ್ರಾಜೆಕ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ- ನಾಳೆಯೊಳಗೆ Apply ಮಾಡಿ
ವಯೋಮಿತಿ:
ಕೇಂದ್ರೀಯ ಆಹಾರ ತಾಂತ್ರಿಕ ಸಂಶೋಧನಾ ಸಂಸ್ಥೆ ನೇಮಕಾತಿ ಅಧಿಸೂಚನೆ ಪ್ರಕಾರ, ಪ್ರಾಜೆಕ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಹಾಕುವ ಅಭ್ಯರ್ಥಿಯ ವಯಸ್ಸು ಜನವರಿ 21, 2023 ಕ್ಕೆ ಗರಿಷ್ಠ 50 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.
ಅರ್ಜಿ ಶುಲ್ಕ:
ಯಾವುದೇ ಅರ್ಜಿ ಶುಲ್ಕ ಇಲ್ಲ.
ವೇತನ:
ಮಾಸಿಕ 15,000 ರೂ.
ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಸಂದರ್ಶನ
ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 19/01/2023
ಅರ್ಜಿ ಸಲ್ಲಿಸಲು ಕೊನೆಯ ದಿನ: ಜನವರಿ 21, 2023
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ