CFTRI Recruitment 2023: ಮೈಸೂರಿನ ಕೇಂದ್ರೀಯ ಆಹಾರ ತಾಂತ್ರಿಕ ಸಂಶೋಧನಾ ಸಂಸ್ಥೆಯು(Central Food Technological Research Institute) ಖಾಲಿ ಇರುವ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ನಡೆಸುತ್ತಿದೆ. ಒಟ್ಟು ಒಂದು ಪ್ರಾಜೆಕ್ಟ್ ಅಸಿಸ್ಟೆಂಟ್ (Project Assistant) ಹುದ್ದೆ ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಹಾಕಬಹುದು. ಅರ್ಜಿ ಸಲ್ಲಿಸಲು ಏಪ್ರಿಲ್ 23, 2023 ಅಂದರೆ ನಾಳೆಯೇ ಕೊನೆಯ ದಿನವಾಗಿದ್ದು, ಆಸಕ್ತರು ಈ ಕೂಡಲೇ ಅಪ್ಲಿಕೇಶನ್ ಹಾಕಿ. ಅಭ್ಯರ್ಥಿಗಳು ಆನ್ಲೈನ್ (Online) ಮೂಲಕ ಅರ್ಜಿ ಹಾಕಬೇಕು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮೈಸೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.
ಹೆಚ್ಚಿನ ಮಾಹಿತಿಗೆ ಅಧಿಕೃತ ವೆಬ್ಸೈಟ್ cftri.res.inಭೇಟಿ ಕೊಡಿ. ಅರ್ಜಿ ಸಲ್ಲಿಸುವ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
ಸಂಸ್ಥೆ | ಕೇಂದ್ರೀಯ ಆಹಾರ ತಾಂತ್ರಿಕ ಸಂಶೋಧನಾ ಸಂಸ್ಥೆ |
ಹುದ್ದೆ | ಪ್ರಾಜೆಕ್ಟ್ ಅಸಿಸ್ಟೆಂಟ್ |
ಒಟ್ಟು ಹುದ್ದೆ | 1 |
ವಿದ್ಯಾರ್ಹತೆ | ಬಿ.ಟೆಕ್, ಬಿ.ಎಸ್ಸಿ, ಎಂಎಸ್ಸಿ |
ವೇತನ | ಮಾಸಿಕ ₹ 15,000 |
ಉದ್ಯೋಗದ ಸ್ಥಳ | ಮೈಸೂರು |
ಅರ್ಜಿ ಸಲ್ಲಿಸಲು ಕೊನೆಯ ದಿನ | ಏಪ್ರಿಲ್ 23, 2023 |
ಇದನ್ನೂ ಓದಿ: KHPT Recruitment 2023: ನಿರುದ್ಯೋಗಿಗಳಿಗೆ ಗುಡ್ ನ್ಯೂಸ್- ರಾಜ್ಯ ಸರ್ಕಾರದಿಂದ ಕೆಲಸಕ್ಕೆ ಅರ್ಜಿ ಆಹ್ವಾನ
ವಯೋಮಿತಿ:
ಕೇಂದ್ರೀಯ ಆಹಾರ ತಾಂತ್ರಿಕ ಸಂಶೋಧನಾ ಸಂಸ್ಥೆ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಏಪ್ರಿಲ್ 23, 2023ಕ್ಕೆ ಗರಿಷ್ಠ 50 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.
ವೇತನ:
ಮಾಸಿಕ ₹ 15,000
ಉದ್ಯೋಗದ ಸ್ಥಳ:
ಮೈಸೂರು
ಇದನ್ನೂ ಓದಿ: KPSC Recruitment 2023: 242 ಲೆಕ್ಕ ಸಹಾಯಕ ಹುದ್ದೆಗಳ ನೇಮಕಾತಿ- ಅರ್ಜಿ ಹಾಕಲು ಇನ್ನು ಎರಡೇ ದಿನ ಬಾಕಿ
ಅರ್ಜಿ ಶುಲ್ಕ:
ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕ ಪಾವತಿಸುವಂತಿಲ್ಲ.
ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಸಂದರ್ಶನ
ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 21/04/2023
ಅರ್ಜಿ ಸಲ್ಲಿಸಲು ಕೊನೆಯ ದಿನ: ಏಪ್ರಿಲ್ 23, 2023
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ