CFTRI Recruitment 2023: ಕೇಂದ್ರೀಯ ಆಹಾರ ತಾಂತ್ರಿಕ ಸಂಶೋಧನಾ ಸಂಸ್ಥೆಯು(Central Food Technological Research Institute) ಖಾಲಿ ಇರುವ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ನಡೆಸುತ್ತಿದೆ. ಒಟ್ಟು ಒಂದು ಜೂನಿಯರ್ ರಿಸರ್ಚ್ ಫೆಲೋ (Junior Research Fellow-JRF) ಹುದ್ದೆ ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಹಾಕಬಹುದು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ(Mysuru) ಪೋಸ್ಟಿಂಗ್ ನೀಡಲಾಗುತ್ತದೆ. ಅರಮನೆ ನಗರಿಯಲ್ಲಿ ವೃತ್ತಿ ಮಾಡಬಯಸುವವರಿಗೆ ಇದೊಂದು ಸುವರ್ಣಾವಕಾಶವಾಗಿದೆ.
ಅರ್ಜಿ ಸಲ್ಲಿಸಲು ಫೆಬ್ರವರಿ 4, ಅಂದರೆ ನಾಳೆಯೇ ಕೊನೆಯ ದಿನವಾಗಿದ್ದು, ಆಸಕ್ತರು ಈ ಕೂಡಲೇ ಅಪ್ಲಿಕೇಶನ್ ಹಾಕಿ. ಹೆಚ್ಚಿನ ಮಾಹಿತಿಗೆ ಅಧಿಕೃತ ವೆಬ್ಸೈಟ್ cftri.res.in ಗೆ ಭೇಟಿ ಕೊಡಿ. ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಹಾಕಬೇಕು. ಅರ್ಜಿ ಸಲ್ಲಿಸುವ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
ಸಂಸ್ಥೆ | ಕೇಂದ್ರೀಯ ಆಹಾರ ತಾಂತ್ರಿಕ ಸಂಶೋಧನಾ ಸಂಸ್ಥೆ |
ಹುದ್ದೆ | ಜೂನಿಯರ್ ರಿಸರ್ಚ್ ಫೆಲೋ |
ಒಟ್ಟು ಹುದ್ದೆ | 1 |
ವಿದ್ಯಾರ್ಹತೆ | ಎಂಎಸ್ಸಿ |
ವೇತನ | ಮಾಸಿಕ ₹ 31,000 |
ಉದ್ಯೋಗದ ಸ್ಥಳ | ಮೈಸೂರು |
ಅರ್ಜಿ ಸಲ್ಲಿಸಲು ಕೊನೆಯ ದಿನ | ಫೆಬ್ರವರಿ 4, 2023 |
ಇದನ್ನೂ ಓದಿ: Police Jobs: 1410 ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ- SSLC ಪಾಸಾದವರು ಅಪ್ಲೈ ಮಾಡಿ
ವಯೋಮಿತಿ:
ಅಭ್ಯರ್ಥಿಗಳ ವಯಸ್ಸು ಫೆಬ್ರವರಿ 4, 2023ಕ್ಕೆ ಗರಿಷ್ಠ 28 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.
ಅರ್ಜಿ ಶುಲ್ಕ:
ಅರ್ಜಿದಾರರಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
ವೇತನ:
ಪ್ರಾಜೆಕ್ಟ್ ಅಸೋಸಿಯೇಟ್ ಹುದ್ದೆಗೆ ಆಯ್ಕೆಯಾಗುವ ಅಭ್ಯರ್ಥಿಗೆ ತಿಂಗಳಿಗೆ ₹ 31,000 ಸಂಬಳ ಕೊಡಲಾಗುತ್ತದೆ.
ಅರ್ಜಿ ಹಾಕುವುದು ಹೇಗೆ?
ಆನ್ಲೈನ್ ಮೂಲಕ ಅರ್ಜಿ ಹಾಕಲು ಇಲ್ಲಿ ಕ್ಲಿಕ್ ಮಾಡಿ.
ಆಯ್ಕೆ ಪ್ರಕ್ರಿಯೆ:
ಶಾರ್ಟ್ ಲಿಸ್ಟ್ ಮಾಡಿದ ಅಭ್ಯರ್ಥಿಗಳನ್ನು ಸಂದರ್ಶನಕ್ಕೆ ಕರೆಯಲಾಗುತ್ತದೆ. ಇ-ಮೇಲ್ ಮಾಡುವ ಮೂಲಕ ಇಂಟರ್ ವ್ಯೂ ನಡೆಯುವ ಸ್ಥಳವನ್ನು ತಿಳಿಸಲಾಗುವುದು.
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 02/02/2023
ಅರ್ಜಿ ಸಲ್ಲಿಸಲು ಕೊನೆಯ ದಿನ: ಫೆಬ್ರವರಿ 4, 2023
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ